Sunday, September 27, 2020
Home ದೆಹಲಿ ಕೊರೊನಾ ಆರ್ಭಟ: ದೆಹಲಿಯಲ್ಲಿ ಒಂದೇ ದಿನ 1,276 ಕೇಸ್ ಪತ್ತೆ, 1.5 ಲಕ್ಷ ದಾಟಿದ...

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಕೊರೊನಾ ಆರ್ಭಟ: ದೆಹಲಿಯಲ್ಲಿ ಒಂದೇ ದಿನ 1,276 ಕೇಸ್ ಪತ್ತೆ, 1.5 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ(.16): ಜಗತ್ತಿನ ಜಂಘಾಬಲವನ್ನೇ ಅಡಗಿಸಿರುವ ಕೊರೋನಾ ಮಹಾಮಾರಿ ರಾಷ್ಟ್ರ ರಾಜಧಾನಿ ದೆಹಲಿಯನ್ನೂ ದಿಗಿಲಿಗೀಡುಮಾಡಿದೆ. ದೆಹಲಿಯಲ್ಲಿ ಶನಿವಾರ 1,276 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ ಎಂದು ದೆಹಲಿ ಸರ್ಕಾರದ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ‌.

ಪ್ರತಿದಿನ ಸಂಜೆ ಕಳೆದ 24 ಗಂಟೆಯಲ್ಲಿ ಹೊಸದಾಗಿ ಕಂಡುಬರುವ ಕೊರೋನಾ ಪ್ರಕರಣಗಳನ್ನು ದೆಹಲಿ ಸರ್ಕಾರ ಬಿಡುಗಡೆ ಮಾಡುತ್ತಿದೆ‌. ಅದೇ ರೀತಿ ಶನಿವಾರ ಸಂಜೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಹೊಸದಾಗಿ 1,276 ಕೊರೋನಾ ಪಾಸಿಟಿವ್​​ ಕೇಸುಗಳು ಪತ್ತೆಯಾಗಿವೆ. ಇದರಿಂದ ದೆಹಲಿಯ ಕೊರೋನಾ ಪೀಡಿತರ ಸಂಖ್ಯೆ 1,51,928ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಮಹಾಮಾರಿ ಕೊರೋನಾ ಸೋಂಕಿಗೆ ಶನಿವಾರ 10 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ದೆಹಲಿಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 4,188ಕ್ಕೆ ಏರಿಕೆಯಾಗಿದೆ. ಜುಲೈ ತಿಂಗಳ ಆರಂಭದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕಿತ ಪ್ರಕರಣಗಳು ಕಂಡುಬರುತ್ತಿದ್ದವು. ಆಗಸ್ಟ್ ತಿಂಗಳಲ್ಲಿ ಪ್ರತಿದಿನ ಸುಮಾರು 1 ಸಾವಿರ ಪ್ರಕರಣಗಳು ಪತ್ತೆಯಾಗತೊಡಗಿವೆ.

ಶನಿವಾರ 1,143 ಜನ ಸೇರಿದಂತೆ ಈವರೆಗೆ 1,36,251 ಜನರು ಗುಣಮುಖರಾಗಿದ್ದಾರೆ. 11,489 ಕೊರೋನಾ ಪ್ರಕರಣಗಳು ಆಯಕ್ಟೀವ್ ಇವೆ ಎಂದು ದೆಹಲಿ ಸರ್ಕಾರದ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ‌.

ಇದಲ್ಲದೆ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಾ 25 ಲಕ್ಷ ದಾಟಿದೆ. ಆಗಸ್ಟ್ 14ರಂದು 65,002 ಪ್ರಕರಣಗಳು ವರದಿಯಾಗಿದ್ದು ದೇಶದ ಕೊರೋನಾ ಪೀಡಿತರ ಸಂಖ್ಯೆ 25,26,193ಕ್ಕೆ ಏರಿಕೆಯಾಗಿದೆ. 996 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 49 ಸಾವಿರದ ಗಡಿ‌ ದಾಟಿದ್ದು 49,036ಕ್ಕೆ ಏರಿಕೆಯಾಗಿದೆ.

ಈವರೆಗೆ ಕೊರೊನಾದಿಂದ ಗುಣ ಆದವರು 18,08,937 ಜನ ಮಾತ್ರ. ದೇಶದಲ್ಲಿ ಇನ್ನೂ 6,68,220 ಜನರಲ್ಲಿ ಕೊರೊನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ಬಿಡುಗಡೆ ಮಾಡಿದೆ.  

TRENDING