Saturday, September 19, 2020
Home ಬೆಂಗಳೂರು ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದ ರಾಜ್ಯದ ಭವಿಷ್ಯಕ್ಕೆ ಕುತ್ತು : ಎಚ್‍ ಡಿ .ಕುಮಾರಸ್ವಾಮಿ ಆಕ್ರೋಶ

ಇದೀಗ ಬಂದ ಸುದ್ದಿ

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದ ರಾಜ್ಯದ ಭವಿಷ್ಯಕ್ಕೆ ಕುತ್ತು : ಎಚ್‍ ಡಿ .ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು, ಆ.18- ಖಾಲಿಯಾಗಿರುವ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿನ ಗುತ್ತಿಗೆಗೆ ನೀಡಿರುವ ಜಮೀನನ್ನು ಪರಭಾರೆ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದು ದುರದೃಷ್ಟಕರ. ಇದನ್ನು ಕೂಡಲೇ ನಿಲ್ಲಿಸಬೇಕೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ತರಾತುರಿಯಲ್ಲಿ ಅವೈಜ್ಞಾನಿಕ ನಿರ್ಧಾರ ಕೈಗೊಳ್ಳುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ರಾಜ್ಯದ ಭವಿಷ್ಯಕ್ಕೆ ಮುಳುವಾಗಲಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಣಿ ಟ್ವಿಟ್ ಮಾಡಿರುವ ಅವರು, ಗುತ್ತಿಗೆಗೆ ನೀಡಿರುವ ಜಮೀನನ್ನು ಮಾರಾಟ ಮಾಡಿದರೆ ಮುಂದೆ ಸಾರ್ವಜನಿಕ ಅವಶ್ಯಕತೆಗಳಿಗೆ ಸರ್ಕಾರಿ ಜಮೀನೇ ಇಲ್ಲದಂತಾಗುತ್ತದೆ. ಅಗತ್ಯವಿದ್ದಾಗ ಖಾಸಗಿಯವರ ಎದುರು ಅಂಗಾಲಾಚಬೇಕಾದ ದೈನೇಸಿ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಸುಮಾರು 5 ಸಾವಿರ ಕೋಟಿ ರೂ.ಗಳ ಆದಾಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರ ಇರುವುದನ್ನೂ ಕಳೆದುಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

TRENDING