Saturday, September 19, 2020
Home ದೆಹಲಿ NEET , JEE ಪರೀಕ್ಷೆ ಮುಂದೂಡಿಕೆಗೆ ಸಲ್ಲಿಸಿದ್ದ ಅರ್ಜಿ ವಜಾ

ಇದೀಗ ಬಂದ ಸುದ್ದಿ

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

NEET , JEE ಪರೀಕ್ಷೆ ಮುಂದೂಡಿಕೆಗೆ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ : ರಾಷ್ಟ್ರೀಯ ಅರ್ಹತಾ ಕಮ್ ಪ್ರವೇಶ ಪರೀಕ್ಷೆ (ನೀಟ್) ಹಾಗೂ ಜೆಇಇ ಮುಖ್ಯ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಎಂಜಿನಿಯರಿಂಗ್ ಪ್ರವೇಶ ಸೆಪ್ಟೆಂಬರ್ 1ರಿಂದ ಸೆಪ್ಟೆಂಬರ್ 6ರವರೆಗೆ ಹಾಗೂ ವೈದ್ಯಕೀಯ ಕೋರ್ಸ್‌ ಪ್ರವೇಶವನ್ನು ಸೆಪ್ಟೆಂಬರ್ 13ಕ್ಕೆ ನಿಗದಿಪಡಿಸಲಾಗಿದ್ದು, ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಇವು ನಿಗದಿಯಂತೆ ನಡೆಯಲಿವೆ.

ಕರೊನಾ ವೈರಸ್‌ ಭೀತಿಯ ನಡುವೆ ಈ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಕೋರಿ ದೇಶದ 11 ರಾಜ್ಯಗಳ 11 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.

ಅವರ ಪರವಾಗಿ ವಾದಿಸುತ್ತಿದ್ದ ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರನ್ನು ಉದ್ದೇಶಿಸಿ ನ್ಯಾಯಮೂರ್ತಿಗಳು ವಿದ್ಯಾರ್ಥಿಗಳ ವೃತ್ತಿಜೀವನವು ಅಪಾಯಕ್ಕೆ ಸಿಲುಕುವಂತಿಲ್ಲ ಎಂದಿದ್ದಾರೆ.

ಪರೀಕ್ಷೆಗಳು ನಡೆಯದಿದ್ದರೆ, ಅದು ದೇಶಕ್ಕೆ ನಷ್ಟವಾಗುವುದಿಲ್ಲವೇ? ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳುತ್ತಾರೆ. ಕರೋನಾ ಸಮಯದಲ್ಲೂ ಜೀವನ ಮುಂದುವರೆಯಬೇಕು. ನಾವು ಕೇವಲ ಪರೀಕ್ಷೆಗಳನ್ನು ನಿಲ್ಲಿಸಿದರೆ ಮುಂದುವರೆಯುವುದು ಕಷ್ಟ ಎಂದಿದ್ದಾರೆ.

ಇದೇ ವೇಳೆ, ನ್ಯಾಯಾಲಯಗಳು ಮತ್ತೆ ತೆರೆಯಬೇಕೆಂದು ನೀವು ಒತ್ತಾಯಿಸುತ್ತಿಲ್ಲವೇ? ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆಗಳನ್ನು ಏಕೆ ನಡೆಸಲು ಸಾಧ್ಯವಿಲ್ಲ ಎಂದೂ ನ್ಯಾಯಮೂರ್ತಿಅರುಣ್ ಮಿಶ್ರಾ ವಕೀಲರನ್ನು ಪ್ರಶ್ನಿಸಿದರು.

ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಪರೀಕ್ಷೆ ನಡೆಸಲಾಗುತ್ತಿದೆ ಎಂಬ ಬಗ್ಗೆ ಎನ್‌ಟಿಎ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದನ್ನು ಕೋರ್ಟ್‌ ಮಾನ್ಯ ಮಾಡಿದೆ.

TRENDING