Monday, September 21, 2020
Home ಅಂತರ್ ರಾಜ್ಯ ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್ ದಾಸ್ ರಿಗೆ ಕೊರೊನಾ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್ ದಾಸ್ ರಿಗೆ ಕೊರೊನಾ

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

ತೀವ್ರ ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ವೈದ್ಯಕೀಯ ತಪಾಸಣೆಗೆ ತೆರಳಿದ ಸಂದರ್ಭದಲ್ಲಿ ಮಹಾಂತ್ ನೃತ್ಯ ಗೋಪಾಲದಾಸ್ ರನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಸೋಂಕು ತಗಲಿರುವುದು ಪತ್ತೆಯಾಗಿದ್ದು, ವೈದ್ಯರ ತಂಡವು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ.

ಮದಾಂತ್ ಆಸ್ಪತ್ರೆಯ ವೈದ್ಯ ಡಾ.ತ್ರೆಹಾನ್ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿದ್ದು, ಗೋಪಾಲ್ ದಾಸ್ ಅವರಿಗೆ ತಕ್ಷಣ ಸೂಕ್ತ ರೀತಿಯ ಚಿಕಿತ್ಸೆ ನೀಡುವಂತೆ ತಿಳಿಸಿದ್ದಾರೆ. ಇದರ ಜೊತೆ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ರೀತಿ ಸೌಲಭ್ಯಗಳನ್ನು ಒದಗಿಸುವಂತೆ ಮಥುರಾ ಜಿಲ್ಲಾಡಳಿತಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ.

ರಾಮ ಮಂದಿರ ಭೂಮಿ ಪೂಜೆಯಲ್ಲಿ ಮಹತ್ವದ ಪಾತ್ರ:

ಕಳೆದ ಆಗಸ್ಟ್.05ರಂದು ಅಯೋಧ್ಯೆಯಲ್ಲಿ ನಡೆದ ರಾಮ ಮಂದಿರ ನಿರ್ಮಾಣ ಭೂಮಿ ಪೂಜೆ ಸಂದರ್ಭದಲ್ಲಿ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಮಹತ್ವದ ಪಾತ್ರ ವಹಿಸಿದ್ದರು. 100ಕ್ಕೂ ಹೆಚ್ಚು ಅತಿಥಿಗಳು ಭಾಗವಹಿಸಿದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ವಿಶೇಷ ಪೂಜೆಗಳ ಮುಂದಾಳತ್ವ ವಹಿಸಿಕೊಂಡಿದ್ದರು.

ಅಯೋಧ್ಯೆಯಲ್ಲಿ ಅನೇಕ ದೇವಾಲಯಗಳನ್ನು ನಿರ್ಮಿಸಿದ ಕೀರ್ತಿ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ಸಲ್ಲುತ್ತದೆ. ರಾಮಾಯಣ ಭವನ, ಶ್ರೀರಂಗನಾಥ ದೇವಸ್ಥಾನ ಮತ್ತು ಶ್ರೀಚಾರ್ ಧಾಮ್ ದೇವಾಲಯಗಳು ಸೇರಿವೆ. ದಶಕಗಳಿಂದಲೂ ರಾಮ ಜನ್ಮಭೂಮಿ ದೇವಾಲಯದ ಚಳುವಳಿಯೊಂದಿಗೆ ಸಕ್ರಿಯವಾಗಿ ಸಂಬಂಧ ಹೊಂದಿದ್ದಾರೆ.

TRENDING