Friday, September 25, 2020
Home ದೇಶ ವಂದೇ ಭಾರತ್ ಮಿಷನ್: 13 ರಾಷ್ಟ್ರಗಳಲ್ಲಿದ್ದ 11 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸ್!

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ವಂದೇ ಭಾರತ್ ಮಿಷನ್: 13 ರಾಷ್ಟ್ರಗಳಲ್ಲಿದ್ದ 11 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸ್!

 ನವದೆಹಲಿ, ಆಗಸ್ಟ್.19: ಕೊರೊನಾವೈರಸ್ ಸೋಂಕು ಹರಡುವಿಕೆ ಮತ್ತು ಸಾವಿನ ನಡುವೆ ವಿದೇಶಗಳಲ್ಲಿ ಭಯದಲ್ಲೇ ಬದುಕುತ್ತಿದ್ದ ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲು ಕೇಂದ್ರ ಸರ್ಕಾರವು ವಂದೇ ಭಾರತ್ ಮಿಷನ್ ಕಾರ್ಯಾಚರಣೆ ಆರಂಭಿಸಿತು.

ವಂದೇ ಭಾರತ್ ಮಿಷನ್ ಕಾರ್ಯಾಚರಣೆ ಅಡಿಯಲ್ಲಿ ಇದುವರೆಗೂ ಸರಿಸುಮಾರು 11 ಲಕ್ಷ ಭಾರತೀಯರನ್ನು ಸ್ವದೇಶಕ್ಕೆ ವಾಪಸ್ ಕರೆ ತರಲಾಗಿದೆ. ಆಸ್ಟ್ರೇಲಿಯಾ, ಇಟಲಿ, ಜಪಾನ್ ಸೇರಿದಂತೆ 13 ರಾಷ್ಟ್ರಗಳಲ್ಲಿದ್ದ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆ ತರಲಾಗಿದೆ.

ಕಳೆದ ಮೇ.6ರ ಅಂಕಿ-ಅಂಶಗಳ ಪ್ರಕಾರ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿದೇಶಗಳಲ್ಲಿದ್ದ 10,98,000 ಭಾರತೀಯರನ್ನು ರಕ್ಷಿಸಿ ಸುರಕ್ಷಿತವಾಗಿ ಭಾರತಕ್ಕೆ ಕರೆ ತರಲಾಗಿದೆ ಎಂದು ಭಾರತೀಯ ವಿಮಾನಯಾನ ಸಚಿವಾಲಯವು ಟ್ವೀಟ್ ಮಾಡಿದೆ.

ಏರ್ ಬಬಲ್ಸ್ ಕುರಿತು ರಾಷ್ಟ್ರಗಳ ನಡುವೆ ಚರ್ಚೆ:

ಉಭಯ ರಾಷ್ಟ್ರಗಳ ನಡುವೆ ಅಂತಾರಾಷ್ಟ್ರೀಯ ವಿಮಾನಯಾನ ಸಂಚಾರಕ್ಕೆ ಕೆಲವು ನಿರ್ಬಂಧಗಳೊಂದಿಗೆ ಏರ್ ಬಬಲ್ಸ್ ವ್ಯವಸ್ಥೆ ಸಹಕಾರಿಯಾಗಿತ್ತು. ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ, ಇಂಗ್ಲೆಂಡ್, ಫ್ರಾನ್ಸ್, ಜರ್ಮನಿ, ಯುನೈಟೆಡ್ ಅರಬ್ ಎಮರೇಟ್ಸ್, ಕ್ವಾತಾರ್ ಮತ್ತು ಮಾಲ್ಡೀವ್ಸ್ ರಾಷ್ಟ್ರಗಳು ಏರ್ ಬಬಲ್ಸ್ ವ್ಯವಸ್ಥೆ ಬಗ್ಗೆ ಆಸ್ಟ್ರೇಲಿಯಾ, ಇಟಲಿ, ಜಪಾನ್, ನ್ಯೂಜಿಲೆಂಡ್, ನೈಜೀರಿಯಾ, ಬಹ್ರೇನ್, ಇಸ್ರೇಲ್, ಕೀನ್ಯಾ, ರಷ್ಯಾ, ಫಿಲಿಫೈನ್ಸ್, ಸಿಂಗಾಪೂರ್, ದಕ್ಷಿಣ ಕೊರಿಯಾ, ಥೈಲ್ಯಾಂಡ್ ಜೊತೆಗೆ ಮಾತುಕತೆ ನಡೆಸಿವೆ.

ಏರ್ ಬಬಲ್ಸ್ ಕುರಿತು ಚರ್ಚೆಯಿಂದಾಗಿ ಈ ದೇಶಗಳ ಸಿಕ್ಕಿಬಿದ್ದ ಭಾರತೀಯರು ಮತ್ತು ಪ್ರಜೆಗಳಿಗೆ ಅನುಕೂಲವಾಗಲಿದೆ ಎಂದು ಸಹಕಾರಿ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದರು. ಅಲ್ಲದೇ ನಮ್ಮ ನೆರೆಹೊರೆಯ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ನೇಪಾಳ ಮತ್ತು ಭೂತಾನ್ ದೇಶಗಳಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದರು.

“ನಾವು ವಂದೇ ಭಾರತ್ ಮಿಷನ್ ವ್ಯಾಪ್ತಿಯನ್ನು ಮತ್ತಷ್ಟು ಬಲಪಡಿಸುತ್ತಿದ್ದೇವೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ, ಇಂಗ್ಲೆಂಡ್, ಫ್ರಾನ್ಸ್, ಜರ್ಮನಿ, ಯುಎಇ, ಕತಾರ್ ಮತ್ತು ಮಾಲ್ಡೀವ್ಸ್ ಜೊತೆಗೆ ವಿಮಾನ ಪ್ರಯಾಣದ ವ್ಯವಸ್ಥೆ ಜಾರಿಯಲ್ಲಿವೆ. ನಾವು ಈಗ ಈ ಪ್ರಯತ್ನಗಳನ್ನು ಮುಂದಕ್ಕೆ ತೆಗೆದುಕೊಳ್ಳುತ್ತಿದ್ದೇವೆ ಮತ್ತು ಅಂತಹ ವ್ಯವಸ್ಥೆಗಳನ್ನು ಸ್ಥಾಪಿಸಲು ಇನ್ನೂ 13 ದೇಶಗಳೊಂದಿಗೆ ಮಾತುಕತೆ ನಡೆಸುತ್ತಿದೆ “ಎಂದು ಪುರಿ ಟ್ವೀಟ್ ಮಾಡಿದ್ದಾರೆ.

TRENDING