Sunday, September 27, 2020
Home ಜಿಲ್ಲೆ ಕೋಲಾರ ಬೆಂಗಳೂರು ಗಲಭೆಗೆ ಕಾರಣವಾದ ಸಂಘಟನೆಗಳನ್ನು ಬ್ಯಾನ್ ಮಾಡಬೇಕು; ಕೋಲಾರ ಸಂಸದ ಎಸ್. ಮುನಿಸ್ವಾಮಿ ಆಕ್ರೋಶ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಬೆಂಗಳೂರು ಗಲಭೆಗೆ ಕಾರಣವಾದ ಸಂಘಟನೆಗಳನ್ನು ಬ್ಯಾನ್ ಮಾಡಬೇಕು; ಕೋಲಾರ ಸಂಸದ ಎಸ್. ಮುನಿಸ್ವಾಮಿ ಆಕ್ರೋಶ

 ಕೋಲಾರ (. 17): ಬೆಂಗಳೂರಿನಲ್ಲಿ ಕಳೆದ ವಾರ ನಡೆದ ಗಲಭೆ ಪೂರ್ವ ನಿಯೋಜಿತವಾಗಿದ್ದು, ರಾತ್ರೋ ರಾತ್ರಿಸಾವಿರಾರು ಜನರು ದಾಳಿ ನಡೆಸಿ, ಪೊಲೀಸ್ ಠಾಣೆ ಧ್ವಂಸ ಮಾಡುವ ಸನ್ನಿವೇಶ ನಿರ್ಮಾಣವಾಗಿದ್ದು, ಇದೊಂದು ಅಮಾನವೀಯ ಕೃತ್ಯ ಎಂದು ಕೋಲಾರ ಸಂಸದ ಎಸ್ ಮುನಿಸ್ವಾಮಿ ಕಿಡಿಕಾರಿದ್ದಾರೆ.

ಕೋಲಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸಂಸದ ಎಸ್ ಮುನಿಸ್ವಾಮಿ, ಬೆಂಗಳೂರಿನಲ್ಲಿ ನಡೆದ ಗಲಭೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೃತ್ಯಕ್ಕೆ ಕಾರಣವಾದವರು ಭಯೋತ್ಪಾದಕರು ಎಂದಿದ್ದಾರೆ. ಹಾಗಾಗಿ, ಈ ಘಟನೆಗೆ ಕಾರಣವಾದ ಎಸ್​ಡಿಪಿಐ ಮತ್ತು ಪಿಎಫ್​ಐ ಸಂಘಟನೆಯನ್ನು ಬ್ಯಾನ್ ಮಾಡಬೇಕು. ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಸಾರ್ವಜನಿಕ ಆಸ್ತಿಯನ್ನು ವಿನಾಕರಾಣ ಹಾನಿ ಮಾಡಿದ ಆ ಭಯೋತ್ಪಾದಕರಿಂದಲೇ ನಷ್ಟ ವಸೂಲಾತಿ ಮಾಡಿಸಬೇಕೆಂದು ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಆನೆ ಹಾವಳಿ ಕುರಿತು ಮಾತನಾಡಿದ ಸಂಸದ ಮುನಿಸ್ವಾಮಿ, ಜಿಲ್ಲೆಯಲ್ಲಿ ಆನೆ ದಾಳಿಗಳು ಮತ್ತೆ ಮತ್ತೆ ಸಂಭವಿಸುತ್ತಿದೆ. ಅದರಿಂದ ಬೆಳೆಹಾನಿ, ಪ್ರಾಣಹಾನಿಯು ನಡೆಯುತ್ತಿದೆ. ಈ ಹಿಂದೆ ಆನೆ ಕಾರಿಡಾರ್ ನಿರ್ಮಿಸಲು ಅರಣ್ಯ ಸಚಿವರಿಗೆ ಮನವಿ ಮಾಡಿದ್ದೆವು. ಆದರೆ, ಕೊರೋನಾ ಹಿನ್ನೆಲೆಯಲ್ಲಿ ಇದು ಜಾರಿಯಾಗಿಲ್ಲ. ಮತ್ತೊಮ್ಮೆ ಸಚಿವರ ಗಮನ ಸೆಳೆದು ಅಗತ್ಯ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.

ಶಾಸಕರ ಸಂಬಂಧಿ ಫೇಸ್​ಬುಕ್​ನಲ್ಲಿ ಕೋಮು ಪ್ರಚೋದಿತ ಪೋಸ್ಟ್ ಹಾಕಿದ್ದನ್ನು ಖಂಡಿಸಿ, ಕಳೆದ ವಾರ ಬೆಂಗಳೂರಿನ ಕಾವಲ್​ ಭೈರಸಂದ್ರದಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಪೊಲೀಸ್ ಠಾಣೆಗಳ ಮೇಲೂ ದಾಳಿ ನಡೆಸಿ, ವಾಹನಗಳನ್ನು ಸುಟ್ಟುಹಾಕಿದ್ದರು. ರಸ್ತೆಗಳಲ್ಲಿ ಬೆಂಕಿ ಹಚ್ಚಿ ರಾತ್ರಿಯಿಡೀ ಆತಂಕದ ವಾತಾವರಣ ನಿರ್ಮಿಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಫೈರಿಂಗ್ ನಡೆಸಿದ್ದು, ಮೂವರು ಸಾವನ್ನಪ್ಪಿದ್ದರು. ಈ ಪ್ರಕರಣದ ವಿಚಾರಣೆ ಇನ್ನೂ ಮುಂದುವರೆದಿದೆ.  

TRENDING