Monday, September 28, 2020
Home ಕೋವಿಡ್-19 ಬಾಗಲಕೋಟೆ: ಜಿಲ್ಲೆಯಲ್ಲಿ 122 ಮಂದಿ ಸೋಂಕಿನಿಂದ ಗುಣಮುಖ, 138 ಹೊಸ ಪ್ರಕರಣ ಪತ್ತೆ

ಇದೀಗ ಬಂದ ಸುದ್ದಿ

ಯಡಿಯೂರಪ್ಪ ಡೋಂಗಿ ರೈತ ನಾಯಕ: ಸಿದ್ದರಾಮಯ್ಯ ವಾಗ್ದಾಳಿ

 ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಡೋಂಗಿ ರೈತ ನಾಯಕ. ಪ್ರಮಾಣ ವಚನ ತೆಗೆದುಕೊಳ್ಳುವಾಗ ರೈತನ ಮಗ ಎಂದು ರೈತರ ಹೆಸರು ಹೇಳುತ್ತಾರೆ. ಅವರು ನಿಜವಾಗಲೂ ರೈತನ ಮಗ ಆಗಿದ್ದರೆ, ಭೂ...

ಅನ್ ಲಾಕ್ 5.0: ಅಕ್ಟೋಬರ್ 1ರಿಂದ ಯಾವೆಲ್ಲ...

ನಾಲ್ಕನೇ ಹಂತದ ಕೋವಿಡ್​-19 ಲಾಕ್​ಡೌನ್​ ಸಡಿಲಿಕೆ ಅಂದರೆ ಅನ್​ಲಾಕ್​ 4.0 ಇದೇ ಸೆಪ್ಟೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿಯಾಗಲಿದೆ. ಇನ್ನು ಕೇಂದ್ರ ಸರ್ಕಾರವು ಅನ್​ಲಾಕ್​ 5.0...

ಗದಗ ಶಾಸಕ ಎಚ್.ಕೆ. ಪಾಟೀಲರಿಗೆ ಕೊರೊನಾ ದೃಢ

 ಗದಗ: ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕಿನ...

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಾಗಲಕೋಟೆ: ಜಿಲ್ಲೆಯಲ್ಲಿ 122 ಮಂದಿ ಸೋಂಕಿನಿಂದ ಗುಣಮುಖ, 138 ಹೊಸ ಪ್ರಕರಣ ಪತ್ತೆ

ಬಾಗಲಕೋಟೆ: ಜಿಲ್ಲೆಯಲ್ಲಿ 122 ಮಂದಿ ಕೋವಿಡ್‍ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ‌. ಶನಿವಾರ ಹೊಸದಾಗಿ 138 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 5060 ಕೋವಿಡ್ ಪ್ರಕರಣ ದೃಡಪಟ್ಟಿವೆ. ಈ ಪೈಕಿ ಒಟ್ಟು 4151 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲ್ಲೂಕಿನ 33, ಬಾದಾಮಿ 12, ಹುನಗುಂದ 22, ಬೀಳಗಿ 3, ಮುಧೋಳ 51, ಜಮಖಂಡಿ 16 ಹಾಗೂ ಬೇರೆ ಜಿಲ್ಲೆಯ ಒಬ್ಬರು ಸೇರಿದ್ದಾರೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ 1335 ಸ್ಯಾಂಪಲ್‍ಗಳ ವರದಿ ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 526 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 49,351 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 42,651 ನೆಗಟಿವ್ ಪ್ರಕರಣ, 5060 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಒಟ್ಟು 66 ಮಂದಿ ಮೃತಪಟ್ಟಿದ್ದಾರೆ. ಇನ್ನು 848 ಮಾತ್ರ ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ನಾಲ್ವರು ಸಾವುಜಿಲ್ಲೆಯ ಬಾದಾಮಿ ನಗರದ ನಿವಾಸಿ 68 ವರ್ಷದ ವೃದ್ಧ ಆಗಸ್ಟ 11 ರಂದು ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಗಸ್ಟ್ 20 ರಂದು ಮೃತಪಟ್ಟಿದ್ದಾರೆ.

ಬಾದಾಮಿ ನಿವಾಸಿ 64 ವರ್ಷದ ವ್ಯಕ್ತಿ ಆಗಸ್ಟ್ 13 ರಂದು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ನ್ಯೂಮೋನಿಯಾ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಶನಿವಾರ ಮೃತಪಟ್ಟಿದ್ದಾರೆ.

ಬೀಳಗಿ ಪಟ್ಟಣದ ನಿವಾಸಿ 51 ವರ್ಷದ ಮಹಿಳೆ ಆಗಸ್ಟ್ 14 ರಂದು ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ನ್ಯೂಮೋನಿಯಾ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.

ಬಾದಾಮಿಯ 77 ವರ್ಷದ ಪುರುಷ ಆಗಸ್ಟ್ 18 ರಂದು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.

ಮೃತರನ್ನು ಕೋವಿಡ್ ಮಾರ್ಗಸೂಚಿ ಪ್ರಕಾರ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

TRENDING