Sunday, September 20, 2020
Home ದೆಹಲಿ ಉದ್ಯೋಗ ಮಾಹಿತಿ: ಸ್ಟಾಪ್ ಸೆಲೆಕ್ಷನ್ ಕಮಿಷನ್'ನಲ್ಲಿ (SSC) ಕಾನ್ಸ್'ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಉದ್ಯೋಗ ಮಾಹಿತಿ: ಸ್ಟಾಪ್ ಸೆಲೆಕ್ಷನ್ ಕಮಿಷನ್’ನಲ್ಲಿ (SSC) ಕಾನ್ಸ್’ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಸ್ಟಾಪ್ ಸೆಲೆಕ್ಷನ್ ಕಮಿಷನ್ (SSC) ದೆಹಲಿ ಪೊಲೀಸ್ ವಿಭಾಗದಲ್ಲಿ ಖಾಲಿ ಇರುವ ಕಾನ್ಸ್’ಟೇಬಲ್ (ಎಕ್ಸಿಕ್ಯೂಟಿವ್) ಪುರುಷ ಮತ್ತು ಮಹಿಳೆ ಸುಮಾರು 5846 (ಮಹಿಳೆಯರಿಗೆ 1944 ಹುದ್ದೆಗಳು) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು. (20202 ಸೆಪ್ಟೆಂಬರ್, 07 ಕ್ಕೆ ಅನ್ವಯವಾಗುವಂತೆ), ದೆಹಲಿ ಪೊಲೀಸ್‍ನಲ್ಲಿ ಕಾರ್ಯನಿರ್ವಹಿಸುತ್ತಿರುವ, ನಿವೃತ್ತಿ ಹೊಂದಿದ ಸಿಬ್ಬಂದಿಗಳ ಮಕ್ಕಳಿಗೆ ವಿದ್ಯಾರ್ಹತೆಯಲ್ಲಿ ವಿನಾಯಿತಿ ಇದ್ದು, ಪ್ರಥಮ ಪಿಯುಸಿ ತೇರ್ಗಡೆ ಹೊಂದಿರಬೇಕು. ಪುರುಷ ಅಭ್ಯರ್ಥಿಗಳು ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ದಿನದಂದು ಕಡ್ಡಾಯವಾಗಿ ಚಾಲ್ತಿಯಲ್ಲಿರುವ ಚಾಲನಾ ಪರವಾನಿಗೆ (ಮೋಟಾರ್ ಸೈಕಲ್ ಅಥವಾ ಕಾರು) ಹೊಂದಿರಬೇಕು.

2020ರ ಜುಲೈ, 01 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 25 ವರ್ಷ ವಯೋಮಿತಿಯಲ್ಲಿರಬೇಕು. ಹಿಂದುಳಿದ ವರ್ಗದ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಧವೆಯರು, ಮಾಜಿ ಸೈನಿಕರು ಹಾಗೂ ದೆಹಲಿ ಪೊಲೀಸ್ ಇಲಾಖಾ ಅಭ್ಯರ್ಥಿಗಳು ಮತ್ತು ದೆಹಲಿ ಪೊಲೀಸ್ ಕರ್ತವ್ಯ ನಿರ್ವಹಿಸುತ್ತಿರುವ, ನಿವೃತ್ತಿ ಹೊಂದಿದ ಸಿಬ್ಬಂದಿಗಳ ಮಕ್ಕಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ನೇಮಕಾತಿಯು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. (ಇಂಗ್ಲೀಷ್/ಹಿಂದಿ), ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ದೆಹಲಿ ಪೊಲೀಸ್ ಮುಖಾಂತರ ದೆಹಲಿಯಲ್ಲಿ ನಡೆಸಲಾಗುವುದು.

ಅರ್ಜಿಯನ್ನು ವೆಬ್‍ಸೈಟ್ https://ssc.nic.in ನಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 07 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ:080-25502520/ 9483862020, ವೆಬ್‍ಸೈಟ್ https://ssc.nic.in ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

TRENDING