Wednesday, October 28, 2020
Home ಜಿಲ್ಲೆ ಶಿವಮೊಗ್ಗ ಶಾಸಕ ಹರತಾಳು ಹಾಲಪ್ಪ ಕೊರೊನಾದಿಂದ ಗುಣಮುಖ; ಆಸ್ಪತ್ರೆಯಿಂದ ಡಿಸ್ಚಾರ್ಜ್

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಶಾಸಕ ಹರತಾಳು ಹಾಲಪ್ಪ ಕೊರೊನಾದಿಂದ ಗುಣಮುಖ; ಆಸ್ಪತ್ರೆಯಿಂದ ಡಿಸ್ಚಾರ್ಜ್

 ಶಿವಮೊಗ್ಗ, ಆಗಸ್ಟ್ 11 : ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರದ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಕೋವಿಡ್ -19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಬೆಂಗಳೂರಿನ ಆಸ್ಪತ್ರೆಯಿಂದ ಮಂಗಳವಾರ ಅವರು ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಸೋಂಕಿನಿಂದ ಗುಣಮುಖರಾದ ಹರತಾಳು ಹಾಲಪ್ಪ ಬೆಂಗಳೂರು ನಗರದ ಶಿವಾನಂದ ಸರ್ಕಲ್ ಬಳಿಯ ಮಲ್ಲಿಗೆ ಆಸ್ಪತ್ರೆಯಿಂದ ಮಂಗಳವಾರ ಡಿಸ್ಚಾರ್ಜ್ ಆದರು. ಆಸ್ಪತ್ರೆಯ ಸಿಬ್ಬಂದಿ ಹೂಗುಚ್ಛಕೊಟ್ಟು ಅವರನ್ನು ಬೀಳ್ಕೊಟ್ಟರು.

ಎಂಎಸ್‌ಐಎಲ್ ಅಧ್ಯಕ್ಷರಾಗಿ ನೇಮಗೊಂಡಿದ್ದ ಹರತಾಳು ಹಾಲಪ್ಪ ಜುಲೈ 30ರಂದು ಬೆಂಗಳೂರಿನಲ್ಲಿ ಕಚೇರಿ ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡಿದ್ದರು. ಬಳಿಕ ಬೆಂಗಳೂರಿನಲ್ಲಿಯೇ ಇದ್ದ ಅವರಿಗೆ ಕೋವಿಡ್ ಸೋಂಕು ತಗುಲಿದ್ದು, ಆಗಸ್ಟ್ 4ರಂದು ಖಚಿತವಾಗಿತ್ತು.

ತಮ್ಮ ಫೇಸ್‌ ಬುಕ್ ಪುಟದಲ್ಲಿ “ನಾನು ಕೋವಿಡ್ – 19 ಪರೀಕ್ಷೆಗೆ ಒಳಗಾಗಿದ್ದು ಇದೀಗ ಬಂದ ವರದಿಯ ಪ್ರಕಾರ ನನಗೆ, ನನ್ನ ಪತ್ನಿ, ಕಾರು ಚಾಲಕ ಹಾಗೂ ಓರ್ವ ಸಿಬ್ಬಂದಿಗೆ ಪಾಸಿಟಿವ್ ಎಂದು ದೃಢಪಟ್ಟಿದೆ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇವೆ” ಎಂದು ಹರತಾಳು ಪೋಸ್ಟ್ ಹಾಕಿದ್ದರು.

ಆಗಸ್ಟ್ 4ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರು ಆಗಸ್ಟ್ 11ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಿಯಮಗಳ ಪ್ರಕಾರ ಇನ್ನು ಕೆಲವು ದಿನಗಳ ಕಾಲ ಅವರ ಹೋಂ ಕ್ವಾರಂಟೈನ್‌ನಲ್ಲಿರಬೇಕು.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಹ ಕೋವಿಡ್‌ನಿಂದ ಗುಣಮುಖರಾಗಿ ಸೋಮವಾರ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

TRENDING