Sunday, September 20, 2020
Home ಜಿಲ್ಲೆ ಶೀಲಹಳ್ಳಿ ಬಳಿ ಕೃಷ್ಣಾ ನದಿಗೆ ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ : ಎಂಪಿ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಶೀಲಹಳ್ಳಿ ಬಳಿ ಕೃಷ್ಣಾ ನದಿಗೆ ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ : ಎಂಪಿ

ಲಿಂಗಸಗೂರು : ಪ್ರತಿವರ್ಷ ಮಳೆಗಾಲದಲ್ಲಿ ಕೃಷ್ಣೆಯ ಪ್ರವಾಹದಿಂದ ತಾಲೂಕಿನ ನಾಲ್ಕಾರು ಗ್ರಾಮಗಳು ನಡುಗಡ್ಡೆಗಳಾಗಿ ಪರಿವರ್ತನೆಯಾಗಿ, ಸಾವಿರಾರು ಜನ ಸಂತ್ರಸ್ಥರಾಗುತ್ತಾರೆ. ಈ ಸಮಸ್ಯೆಯನ್ನು ಶಾಶ್ವತವಾಗಿ ಹೋಗಲಾಡಿಸಲು ಶೀಲಹಳ್ಳಿ ಬಳಿ 18 ಕೋಟಿ ರೂಪಾಯಿ ವೆಚ್ಚದಲ್ಲಿ ನದಿಗೆ ಮೇಲ್ಸೇತುವೆ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೃಷ್ಣೆಯಲ್ಲಿ ಪ್ರವಾಹ ಬಂದಾಗ ತಾಲೂಕಿನ ಕಡದರಗಡ್ಡಿ, ಯರಗೋಡಿ, ಯಳಗುಂದಿ, ಹಂಚಿನಾಳ ಸೇರಿ ನಾಲ್ಕಾರು ಗ್ರಾಮಗಳು ನಡುಗಡ್ಡೆಗಳಾಗಿ ಪರಿವರ್ತನೆಯಾಗುತ್ತವೆ. ಅಲ್ಲದೇ ಪ್ರತಿಬಾರಿ ಶೀಲಹಳ್ಳಿ ಸೇತುವೆ ಮುಳುಗಿದಾಗ ಸೇತುವೆಯು ಜಖಂ ಆಗುತ್ತದೆ. ಕಳೆದ ವರ್ಷ ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು ಹರಿಸಿದ್ದರ ಪರಿಣಾಮ ಜಲದುರ್ಗ ಸೇತುವೆಯೂ ಮುಳುಗಡೆಯಾಗಿ ಶಿಥಿಲವಾಗಿದೆ.

ನಾಲ್ಕಾರು ಗ್ರಾಮಗಳ ಸಾವಿರಾರು ಜನರು ಮಾತ್ರ ಮಳೆಗಾಲದಲ್ಲಿ ಬಾಹ್ಯ ಪ್ರಪಂಚದ ಸಂಪರ್ಕವನ್ನು ಕಳೆದುಕೊಳ್ಳುತ್ತಾರೆ. ಇದು ದಶಕಗಳಿಂದ ಬಂದ ಸಮಸ್ಯೆಯಾಗಿದೆ. ಈ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳಿಗೆ 18 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮುಖ್ಯಮಂತ್ರಿಗಳೂ ಸಂಬಂಧಿಸಿದ ಇಲಾಖೆಗೆ ಈ ಬಗ್ಗೆ ತುರ್ತಾಗಿ ಕ್ರಮಕ್ಕೆ ಮುಂದಾಗುವಂತೆ ಸೂಚನೆ ನೀಡಿದ್ದಾರೆ. ಮಳೆಗಾಲದ ಬಳಿಕ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ ಎಂದು ಸಂಸದರು ಹೇಳಿದರು.

ನಡುಗಡ್ಡೆಗಳಲ್ಲಿ ವಾಸಿಸುತ್ತಿರುವ ಜನರನ್ನು ಶಾಶ್ವತವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಅವರಿಗೆ ಇರಲು ಮನೆ ಹಾಗೂ ದುಡಿದುಣ್ಣಲು ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಸೂಕ್ತ ಕ್ರಮಕ್ಕೆ ಮುಂದಾಗುವುದಾಗಿ ಸಂಸದರು ಭರವಸೆ ನೀಡಿದರು.

TRENDING