Sunday, September 20, 2020
Home ರಾಜ್ಯ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿ ‘ರಾಜೂಗೌಡ’ ಅಧಿಕಾರ ಸ್ವೀಕಾರ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿ ‘ರಾಜೂಗೌಡ’ ಅಧಿಕಾರ ಸ್ವೀಕಾರ

 ಯಾದಗಿರಿಸುರಪುರ ಶಾಸಕ ರಾಜೂಗೌಡ ಅವರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿ ಗುರುವಾರ ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.

‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಅವರು ನನ್ನ ಮೇಲೆ ವಿಶ್ವಾಸವಿಟ್ಟು ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ನಿಷ್ಠೆಯಿಂದ ಮಂಡಳಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತೇನೆ. ಮಂಡಳಿಯು ನೀರು ಸರಬರಾಜು ಮತ್ತು ಒಳಚರಂಡಿ ಯೋಜನೆಗಳನ್ನು ನಿರ್ವಹಿಸುತ್ತಿರುವ ಮಹತ್ತರ ಸಂಸ್ಥೆಯಾಗಿದ್ದು, ಗುರುತರವಾದ ಜವಾಬ್ದಾರಿಯನ್ನು ಹೊಂದಿದೆ. ಈ ಹೊಣೆಯನ್ನು ಸಮರ್ಪಕವಾಗಿ ನಿರ್ವಹಿಸಿ ನಗರ, ಪಟ್ಟಣ ಪ್ರದೇಶಗಳಲ್ಲಿ ನೀರು ಸರಬರಾಜು ಮತ್ತು ಒಳ ಚರಂಡಿ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು’ ಎಂದು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಮುಖ್ಯಮಂತ್ರಿಯವರು ವಿವಿಧ ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಆದರೆ, ರಾಜೂಗೌಡ ಸೇರಿದಂತೆ ಹಲವು ಶಾಸಕರು ನಮ್ಮ ಬದಲಾಗಿ ಪಕ್ಷದ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದರು. ಇನ್ನು ಕೆಲವರು ಮುಖ್ಯಮಂತ್ರಿಯವರ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದರು. ಇದೀಗ ಸುರಪುರ ಶಾಸಕ ರಾಜೂಗೌಡ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸ್ವೀಕರಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಶಹಾಪುರ ಮಾಜಿ ಶಾಸಕ ಗುರುಪಾಟೀಲ ಶಿರವಾಳ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಗುರು ಕಾಮಾ, ದೇವೇಂದ್ರನಾಥ ನಾದ, ವೆಂಕಟರೆಡ್ಡಿ ಅಬ್ಬೆತುಮಕೂರು ಇದ್ದರು.

ವರ್ಷ ಕಳೆದರೂ ಬಿಜೆಪಿ ಸರ್ಕಾರದಲ್ಲಿ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈಗ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಮೂಲಕ ಪರೋಕ್ಷವಾಗಿ ಸಚಿವ ಸ್ಥಾನದ ಆಸೆಯನ್ನು ಬಿಟ್ಟಂತಾಗಿದೆ ಎಂದು ಜಿಲ್ಲೆಯ ರಾಜಕೀಯ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ.

TRENDING