Thursday, September 24, 2020
Home ಅಂತರ್ ರಾಜ್ಯ 'ನಿರ್ಭಯ' ಮೀರಿಸಿದ ಉ.ಪ್ರದೇಶ ಪ್ರಕರಣ: 13 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ, ಕಣ್ಣು ಕಿತ್ತು, ನಾಲಿಗೆ...

ಇದೀಗ ಬಂದ ಸುದ್ದಿ

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಮಹಾರಾಷ್ಟ್ರ ಕಟ್ಟಡ ದುರಂತ : ಮೃತಪಟ್ಟವರ ಸಂಖ್ಯೆ...

ಮಹಾರಾಷ್ಟ್ರದ ಭಿವಾಂಡಿಯಲ್ಲಿರುವ 36 ವರ್ಷಗಳ ಹಳೆಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆಯು 41ಕ್ಕೆ ಏರಿಕೆಯಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 48 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿದೆ.

‘ನಿರ್ಭಯ’ ಮೀರಿಸಿದ ಉ.ಪ್ರದೇಶ ಪ್ರಕರಣ: 13 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ, ಕಣ್ಣು ಕಿತ್ತು, ನಾಲಿಗೆ ಕತ್ತರಿಸಿದ ಕಾಮುಕರು!

 ಲಖನೌದೆಹಲಿಯ ನಿರ್ಭಯಾ ಹತ್ಯಾಚಾರ ಪ್ರಕರಣ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಆದರೆ ಅದನ್ನೂ ಮೀರಿಸಿದ ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದ್ದು, 13 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯ ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ ಕೊಂದು ಹಾಕಿದ್ದಾರೆ.

ಉತ್ತರ ಪ್ರದೇಶದ ಲಖೀಂ ಪುರ ಜಿಲ್ಲೆಯಲ್ಲಿ ಈ ಘೋರ ಘಟನೆ ನಡೆದಿದ್ದು, ಜಿಲ್ಲೆಯ ಹೊರ ವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಮನುಷ್ಯರು ಯಾರೂ ನೋಡಲಾಗದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಈ ಪ್ರಕರಣ
ಉತ್ತರ ಪ್ರದೇಶದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ಸ್ಥಳೀಯರು ತಪ್ಪಿತಸ್ಥರನ್ನು ಗಲ್ಲಿಗೇರಿಸುವಂತೆ ಪ್ರತಿಭಟನೆಗೆ ಮುಂದಾಗಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಬಾಲಕಿ ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಳು. ಆಕೆಗಾಗಿ ಪೋಷಕರು ಎಲ್ಲಡೆ ಹುಡುಕಿದ್ದಾರೆ. ಆದರೆ ಶನಿವಾರ ಆಕೆಯ ಮೃತದೇಹ ಊರಾಚೆಗಿನ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು. ಆಕೆಯನ್ನು ವಿವಸ್ತ್ರಗೊಳಿಸಿ, ಆಕೆಯನ್ನು ಆಕೆಯ ದುಪ್ಪಟದಿಂದಲೇ ಕತ್ತು ಬಿಗಿದು ಕೊಲೆಗೈಯ್ಯಲಾಗಿತ್ತು. ಅಲ್ಲದೆ ಆಕೆಯ ಕಣ್ಣು ಕಿತ್ತು ನಾಲಿಗೆ ಕತ್ತರಿಸಿ ಹಾಕಲಾಗಿತ್ತು. ಕೂಡಲೇ ಪೋಷಕರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಇಬ್ಬರನ್ನು ವಶಕ್ಕೆ ಪಡೆದಿದ್ದು, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಈ ಪ್ರಕರಣ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆಯೇ ಯೋಗಿ ಆದಿತ್ಯಾನಾಥ್ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಸಮಾಜವಾದಿ ಪಕ್ಷದ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.

TRENDING