Sunday, September 20, 2020
Home ಬೆಂಗಳೂರು ಮಹಾಮಾರಿ ಕೊರೊನಾಗೆ ಬೆಂಗಳೂರಿನಲ್ಲಿ ಒಂದೇ ದಿನ 49 ಮಂದಿ ಬಲಿ, ಸಾವಿಗೀಡಾದವರ ಸಂಖ್ಯೆ 1,444ಕ್ಕೆ ಏರಿಕೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಮಹಾಮಾರಿ ಕೊರೊನಾಗೆ ಬೆಂಗಳೂರಿನಲ್ಲಿ ಒಂದೇ ದಿನ 49 ಮಂದಿ ಬಲಿ, ಸಾವಿಗೀಡಾದವರ ಸಂಖ್ಯೆ 1,444ಕ್ಕೆ ಏರಿಕೆ

 ಬೆಂಗಳೂರುಕೊರೊನಾ ಸೋಂಕಿತರಲ್ಲಿ ಮತ್ತೆ 49 ಮಂದಿ ಮೃತಪಟ್ಟಿರುವುದು ಭಾನುವಾರ ದೃಢಪಟ್ಟಿದ್ದು, ನಗರದಲ್ಲಿ ಕೋವಿಡ್‌ಗೆ ಸಾವಿಗೀಡಾದವರ ಸಂಖ್ಯೆ 1,444ಕ್ಕೆ ಏರಿಕೆಯಾಗಿದೆ.

ಕೋವಿಡ್ ಪೀಡಿತರಲ್ಲಿ 16 ದಿನಗಳಲ್ಲಿ 415 ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದೆ. ಹೊಸದಾಗಿ 2,131 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 89 ಸಾವಿರ ದಾಟಿದೆ. 48 ಗಂಟೆಗಳಲ್ಲಿ 5,626 ಮಂದಿ ಸೋಂಕಿತರಾಗಿದ್ದಾರೆ. ಈ ತಿಂಗಳು ಪ್ರತಿನಿತ್ಯ ಸರಾಸರಿ 2,141 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸದ್ಯ 34 ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸೋಂಕಿತರಲ್ಲಿ ಮತ್ತೆ 2,356 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದರಿಂದಾಗಿ ಈವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 53 ಸಾವಿರ ದಾಟಿದೆ. 16 ದಿನಗಳಲ್ಲಿ 36,886 ಮಂದಿ ಚೇತರಿಸಿಕೊಂಡಿದ್ದಾರೆ.

ಕೋವಿಡ್‌: ಪತ್ರಕರ್ತ ಸಾವು

ಕೋವಿಡ್‌ನಿಂದ ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ (50) ಅವರು ಭಾನುವಾರ ಮೃತಪಟ್ಟಿದ್ದಾರೆ. ನಗರದಲ್ಲಿ ಕೋವಿಡ್‌ನಿಂದಾಗಿ ಮೃತಪಟ್ಟ ನಾಲ್ಕನೇ ಪತ್ರಕರ್ತ ಇವರು. ಪ್ರಸ್ತುತ ಅವರು ‘ಸಂಯುಕ್ತ ಕರ್ನಾಟಕ’ ದಿನಪತ್ರಿಕೆಯ ಮುಖ್ಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಮ್ಮು, ಜ್ವರ, ನೆಗಡಿಯಿಂದಾಗಿ ಅವರ ಆರೋಗ್ಯದ ಸ್ಥಿತಿ ಬಿಗಡಾಯಿಸಿದ ಕಾರಣ ಶನಿವಾರ ಮಧ್ಯಾಹ್ನ 3.30ರ ವೇಳೆಗೆ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್ ಪರೀಕ್ಷೆ ಕೂಡ ನಡೆಸಲಾಗಿತ್ತು. ನಗರದ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ನಗರದ ಕೋವಿಡ್ ಪ್ರಕರಣಗಳ ಅಂಕಿಅಂಶ

ಒಟ್ಟು ಪ್ರಕರಣಗಳು; 89,811

ಗುಣಮುಖರಾದವರು; 53,782

ಸಕ್ರಿಯ ಪ್ರಕರಣಗಳು; 34,584

ಮೃತಪಟ್ಟವರು; 1,444

ದಿನದ ಏರಿಕೆ; 2,131

ಗುಣಮುಖರು; 2,356

ಮೃತಪಟ್ಟವರು; 49

TRENDING