Saturday, October 24, 2020
Home ದಕ್ಷಿಣ ಕನ್ನಡ ಮಂಗಳೂರು ಮಂಗಳೂರು ಏರ್ ಪೋರ್ಟ್ ಗೆ ಹುಸಿ ಬಾಂಬ್ ಕರೆ

ಇದೀಗ ಬಂದ ಸುದ್ದಿ

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಮಂಗಳೂರು ಏರ್ ಪೋರ್ಟ್ ಗೆ ಹುಸಿ ಬಾಂಬ್ ಕರೆ

 ಮಂಗಳೂರು; ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರೋದಾಗಿ ವ್ಯಕ್ತಿಯೋರ್ವ ಹುಸಿ ಬೆದರಿಕೆ ಕರೆ ಮಾಡಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಆದರೆ, ಸಂಪೂರ್ಣ ತಪಾಸಣೆಯ ಬಳಿಕ ಹುಸಿ ಕರೆ ಎಂದು ತಿಳಿದುಬಂದಿದ್ದು, ಬೆದರಿಕೆ ಕರೆ ಮಾಡಿದ ಆರೋಪಿಯನ್ನೂ ಬಂಧಿಸಲಾಗಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಾಣದ ಮಾಜಿ ನಿರ್ದೇಶಕ ಎಂ.ಆರ್. ವಾಸುದೇವ ರಾವ್ ಅವರಿಗೆ ಉಡುಪಿ ಜಿಲ್ಲೆಯ ಹೆಬ್ರಿ ನಿವಾಸಿ ಈ ಕರೆ ಬಂದಿದ್ದು, ವಿಮಾನ ನಿಲ್ದಾಣ ದಲ್ಲಿ ಬಾಂಬ್ ಇರಿಸಿದ್ದಾಗಿ ಓರ್ವ ವ್ಯಕ್ತಿ ಬೆದರಿಕೆ ಕರೆ ಮಾಡಿದ್ದ. ತಕ್ಷಣ ವಾಸುದೇವ ಅವರು ವಿಮಾನ ನಿಲ್ದಾಾಣದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾಾರೆ. ಕೂಡಲೆ ಕಾರ್ಯಾಚರಣೆಗಿಳಿದ ಸಿಐಎಸ್‌ಎಫ್ ಸಿಬ್ಬಂದಿ ಹಾಗೂ ಪೊಲೀಸರು ಇಡೀ ನಿಲ್ದಾಣ ಪೂರ್ತಿ ತಪಾಸಣೆ ನಡೆಸಿದ್ದಾಾರೆ. ಆದರೆ, ಎಲ್ಲೂ ಬಾಂಬ್ ಪತ್ತೆಯಾಗಿಲ್ಲ. ಹಾಗಾಗಿ ಇದೊಂದು ಹುಸಿ ಕರೆ ಅಂತಾ ಧೃಡವಾಗಿದೆ. ಹೀಗಾಗಿ ಹುಸಿ ಕರೆಯ ಹಿನ್ನಲೆ ವಿಮಾನ ನಿಲ್ದಾಣ ದ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಾರೆ.

ಪ್ರಕರಣದ ತನಿಖೆಯನ್ನು ಅಪರಾಧ ವಿಭಾಗದ ಡಿಸಿಪಿ ವಿನಯ್ ಗಾಂವ್ಕರ್ ಅವರಿಗೆ ಹೊರಿಸಲಾಗಿದೆ. ಕರೆ ಬಂದ ಮೊಬೈಲ್ ಸಂಖ್ಯೆ, ನೆಟ್ ವರ್ಕ್ ಆಧಾರದಲ್ಲಿ ಕಾರ್ಕಳ ಮೂಲಕ ವ್ಯಕ್ತಿಯ ಬಂಧನವಾಗಿದೆ. ಬಂಧಿತ ವ್ಯಕ್ತಿಯನ್ನು ತುಂಡುಗುಡ್ಡೆ ವಸಂತ (33) ಎಂದು ಗುರುತಿಸಲಾಗಿದೆ. ಹುಸಿ ಕರೆ ಮಾಡಿದರ ಉದ್ದೇಶದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹುಸಿ ಕೆರೆಯಿಂದ ವಿಮಾನ ನಿಲ್ದಾಣದ ಅಧಿಕಾರಿಗಳು ನಿರಾಳರಾಗಿದ್ರೂ ಇದೇ ವರ್ಷದ ಜನವರಿ 20ರಂದು ಆದಿತ್ಯ ರಾವ್ ಎಂಬಾತ ಮಂಗಳೂರು ಏರ್‌ಪೋರ್ಟ್‌ನ ಹೊರಗಡೆ ಬಾಂಬ್ ಇಟ್ಟದ್ದು ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಹೀಗಾಗಿ ಮುಂದಕ್ಕೆ ಈ ಘಟನೆ ಮತ್ತೆ ಮರುಕಳಿಸದಂತೆ ಭಾರೀ ಮುನ್ನೆಚ್ಚರಿಕೆ ವಹಿಸಲಾಗಿದೆ

TRENDING