Tuesday, September 22, 2020
Home ಜಿಲ್ಲೆ ಚಾಮರಾಜನಗರ ಶಾಸಕರ ತೇಜೋವಧೆ ಪೋಸ್ಟ್‌ ಮಾಡುತ್ತಿದ್ದ 7 ಮಂದಿ ಅರೆಸ್ಟ್

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಶಾಸಕರ ತೇಜೋವಧೆ ಪೋಸ್ಟ್‌ ಮಾಡುತ್ತಿದ್ದ 7 ಮಂದಿ ಅರೆಸ್ಟ್

ಸಾಮಾಜಿಕ ಜಾಲತಾಣದಲ್ಲಿ ಬೇಕಾಬಿಟ್ಟಿಯಾಗಿ ತೇಜೋವಧೆ ಪೋಸ್ಟ್‌ಗಳನ್ನು ಹಾಕುತ್ತಿದ್ದವರಿಗೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದ ಪೊಲೀಸರು ಪಾಠ ಕಲಿಸಿದ್ದಾರೆ. ಬಿಎಸ್‌ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ಅವರ ತೇಜೋವಧೆ ಮಾಡುತ್ತಿದ್ದವರನ್ನು ಕೊಳ್ಳೆಗಾಲ ಪೊಲೀಸರು ಬಂಧಿಸಿದ್ದಾರೆ. ಅತ್ಯಂತ ವ್ಯವಸ್ಥಿತವಾಗಿ ತಂಡ ಕಟ್ಟಿಕೊಂಡು ಕಳೆದ ಒಂದು ವರ್ಷದಿಂದ ಶಾಸಕ ಎನ್. ಮಹೇಶ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲಾಗುತ್ತಿತ್ತು. ಈ ಬಗ್ಗೆ ದೂರು ಕೊಟ್ಟರೂ ಯಾವುದೇ ಪ್ರಯೋಜವಾಗಿರಲಿಲ್ಲ. ಹೀಗಾಗಿ ನ್ಯಾಯಾಲಯದ ಮೂಲಕ ಶಾಸಕ ಮಹೇಶ್ ಅವರ ಬೆಂಬಲಿಗ ದೂರು ದಾಖಲಿಸಿದ್ದರು.

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಜೆ.ಎಂ.ಎಫ್.ಸಿ ನ್ಯಾಯಾಲಯದ ಸೂಚನೆಯಂತೆ ತೇಜೋವಧೆ ಹಾಗೂ ಅವಹೇಳನಕಾರಿ ಪೋಸ್ಟ್‌ಗಳ ಕುರಿತು ಶಾಸಕ ಎನ್. ಮಹೇಶ್ ಬೆಂಬಲಿಗ ಸಿದ್ದರಾಜು ಎಂಬುವರು ದೂರು ದಾಖಲಿಸಿದ್ದರು. ನ್ಯಾಯಾಲಯದ ಸೂಚನೆಯಂತೆ ತನಿಖೆ ನಡೆಸಿದ್ದ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಎನ್. ಮಹೇಶ್ ಮೇಲೆ ತೇಜೋವಧೆ, ಅವಹೇಳನಕಾರಿ ಪೋಸ್ಟ್ ಮಾಡುತ್ತಿದ್ದ ಏಳು ಜನರ ಮೇಲೆ ಎಫ್.ಐ.ಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು.

 ಕಳೆದ ಒಂದು ವರ್ಷದಿಂದ ವಾಟ್ಸ್‌ಆಯಪ್‌, ಫೇಸ್‌ಬುಕ್‌ಗಳಲ್ಲಿ ಕೆಟ್ಟ ಪದಗಳಿಂದ ನಿಂದನೆ ಮಾಡುತ್ತಿದ್ದರು. ಹೀಗೆ ಪೋಸ್ಟ್ ಮಾಡುತ್ತಿದ್ದ ಶ್ರೀಕಾಂತ್ ಅಪ್ಪಗೆರೆ, ಮಹಿಮಹೀಷ, ಮೋಹನ್ ಮೂಕನಾಯಕ, ಸದಾಶಿವ ರಾವಣ್, ಮುರುಳೀಧರ ಮೌರ್ಯ ಹಾಗೂ ರವಿಕುಮಾರ್ ಎಂಬುವರ ಮೇಲೆ ದೂರು ದಾಖಲಾಗಿತ್ತು. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ನ್ಯಾಯಾಲಯದ ಸೂಚನೆಯಂತೆ ಎನ್. ಮಹೇಶ್ ಅಭಿಮಾನಿ ಬಳಗದ ಸಿದ್ದರಾಜು ಪ್ರಕರಣ ದಾಖಲಿಸಿದ್ದರು.

TRENDING