Friday, September 25, 2020
Home ಬೆಂಗಳೂರು 'ಹತ್ತು ದಿನ ಯಾರೂ ನನ್ನ ಭೇಟಿಗೆ ಬರಬೇಡಿ': ಮಾಜಿ ಸಿಎಂ ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

‘ಹತ್ತು ದಿನ ಯಾರೂ ನನ್ನ ಭೇಟಿಗೆ ಬರಬೇಡಿ’: ಮಾಜಿ ಸಿಎಂ ಸಿದ್ದರಾಮಯ್ಯ

 ಬೆಂಗಳೂರು, ಆ. 13: ನಿನ್ನೆಯಷ್ಟೇ ತಮ್ಮ 73ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಮುಂದಿನ ಹತ್ತು ದಿನಗಳ ಕಾಲ ನಾನು ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಭೇಟಿ ಮಾಡಲು ಬರಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ನನ್ನಿಂದ ಬೇರೆಯವರಿಗೆ ತೊಂದರೆ ಆಗಬಾರದು, ಹೀಗಾಗಿ ಭೇಟಿಗೆ ಬರಬೇಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

ಸತತ 10 ದಿನಗಳ ಚಿಕತ್ಸೆ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಲಿದ್ದಾರೆ. ಜ್ವರದ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದಾಗ ಕೊರೊನಾ ವೈರಸ್ ಸೋಂಕಿರುವುದು ದೃಢಪಟ್ಟಿತ್ತು. ಹೀಗಾಗಿ ಕಳೆದ ಆಗಸ್ಟ್ 3 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಅವರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜ್ವರವನ್ನು ಹೊರತು ಪಡಿಸಿದರೆ, ಕೊರೊನಾ ವೈರಸ್ ಸೋಂಕಿನ ಯಾವುದೇ ಲಕ್ಷಣಗಳು ಸಿದ್ದರಾಮಯ್ಯ ಅವರಿಗೆ ಇರಲಿಲ್ಲ. ಆದರೂ ವಯಸ್ಸಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗುವಂತೆ ಪುತ್ರ, ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಹಾಗೂ ಇತರ ವೈದ್ಯರ ಸಲಹೆಯಂತೆ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ನಿನ್ನೆ ಮತ್ತೊಮ್ಮೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು ನೆಗಟಿವ್ ಎಂದು ವರದಿ ಬಂದಿದೆ. ಹೀಗಾಗಿ ಇವತ್ತು ಸಂಜೆ 6 ಗಂಟೆಗೆ ಸಿದ್ದರಾಮಯ್ಯ ಅವರು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಲಿದ್ದಾರೆ. ಮನೆಗೆ ತೆರಳಿದ ಬಳಿಕ ನಾಲ್ಕೈದು ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಲಿದ್ದಾರೆ. ಮುಂದಿನ 10 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರುವುದರಿಂದ ಕಾರ್ಯಕರ್ತರು ಹಾಗೂ ನಾಯಕರು ಭೇಟಿಗೆ ಮನೆಗೆ ಬರಬೇಡಿ ಸಿದ್ದರಾಮಯ್ಯ ಅವರು ಮನವಿ ಮಾಡಿಕೊಂಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಅವರು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಕೊರೊನಾವೈರಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

TRENDING