Tuesday, September 22, 2020
Home ದೆಹಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈಗ ಶಿಕ್ಷಣ ಸಚಿವಾಲಯ: ರಾಷ್ಟ್ರಪತಿ ಕೋವಿಂದ್ ಅಂಕಿತ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈಗ ಶಿಕ್ಷಣ ಸಚಿವಾಲಯ: ರಾಷ್ಟ್ರಪತಿ ಕೋವಿಂದ್ ಅಂಕಿತ

 ನವದೆಹಲಿ: ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು (ಎಂಎಚ್‌ಆರ್‌ಡಿ) ಶಿಕ್ಷಣ ಸಚಿವಾಲಯವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸೋಮವಾರ ಸಮ್ಮತಿ ನೀಡಿದ್ದಾರೆ. ಈ ಕುರಿತು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಕರಡಿನಲ್ಲಿ ಪ್ರಸ್ತಾಪಿಸಲಾಗಿದ್ದ ಪ್ರಮುಖ ಶಿಫಾರಸ್ಸುಗಳಲ್ಲಿ ಸಚಿವಾಲಯದ ಹೆಸರು ಮರುನಾಮಕರಣವೂ ಸೇರಿತ್ತು. ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಕಳೆದ ತಿಂಗಳು ಅನುಮೋದಿಸಿತ್ತು.

ಸೋಮವಾರ ರಾತ್ರಿ ಪ್ರಕಟಿಸಲಾಗಿರುವ ಗೆಜೆಟೆಡ್‌ ನೋಟಿಫಿಕೇಷನ್‌ನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹೆಸರನ್ನು ಶಿಕ್ಷಣ ಸಚಿವಾಲಯವಾಗಿ ಬದಲಿಸಲು ರಾಷ್ಟ್ರಪತಿ ಒಪ್ಪಿಗೆ ನೀಡಿರುವುದಾಗಿ ತಿಳಿಸಲಾಗಿದೆ. 1985ರಲ್ಲಿ ಅಂದಿನ ಪ್ರಧಾನಿ ರಾಜೀವ್‌ ಗಾಂಧಿ ಅವರ ಆಡಳಿತಾವಧಿಯಲ್ಲಿ ‘ಶಿಕ್ಷಣ ಸಚಿವಾಲಯವು’ ಮಾನವ ಸಂಪನ್ಮೂಲ ಸಚಿವಾಲಯವಾಗಿ ಬದಲಾಯಿತು. 1986ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಪರಿಚಯಿಸಲಾಯಿತು ಹಾಗೂ 1992ರಲ್ಲಿ ಅದಕ್ಕೆ ತಿದ್ದುಪತಿ ತರಲಾಯಿತು.

ರಾಜೀವ್‌ ಗಾಂಧಿ ಅವರ ಸಚಿವ ಸಂಪುಟದಲ್ಲಿ ಪಿ.ವಿ.ನರಸಿಂಹ ರಾವ್‌ ಅವರು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಮೊದಲ ಸಚಿವರಾಗಿದ್ದರು.

ಇಸ್ರೊ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್‌ ಅವರ ನೇತೃತ್ವದಲ್ಲಿ ಸಮಿತಿಯು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸುವ ಕಾರ್ಯ ನಡೆಸಿತು. ಆ ಸಮಿತಿಯು ಸಚಿವಾಲಯದ ಹೆಸರು ಬದಲಿಸಲು ಶಿಫಾರಸ್ಸು ಮಾಡಿತು. ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಅಧ್ಯಕ್ಷರಾದ ರಾಮ್‌ ಬಹದೂರ್‌ ರಾಯ್‌ 2018ರಲ್ಲಿ ಅದೇ ವಿಚಾರವನ್ನು ಮತ್ತೊಮ್ಮೆ ಪ್ರಸ್ತಾಪಿಸಿದ್ದು ಚರ್ಚೆಯಾಗಿತ್ತು.

TRENDING