Tuesday, September 22, 2020
Home ಜಿಲ್ಲೆ ಬಾಗಲಕೋಟೆ ಮಲಪ್ರಭಾಕ್ಕೆ ಹೆಚ್ಚಿದ ನೀರು: ಬಾಗಲಕೋಟೆ ಜಿಲ್ಲೆಯ 34 ಹಳ್ಳಿಗಳಿಗೆ ಪ್ರವಾಹ ಭೀತಿ!

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಮಲಪ್ರಭಾಕ್ಕೆ ಹೆಚ್ಚಿದ ನೀರು: ಬಾಗಲಕೋಟೆ ಜಿಲ್ಲೆಯ 34 ಹಳ್ಳಿಗಳಿಗೆ ಪ್ರವಾಹ ಭೀತಿ!

ಬಾಗಲಕೋಟೆ: ಮಲಪ್ರಭಾ ನದಿಗೆ ನವಿಲು ತೀರ್ಥ ಡ್ಯಾಂನಿಂದ ಹೆಚ್ಚಿನ ನೀರು ಬಿಡಲಾಗುತ್ತಿದ್ದು, ಜಿಲ್ಲೆಯ ಬಾದಾಮಿ, ಗುಳೇದ ಗುಡ್ಡ ತಾಲೂಕಿನ ಸುಮಾರು 34 ಹಳ್ಳಿಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ.

ಮಲ್ರಪಭಾ ನದಿಗೆ ಶನಿವಾರ ಸಂಜೆ 10 ಸಾವಿರ ಕ್ಯೂಸೆಕ್ ನೀರು ಬಿಟ್ಟಿದ್ದರೆ, ರವಿವಾರ ಮಧ್ಯಾಹ್ನ 1ಕ್ಕೆ 15 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಶನಿವಾರ ಸಂಜೆ ಬಿಟ್ಟ ನೀರು, ರವಿವಾರ ಜಿಲ್ಲೆಗೆ ಪ್ರವೇಶಿಸಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಬಾದಾಮಿ ಮತ್ತು ಗುಳೇದಗುಡ್ಡ ತಾಲೂಕು ಆಡಳಿತದಿಂದ ಡಂಗುರ ಸಾರಿ, ಕಟ್ಟೆಚ್ಚರ ವಹಿಸಲಾಗಿದೆ.

ಕಳೆದ ವರ್ಷ ಮಲಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಬಂದಿದ್ದರಿಂದ ಸುಮಾರು 43 ಹಳ್ಳಿಗಳು ನೀರಿನಲ್ಲಿ ಮುಳುಗಿದ್ದವು. ಇದರಿಂದ ಲಕ್ಷಾಂತರ ಜನರು ತೀವ್ರ ಸಂಕಷ್ಟ ಎದುರಿಸಿದ್ದರು. ಈ ಭೀಕರ ಪ್ರವಾಹ ಮರೆಯುವ ಮುನ್ನವೇ, ಶನಿವಾರದಿಂದ ನದಿಗೆ ಹರಿದು ಬರುವ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಹೀಗಾಗಿ ನದಿ ಪಾತ್ರದ ಜನರು ಭೀತಿಯಲ್ಲೇ ಬದುಕುವ ಅನಿವಾರ್ಯತೆ ಎದುರಾಗಿದೆ.

 ಮಲಪ್ರಭಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಉಪ ವಿಭಾಗಾಧಿಕಾರಿ ಎಂ. ಗಂಗಪ್ಪ, ಬಾದಾಮಿ ತಹಶಿಲ್ದಾರ ಸುಹಾಸ ಇಂಗಳೆ ಮುಂತಾದ ಅಧಿಕಾರಿಗಳು ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಮದುರ್ಗ ತಾಲೂಕಿನ ಕಳಸ ಬಳಿ ಮಲಪ್ರಭಾ ನದಿ ಜಿಲ್ಲೆ ಪ್ರವೇಸಿಸುತ್ತಿದ್ದು, ಅಲ್ಲಿಂದ ಕೂಡಲಸಂಗಮ ಬಳಿ ಕೃಷ್ಣಾ ನದಿಯೊಂದಿಗೆ ವಿಲೀನಗೊಳ್ಳುವ ಮಧ್ಯೆ ಒಟ್ಟು 23 ಬ್ಯಾರೇಜ್‌ಗಳಿವೆ.

