Wednesday, September 23, 2020
Home ದೆಹಲಿ ದೆಹಲಿಯಲ್ಲಿ ಇಂದು ದಿನವಿಡೀ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ದೆಹಲಿಯಲ್ಲಿ ಇಂದು ದಿನವಿಡೀ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆಯ ಅಬ್ಬರ ಮತ್ತೆ ಶುರುವಾಗಿದೆ. ದೆಹಲಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಬೆಳಗ್ಗೆಯಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ದಿನಪೂರ್ತಿ ದೆಹಲಿಯಲ್ಲಿ ಇದೇ ರೀತಿಯ ಗುಡುಗುಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೆಹಲಿಯ ಸುತ್ತಮುತ್ತಲೂ ಇರುವ ಘಜಿಯಾಬಾದ್, ನೊಯ್ಡಾದಲ್ಲಿ ಕೂಡ ಇಂದು ದಿನವಿಡೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಕೂಡ ಇಂದು ದಿನವಿಡೀ ಮಳೆ ಹೆಚ್ಚಳವಾಗಲಿದೆ ಎಂದು ಸ್ಕೈಮೆಟ್ ವೆದರ್ ಟ್ವೀಟ್ ಮೂಲಕ ತಿಳಿಸಿದೆ. ಒಡಿಶಾ, ಆಂಧ್ರ ಪ್ರದೇಶ, ರಾಜಸ್ಥಾನ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಬಿಹಾರ್, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳದಲ್ಲಿ ಇಂದು ರಾತ್ರಿಯವರೆಗೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ದೆಹಲಿಯಲ್ಲಿ ಇನ್ನೂ 2 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ಪ್ರತಿವರ್ಷ ದೆಹಲಿಯಲ್ಲಿ ಮಳೆಗಾಲ ಇರಲಿದೆ. ಈ ಬಾರಿ ದೆಹಲಿಯಲ್ಲಿ ಜುಲೈ 24ರಂದು ಮಳೆಗಾಲ ಆರಂಭವಾಗಿತ್ತು. ನಿನ್ನೆಊ ದೆಹಲಿಯಲ್ಲಿ ಮಳೆಯಾಗಿದ್ದು, ಅದಕ್ಕಿಂತಲೂ ಹೆಚ್ಚು ಪ್ರಮಾಣದ ಮಳೆ ಇಂದು ಮತ್ತು ನಾಳೆ ಸುರಿಯಲಿದೆ.  

ಮುಂಬೈನಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಪ್ರವಾಹದಂತ ಸ್ಥಿತಿ ನಿರ್ಮಾಣವಾಗಿದೆ. ಪುಣೆ, ಸತಾರಾದಲ್ಲಿ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಬೈ , ರಾಯ್‌ಗಢ, ಪಾಲ್ಘರ್ ನಲ್ಲಿ ಮಳೆಯಾಗಲಿದೆ. ಕಳೆದ 24 ಗಂಟೆಯಲ್ಲಿ 204.5 ಮಿ.ಮೀನಷ್ಟು ಮಳೆಯಾಗಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆ. 20ರವರೆಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಹಾಸನ, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ಆ. 20ರವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

TRENDING