Wednesday, September 23, 2020
Home ದೇಶ 74ನೇ ಸ್ವಾತಂತ್ರ್ಯೋತ್ಸವ | ದೆಹಲಿ ಕೆಂಪುಕೋಟೆಯಲ್ಲಿ ವಿಶೇಷ ಬಿಗಿ ಭದ್ರತೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

74ನೇ ಸ್ವಾತಂತ್ರ್ಯೋತ್ಸವ | ದೆಹಲಿ ಕೆಂಪುಕೋಟೆಯಲ್ಲಿ ವಿಶೇಷ ಬಿಗಿ ಭದ್ರತೆ

ನವದೆಹಲಿ: 74ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ದೆಹಲಿಯ ಕೆಂಪುಕೋಟೆಯಲ್ಲಿ ಬಹು ಸ್ತರದ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅಂತರ ಕಾಯ್ದುಕೊಳ್ಳುವ ನಿಯಮ ಕಡ್ಡಾಯವಾಗಿ ಪಾಲಿಸಬೇಕಿದೆ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಎನ್‌ಎಸ್‌ಜಿ ಸ್ನೈಪರ್‌ಗಳು, ವಿಶೇಷ ಭದ್ರತಾ ಕಮಾಂಡೊಗಳನ್ನು ಕೆಂಪುಕೋಟೆ ಸುತ್ತ ನಿಯೋಜಿಸಲಾಗುತ್ತಿದೆ. ಕೆಂಪುಕೋಟೆ ಸುತ್ತ 300 ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಆಗಾಗ ಪರಿಶೀಲಿಸಲಾಗುತ್ತದೆ. ಸುಮಾರು 4,000 ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಅಂತರ ಕಾಯ್ದುಕೊಳ್ಳುವ ನಿಯಮ ಪಾಲಿಸಿಕೊಂಡೇ ಕಾರ್ಯನಿರ್ವಹಿಸಲಿದ್ದಾರೆ ಎಂದು ‍ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ರೈಲ್ವೆ ನಿಲ್ದಾಣಗಳ ಸುತ್ತಮುತ್ತವೂ ಬಂದೋಬಸ್ತ್ ಹೆಚ್ಚಿಸಲಾಗಿದೆ. ಕೆಂಪುಕೋಟೆ ಸಮೀಪದ ರೈಲು ಮಾರ್ಗಗಳಲ್ಲಿ ಬೆಳಿಗ್ಗೆ 6.45ರಿಂದ 8.45ರ ಅವಧಿಯಲ್ಲಿ ರೈಲು ಸಂಚಾರವಿದೆ. ಹೀಗಾಗಿ ಹಳಿಗಳ ಬಳಿಯೂ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುತ್ತದೆ ಎಂದು ಡಿಸಿಪಿ ಹರೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಕಾರ್ಯಕ್ರಮ ನಡೆಯುವ ಪ್ರದೇಶದ ಸುತ್ತಲಿನ ಪ್ರದೇಶಗಳ ಹೋಟೆಲ್‌ಗಳನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದೂ ಅವರು ಈಗಾಗಲೇ ತಿಳಿಸಿದ್ದಾರೆ.

ಕೋವಿಡ್-19 ಲಕ್ಷಣ ಹೊಂದಿದ್ದವರು ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಮತ್ತು ಕರ್ತವ್ಯಕ್ಕೆ ಹಾಜರಾಗದಂತೆ ಸೂಚಿಸಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ ಗುರುವಾರ ಬೆಳಿಗ್ಗೆ 7ರಿಂದ 9 ಗಂಟೆಯವರಿಗೆ ಭಾರತೀಯ ನೌಕಾಪಡೆ, ವಾಯುಪಡೆ ಮತ್ತು ಭೂಸೇನಾ ಪಡೆಗಳು ತಾಲೀಮು ನಡೆಸಿದ್ದವು.

TRENDING