Tuesday, September 22, 2020
Home ಅಂತರ್ ರಾಜ್ಯ ಪತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ನಾಗಪುರದ ವೈದ್ಯೆ!

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಪತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ನಾಗಪುರದ ವೈದ್ಯೆ!

ನಾಗಪುರ: 41 ವರ್ಷದ ವೈದ್ಯರೊಬ್ಬರು ಪತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗಪುರ ನಗರದಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಡಾ. ಸುಷ್ಮಾ ರಾಣೆ, ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದ ಪತಿ ಧೀರಜ್ (42) ಮತ್ತು ಅವರ 11 ಮತ್ತು 5 ವರ್ಷದ ಇಬ್ಬರು ಮಕ್ಕಳು ನಾಗಪುರದ ಕೊರಡಿ ಪ್ರದೇಶದಲ್ಲಿರುವ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಧೀರಜ್ ಮತ್ತು ಮಕ್ಕಳ ಮೃತದೇಹಗಳು ಮಾಸ್ಟರ್ ಬೆಡ್‌ರೂಂನ ಹಾಸಿಗೆಯ ಮೇಲೆ ಪತ್ತೆಯಾಗಿದ್ದರೆ, ವೈದ್ಯರ ಮೃತದೇಹ ಸೀಲಿಂಗ್‌ ಫ್ಯಾನ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಕೊರಡಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅವರೊಂದಿಗೆ ವಾಸವಾಗಿದ್ದ ಮೃತನ 60 ವರ್ಷದ ಚಿಕ್ಕಮ್ಮ ಮಲಗುವ ಕೋಣೆಯ ಬಾಗಿಲು ಬಡಿದಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬಳಿಕ ಸಾವಿಗೀಡಾಗಿರುವುದು ಬೆಳಕಿಗೆ ಬಂದಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನಾ ಸ್ಥಳದಿಂದ ಪೊಲೀಸರು, ಎರಡು ಸಿರಿಂಜ್ ಮತ್ತು ಡೆತ್‌ನೋಟ್‌ ಅನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಸುಷ್ಮಾ ಅವರು ಯಾವುದೋ ವಿಚಾರಕ್ಕೆ ಅಸಮಾಧಾನಗೊಂಡಿದ್ದರಿಂದಾಗಿ ಈ ರೀತಿಯ ಹೆಜ್ಜೆಯನ್ನು ಇಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಪ್ರಾಥಮಿಕ ತನಿಖೆಯ ಪ್ರಕಾರ, ಸುಷ್ಮಾ ಅವರು ಮೊದಲಿಗೆ ಪತಿ ಮತ್ತು ಮಕ್ಕಳಿಗೆ ಪ್ರಜ್ಞೆ ತಪ್ಪುವಂತೆ ಮಾಡಲು ಆಹಾರದಲ್ಲಿ ಕೆಲವು ನಿದ್ರಾಜನಕ ಔಷಧವನ್ನು ಬೆರೆಸಿ ನೀಡಿದ್ದಿರಬಹುದು ಮತ್ತು ಬಳಿಕ ಅವರಿಗೆ ಇಂಜೆಕ್ಷನ್ ನೀಡಿರಬಹುದು ಎನ್ನಲಾಗಿದೆ.

ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

TRENDING