Friday, September 25, 2020
Home ಜಿಲ್ಲೆ ಯಾದಗಿರಿ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಯಾದಗಿರಿ(.17): ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಯಾದಗಿರಿ ಜಿಲ್ಲೆಯ ಕೃಷ್ಣಾ ನದಿ ತೀರದ ಜನರು ಈಗ ಪ್ರವಾಹ ಎದುರಿಸುವಂತಾಗಿದೆ. ಯಾದಗಿರಿ ಜಿಲ್ಲೆಯ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಈಗ 2 ಲಕ್ಷ 80 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಬಸವಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಭಾರಿ ಪ್ರಮಾಣದ ನೀರು ನದಿಗೆ ಬಿಡಲಾಗುತ್ತಿದೆ. ಕೃಷ್ಣಾ ನದಿ ತೀರದಲ್ಲಿ ಈಗ ಪ್ರವಾಹ ಭೀತಿ ಎದುರಾಗಿದೆ.

ಕೊಳ್ಳುರು ಸೇತುವೆ ಜಲಾವೃತ..! ಕೃಷ್ಣಾ ನದಿಯು ಅಪಾಯಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮದ ಸೇತುವೆ ಜಲಾವೃತವಾಗಿದೆ. ಕೊಳ್ಳೂರು-ಹೂವಿನಹೆಡಗಿ ಸೇತುವೆಯೂ ಮುಳುಗಡೆಯಾಗಿದೆ. ಹೀಗಾಗಿ ಯಾದಗಿರಿ-ರಾಯಚೂರು ಸಂಚಾರ ನಿಷೇಧ ಮಾಡಲಾಗಿದೆ. ಕೊಳ್ಳೂರು ಸೇತುವೆ ಮೂಲಕ ಜನರ ಸಂಚಾರಕ್ಕೆ ನಿಷೇಧ ಮಾಡಲಾಗಿದೆ. ಕೊಳ್ಳೂರು ಸೇತುವೆಯಲ್ಲಿ ವ್ಯಾಪಾಕ ಪೊಲೀಸ ಭದ್ರತೆ ಕಲ್ಪಿಸಲಾಗಿದೆ.

ದೇಗುಲಗಳು ಮುಳುಗಡೆ ಭೀತಿ..!

ಕೃಷ್ಣಾ ನದಿ ಆರ್ಭಟಕ್ಕೆ ನದಿ ತೀರದಲ್ಲಿರುವ ದೇಗುಲಗಳು ಮುಳುಗಡೆ ಭೀತಿ ಎದುರಿಸುತ್ತಿವೆ. ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿ ಗ್ರಾಮದ ಕೃಷ್ಣಾ ‌ನದಿ ತೀರದಲ್ಲಿರುವ ಆಂಜನೇಯ ಹಾಗೂ ಬಸವೇಶ್ವರ ದೇಗುಲಗಳು ಮುಳುಗಡೆ ಭೀತಿ ಎದುರಿಸುತ್ತಿವೆ. ನದಿಯಲ್ಲಿ ಇನ್ನಷ್ಟು ನೀರಿನ ಹರಿವು ಹೆಚ್ಚಾದರೆ ದೇಗುಲಗಳಿಗೆ ನೀರು ನುಗ್ಗಲಿವೆ.

ಈ ಬಗ್ಗೆ ನ್ಯೂಸ್ 18 ಕನ್ನಡಕ್ಕೆ ಶೆಳ್ಳಗಿ ಗ್ರಾಮಸ್ಥ ಶರಣಗೌಡ ಮಾತನಾಡಿ, ಕೃಷ್ಣಾ ನದಿಯ ಪ್ರವಾಹಕ್ಕೆ ನದಿ ತೀರದಲ್ಲಿ ಬೆಳೆ ಹಾನಿಯಾಗಿದೆ. ಅದೇ ರೀತಿ ನೀರು ಹೆಚ್ಚು ಬಂದರೆ ದೇಗುಲಗಳು ಮುಳುಗಡೆಯಾಗುತ್ತವೆ ಎಂದರು.
ಕೃಷ್ಣಾ ನದಿಯ ಅರ್ಭಟಕ್ಕೆ ಶೆಳ್ಳಗಿ ಶೆಳ್ಳಗಿ, ಕೊಳ್ಳುರು, ಮದರಕಲ್,ಮೊದಲಾದ ಗ್ರಾಮದಲ್ಲಿ ಬೆಳೆ ಜಲಾವೃತಗೊಂಡು ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ

TRENDING