ಎಲ್ಲ ಬ್ಯಾರೇಜ್‌ಗಳ ಗೇಟ್ ತೆಗೆಯಲಾಗಿದ್ದು, ಅಪಾರ ಪ್ರಮಾಣದ ಮುಳ್ಳು ಕಂಠಿ ಹರಿದು ಬಂದು, ಬ್ಯಾರೇಜ್ ಗೇಟ್‌ನಡಿ ನೀರು ಹರಿದು ಹೋಗಲು ತೊಡಕಾಗಿತ್ತು. ಬಾದಾಮಿ ತಾಲೂಕು ಆಡಳಿತದಿಂದ ಎಲ್ಲ ಬ್ಯಾರೇಜ್ ಗೇಟ್‌ನಲ್ಲಿ ಸುಲುಕಿದ್ದ ಮುಳ್ಳು ಕಂಠಿ ತೆರವುಗೊಳಿಸಿ, ನೀರು ಸರಾಗವಾಗಿ ಹರಿದುಹೋಗುವಂತೆ ಮಾಡಲಾಗಿದೆ.

ಮೂರು ನದಿಯಲ್ಲೂ ಭೀತಿ: ಕಳೆದೊಂದು ವಾರದಿಂದ ತಗ್ಗಿದ್ದ ಪ್ರವಾಹ ಭೀತಿ, ರವಿವಾರ ಮತ್ತೆ ಎದುರಾಗಿದೆ. ಜಿಲ್ಲೆಯ ಕೃಷ್ಣಾ ನದಿಗೆ 1.50 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಇದು 2.15 ಲಕ್ಷ ದಾಟಿದರೆ ಕೆಲವು ಹಳ್ಳಿಗಳಿಗೆ ಪ್ರವಾಹ ಭೀತಿ ಶುರುವಾಗಲಿದೆ. ಸದ್ಯ ನದಿ ಪಾತ್ರದ ಭೂಮಿಗೆ ನೀರು ನುಗ್ಗಿದ್ದು, ಬೆಳೆಗಳು ನೀರಿನಲ್ಲಿ ನಿಂತಿವೆ.

ಇನ್ನು ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ 13,626 ಕ್ಯೂಸೆಕ್, ಧೂಪದಾಳ ಜಲಾಶಯದಿಂದ 18,470 ಕ್ಯೂಸೆಕ್ ಸೇರಿ ಒಟ್ಟು 32,096 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಘಟಪ್ರಭಾ ನದಿಗೆ 45 ಸಾವಿರ ಕ್ಯೂಸೆಕ್ ನೀರು ಹರಿದು ಬರಲು ಆರಂಭಿಸಿದರೆ, ಈ ನದಿಯಲ್ಲೂ ಪ್ರವಾಹ ಉಂಟಾಗಲಿದೆ.

ಮಲ್ರಪಭಾ ನದಿಗೆ ರವಿವಾರ ಮಧ್ಯಾಹ್ನ 15 ಸಾವಿರ ಕ್ಯೂಸೆಕ್ ನೀರು ಹರಿಬಿಟ್ಟಿದ್ದು, ಅದು ಸೋಮವಾರದ ಹೊತ್ತಿಗೆ ಜಿಲ್ಲೆ ಪ್ರವೇಶಿಸಲಿದೆ. ಸಧ್ಯಕ್ಕೆ ಈ ನೀರು ನದಿ ಮಟ್ಟದಲ್ಲಿ ಮಾತ್ರ ಹರಿಯಲಿದ್ದು, ಪ್ರವಾಹ ಉಂಟಾಗುವುದಿಲ್ಲ. ಈ ನದಿಗೆ 18 ರಿಂದ 20 ಸಾವಿರ ಕ್ಯೂಸೆಕ್ ನೀರು ಹರಿದರೆ 43 ಹಳ್ಳಿಗಳು ಪ್ರವಾಹಕ್ಕೆ ಒಳಗಾಗಲಿವೆ.

TRENDING