Friday, September 25, 2020
Home ಅಂತರ್ ರಾಜ್ಯ ವರ್ಷದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಸೇವೆ ಪುನರಾರಂಭ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ವರ್ಷದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಸೇವೆ ಪುನರಾರಂಭ

 ನವದೆಹಲಿ: ವರ್ಷದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಗಂದೇರ್ಬಲ್ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೈ-ಸ್ಪೀಡ್ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು. ಎರಡು ಕೇಂದ್ರಾಡಳಿತ 20 ಜಿಲ್ಲೆಗಳಲ್ಲಿ ವರ್ಷದ ಹಿಂದಿನಿಂದಲೂ ಹೈಸ್ಪೀಡ್ ಇಂಟರ್ನೆಟ್ ಸೇವೆಗಳನ್ನು ರದ್ದುಪಡಿಸಲಾಗಿತ್ತು.

ಈ ಸಂಬಂಧ ಆಗಸ್ಟ್ 11 ರಂದು ಸುಪ್ರೀಂಕೋರ್ಟ್ ನ ಎನ್.ವಿ.ರಣಣ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಸಂಪೂರ್ಣ ಜಮ್ಮು ಮತ್ತು ಕಾಶ್ಮೀರದಲ್ಲಿ 4ಜಿ ನೆಟ್ವರ್ಕ್ ಸೇವೆ ನಿಷೇಧವನ್ನು ಹಿಂಪಡೆಯುವುದಾಗಿ ತಿಳಿಸಿತ್ತು. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಬಳಿಕ ಜಮ್ಮು ಮತ್ತು ಕಾಶ್ಮೀರದ 2 ಜಿಲ್ಲೆಗಳಲ್ಲಿ ಪ್ರಾಯೋಗಿಕವಾದಿ 4ಜಿ ಸೇವೆ ಆರಂಭಗೊಳ್ಳಲಿದೆ. ಬಳಿಕ ಹಂತಹಂತವಾಗಿ ಸಂಪೂರ್ಣ ಜಮ್ಮು ಮತ್ತು ಕಾಶ್ಮೀರಕ್ಕೆ 4ಜಿ ಸೇವೆ ಒದಗಿಸಲಾಗುತ್ತದೆ ಎಂದು ತಿಳಿಸಿತ್ತು.

4ಜಿ ಸೇವೆ ನೀಡಿದರೆ ಜಮ್ಮ ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನ ಚಟುವಟಿಕೆ ಸೇರಿದಂತೆ ಹಲವು ನಿಯಮಬಾಹಿರ ಚಟುವಟಿಕೆಗಳು ಹೆಚ್ಚಾಗಲಿದೆ ಅನ್ನೋ ಭದ್ರತಾ ಪಡೆಯ ಸೂಚನೆಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಸದ್ಯ ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಸುಧಾರಿಸಿದೆ. ಹೀಗಾಗಿ ಹಂತ ಹಂತವಾಗಿ 4 ಜಿ ಸೇವೆ ಆರಂಭವಾಗಲಿದೆ. ಆರಂಭದಲ್ಲಿ ಪ್ರಾಯೋಗಿಕವಾಗಿ 2 ಜಿಲ್ಲೆಗಳಲ್ಲಿ 4ಜಿ ಸೇವೆ ಆರಂಭವಾಗಲಿದೆ ಸುಪ್ರೀಂ ಕೋರ್ಟ್‌ನ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ಸರ್ಕಾರದ ಆಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಮಾಹಿತಿ ನೀಡಿದ್ದರು.

ಸಂಪೂರ್ಣ ಜಮ್ಮು ಮತ್ತು ಕಾಶ್ಮೀರದಲ್ಲಿ 4ಜಿ ಸೇವೆಯನ್ನು ಚಾಲನೆಗೊಳಿಸುವ ಪ್ರತಿಕೂಲ ವಾತಾವರಣವಿಲ್ಲ. ಭಯೋತ್ಪಾದನಾ ಚಟುವಟಿಕೆ ಕಡಿಮೆ ಇರುವ 2 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ 4ಜಿ ಸೇವೆ ನಿಷೇಧ ಹಿಂಪಡೆಯಲಾಗುತ್ತದೆ. ಜಮ್ಮ ಮತ್ತು ಕಾಶ್ಮೀರದಲ್ಲಿ 4ಜಿ ಸೇವೆ ಆರಂಭಿಸುವ ಕುರಿತು ಭದ್ರತಾ ಪಡೆಯಿಂದ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ತಿಳಿಸಿದ್ದರು.

ಇದರಂತೆ ಕಳೆದ ರಾತ್ರಿ “ಗಂದೇರ್ಬಲ್ (ಕಾಶ್ಮೀರ) ಮತ್ತು ಉಧಂಪುರ್ (ಜಮ್ಮು ವಿಭಾಗ) ಜಿಲ್ಲೆಗಳಲ್ಲಿ ಹೈಸ್ಪೀಡ್ ಮೊಬೈಲ್ ಡೇಟಾ ಸೇವೆಗಳನ್ನು ಪ್ರಾಯೋಗಿಕ ಆಧಾರದ ಮೇಲೆ ಪುನಃಸ್ಥಾಪಿಸಲಾಗಿದೆ.

ಗಂದೇರ್ಬಲ್ (ಕಾಶ್ಮೀರ) ಮತ್ತು ಉಧಂಪುರ್ (ಜಮ್ಮು ವಿಭಾಗ) ಜಿಲ್ಲೆಗಳಲ್ಲಿ ಹೈಸ್ಪೀಡ್ ಮೊಬೈಲ್ ಡೇಟಾ ಸೇವೆಗಳನ್ನು ಪ್ರಾಯೋಗಿಕ ಆಧಾರದ ಮೇಲೆ ಪುನಃಸ್ಥಾಪಿಸಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ, ಇಂಟರ್ನೆಟ್ ವೇಗವನ್ನು 2 ಜಿ ಗೆ ಮಾತ್ರ ಸೀಮಿತಗೊಳಿಸಲಾಗಿದೆ ಗೃಹ ಇಲಾಖೆ ಮಾಹಿತಿ ನೀಡಿದೆ.

TRENDING