Tuesday, September 22, 2020
Home ಜಿಲ್ಲೆ ಮೈಸೂರು ಕೊರೊನಾದಿಂದ ಮೃತಪಟ್ಟ ಮಹಿಳೆಯ ಸರವನ್ನೂ ಬಿಡಲಿಲ್ಲ...

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಕೊರೊನಾದಿಂದ ಮೃತಪಟ್ಟ ಮಹಿಳೆಯ ಸರವನ್ನೂ ಬಿಡಲಿಲ್ಲ…

ಮೈಸೂರು, ಆಗಸ್ಟ್ 18: ಮೈಸೂರಿನ ಕೋವಿಡ್-19 ಆಸ್ಪತ್ರೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟ ಮಹಿಳೆಯ ಸರ ಕಳ್ಳತನ ಮಾಡಿರುವ ಆರೋಪ ಕೇಳಿ ಬಂದಿದೆ.

ಆಗಸ್ಟ್ 13 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮೃತ ಮಹಿಳೆ ಜಯಲಕ್ಷ್ಮಿ ಎಂಬುವವರ ಸರ ಕಳ್ಳತನ ಮಾಡಲಾಗಿದೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಮೈಸೂರಿನ ವಿದ್ಯಾನಗರದ ನಿವಾಸಿ ಜಯಲಕ್ಷ್ಮಿ ಅವರನ್ನು ಕುಟುಂಬಸ್ಥರು ಮೈಸೂರಿನ ಹಲವು ಆಸ್ಪತ್ರೆಗೆ ಕರೆದೊಯ್ದಿದ್ದರು.

ಆದರೆ ಎಲ್ಲಾ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ ಎಂದು ಹೇಳಿ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಜಯಲಕ್ಷ್ಮಿ ಅವರನ್ನು ಮೇಟಗಳ್ಳಿ ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಗೆ ದಾಖಲಿಸಿದ ಕೆಲ ಸಮಯದಲ್ಲೇ ಜಯಲಕ್ಷ್ಮಿ ಮೃತಪಟ್ಟಿದ್ದರು.

ನಂತರ ಮೃತ ಮಹಿಳೆಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಕೊರೊನಾ ಟೆಸ್ಟ್ ನಂತರ ಮೃತದೇಹವನ್ನು ವಾಪಸ್ಸು ನೀಡಲಾಗಿತ್ತು. ಈ ವೇಳೆ ಮಹಿಳೆಯ ಕುತ್ತಿಗೆಯಲ್ಲಿದ್ದ 26 ಗ್ರಾಂ ಚಿನ್ನದ ಸರ ಕಳುವು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಕೋವಿಡ್-19 ಆಸ್ಪತ್ರೆಯ ಮುಖ್ಯಸ್ಥರಿಗೆ ಜಯಲಕ್ಷ್ಮಿ ಪುತ್ರ ರವೀಶ್ ದೂರು ನೀಡಿದ್ದಾರೆ. ಸದ್ಯ ರವೀಶ್ ಹಾಗೂ ಅವರ ಕುಟುಂಬದ 5 ಸದಸ್ಯರಿಗೂ ಪಾಸಿಟಿವ್ ಬಂದಿದ್ದು, ಅವರನ್ನು ಕೋವಿಡ್ -19 ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲು ಸಾಧ್ಯವಾಗಿಲ್ಲ. ಈ ಸಂಬಂಧ ಮೇಟಗಳ್ಳಿ ಪೊಲೀಸರಿಗೆ ಪುತ್ರ ರವೀಶ್ ವಿಷಯ ತಿಳಿಸಿದ್ದಾರೆ.

TRENDING