Tuesday, September 22, 2020
Home ದೆಹಲಿ ದೆಹಲಿಯಲ್ಲಿ ನಿರಂತರ ಭಾರಿ ಮಳೆಯಿಂದಾಗಿ ರಸ್ತೆಗಳಲ್ಲೇ ನದಿಗಳು!

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ದೆಹಲಿಯಲ್ಲಿ ನಿರಂತರ ಭಾರಿ ಮಳೆಯಿಂದಾಗಿ ರಸ್ತೆಗಳಲ್ಲೇ ನದಿಗಳು!

 ನವದೆಹಲಿ, ಆಗಸ್ಟ್.20: ಮಳೆಯ ಹೊಡೆತಕ್ಕೆ ರಾಷ್ಟ್ರ ರಾಜಧಾನಿಯ ಜನರು ತತ್ತರಿಸಿ ಹೋಗಿದ್ದಾರೆ. ನವದೆಹಲಿ ಮತ್ತು ಎನ್ ಸಿಆರ್ ಹಲವು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.

ನವದೆಹಲಿಯ ಹಲವು ಪ್ರದೇಶಗಳಲ್ಲಿ ಈಗಾಗಲೇ ಸುರಿದಿರುವ ಮಳೆ ಅವಾಂತರಗಳನ್ನು ಸೃಷ್ಟಿಸಿದೆ. ಗೌತಮ್ ಬುದ್ಧ ನಗರದಲ್ಲಿ ಭಾರಿ ಮಳೆಯಿಂದಾಗಿ ರಸ್ತೆಗಳಲ್ಲೆ ಜಲಾವೃತಗೊಂಡಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಇನ್ನೊಂದಡೆ ದೆಹಲಿಯ ಮಯೂರ್ ವಿಹಾರದ ಮೂರನೇ ಹಂತದಲ್ಲಿ ಸುರಿದ ಭಾರಿ ಮಳೆಯಿಂದ ರಸ್ತೆಗಳಲ್ಲೇ ನೀರು ನಿಂತುಕೊಂಡಿದೆ. ಇದರಿಂದಾಗ ವಾಹನ ಸವಾರರು ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಷ್ಟ್ರ ರಾಜಧಾನಿಯ ರಸ್ತೆಗಳಲ್ಲೇ ನದಿಗಳು:

ನವದೆಹಲಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಾಷ್ಟ್ರ ರಾಜಧಾನಿಯ ರಸ್ತೆಗಳಲ್ಲ ನದಿಗಳಾಗಿ ಮಾರ್ಪಡುತ್ತಿವೆ. ಬರಫ್ ಖಾನಾ ಪ್ರದೇಶದಲ್ಲಿ ಮಳೆ ಆರ್ಭಟದಿಂದ ರಸ್ತೆಗಳೆಲ್ಲ ಜಲಾವೃತಗೊಂಡಿವೆ. ಈ ನಡುವೆ ನವದೆಹಲಿಯಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.

“ಗುರುವಾರವರೆಗೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೆ, ಒಂದು ಅಥವಾ ಎರಡು ಮಳೆ ಸುರಿಯುವ ಸಾಧ್ಯತೆಗಳಿವೆ” ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಪ್ರಾದೇಶಿಕ ಮುನ್ಸೂಚನೆ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ತಿಳಿಸಿದ್ದಾರೆ.

ಇನ್ನು, ಮಳೆಯ ದಾಖಲೆಯ ಪ್ರಕಾರ, 15 ಮಿ.ಮೀ ಮಳೆಯನ್ನು ಅಲ್ಪ, 15 ರಿಂದ 64.5 ಮಿ.ಮೀ ಮಳೆಯನ್ನು ಸಾಧಾರಣ ಮತ್ತು 64.5 ಮಿ.ಮೀಟರ್ ಗಿಂತ ಹೆಚ್ಚಿನ ಮಳೆಯನ್ನು ಭಾರಿ ಮಳೆ ಎಂದು ಗುರುತಿಸಲಾಗುತ್ತದೆ.

TRENDING