Monday, September 28, 2020
Home ಜಿಲ್ಲೆ ಕೋಲಾರ ಕೋಲಾರ | ಜಿಲ್ಲೆಯಲ್ಲಿ ಮತ್ತೆ 71 ಮಂದಿಗೆ ಕೊರೊನಾ ಸೋಂಕು ಪತ್ತೆ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಕೋಲಾರ | ಜಿಲ್ಲೆಯಲ್ಲಿ ಮತ್ತೆ 71 ಮಂದಿಗೆ ಕೊರೊನಾ ಸೋಂಕು ಪತ್ತೆ

 ಕೋಲಾರಜಿಲ್ಲೆಯಲ್ಲಿ ಹೊಸದಾಗಿ 71 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಶನಿವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 1,172ಕ್ಕೆ ಏರಿಕೆಯಾಗಿದೆ.

ವಿಷಮಶೀತ ಜ್ವರದಿಂದ ಬಳಲುತ್ತಿರುವವರನ್ನು ಸೋಂಕು ಬೆಂಬಿಡದೆ ಕಾಡುತ್ತಿದ್ದು, ಆರೋಗ್ಯ ಇಲಾಖೆಯು ಸೋಂಕು ಹರಡುವಿಕೆ ತಡೆಗೆ ತೀವ್ರ ಕಸರತ್ತು ನಡೆಸಿದೆ. ಹೊಸದಾಗಿ ಪತ್ತೆಯಾಗಿರುವ ಸೋಂಕಿತರ ಪೈಕಿ ವಿಷಮ ಶೀತ ಜ್ವರವಿರುವ 49 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 20 ಮಂದಿಗೆ ಸೋಂಕು ತಗುಲಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 26 ಮಂದಿಗೆ ಸೋಂಕು ಬಂದಿದೆ. ವಿಷಮ ಶೀತ ಜ್ವರವಿರುವ 23 ಮಂದಿಗೆ, ಸೋಂಕಿತರ ಸಂಪರ್ಕದಿಂದ 3 ಮಂದಿಗೆ ಸೋಂಕು ಹರಡಿರುವುದು ಗೊತ್ತಾಗಿದೆ. ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ ಇಬ್ಬರಿಗೆ, ಸೋಂಕಿತರ ಸಂಪರ್ಕದಿಂದ 6 ಮಂದಿಗೆ ಹಾಗೂ ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ ಸೋಂಕು ತಗುಲಿದೆ.

ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 3 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ ಸೋಂಕು ಹರಡಿದೆ. ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 8 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ ಸೋಂಕು ಬಂದಿದೆ.

ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಪೀಡಿತ 9 ಮಂದಿಗೆ, ಸೋಂಕಿತರ ಸಂಪರ್ಕದಿಂದ 7 ಮಂದಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಶ್ರೀನಿವಾಸಪುರ ತಾಲ್ಲೂಕಿನಲ್ಲಿ 4 ಮಂದಿಗೆ ಸೋಂಕು ಹರಡಿದ್ದು, ಇವರೆಲ್ಲರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

TRENDING