Tuesday, September 22, 2020
Home ಬೆಂಗಳೂರು ಗಣೇಶನ ಅವತಾರದಲ್ಲಿ ಮಿಂಚಿದ ‘ಯಶ್’ ಪುತ್ರ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಗಣೇಶನ ಅವತಾರದಲ್ಲಿ ಮಿಂಚಿದ ‘ಯಶ್’ ಪುತ್ರ

ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದಾದ ಮಕ್ಕಳ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತವೆ. ಪುತ್ರಿ ಐರಾ ಮತ್ತು ಜೂ.ಯಶ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಂತೆ ಕ್ಷಣಾರ್ಧದಲ್ಲಿ ವೈರಲ್ ಆಗುತ್ತೆ. ರಾಧಿಕಾ ಪಂಡಿತ್ ಆಗಾಗ ಮಕ್ಕಳ ಫೋಟೋವನ್ನು ಮತ್ತು ವಿಡಿಯೋಗಳನ್ನು ಶೇರ್ ಮಾಡುತ್ತಿರುತ್ತಾರೆ.

ಹಬ್ಬದ ಸಂದರ್ಭದಲ್ಲಿ ವಿಶೇಷವಾಗಿ ಮಾಡಿಸುವ ಫೋಟೋಶೂಟ್ ನೋಡಲು ಅಭಿಮಾನಿಗಳು ಕಾತರರಾಗಿರುತ್ತಾರೆ. ಇತ್ತೀಚಿಗೆ ಕೃಷ್ಣ ಜನ್ಮಾಷ್ಟಮಿ ದಿನ ರಾಧೆ ಕೃಷ್ಣ ಆಗಿ ಮಿಂಚಿದ್ದ ಯಶ್ ಮುದ್ದಾದ ಮಕ್ಕಳು ಎಲ್ಲರ ಗಮನ ಸೆಳೆದಿದ್ದರು.

ಇದೀಗ ಗೌರಿ ಗಣೇಶ ಹಬ್ಬದ ಸಂಭ್ರಮ. ಗಣೇಶ ಚತುರ್ಥಿಯನ್ನು ಅದ್ದೂರಿಯಾಗಿ ಆಚರಣೆ ಮಾಡದಿದ್ದರೂ, ಸರಳವಾಗಿ ಮನೆಯಲ್ಲೇ ಎಲ್ಲರೂ ಆಚರಣೆ ಮಾಡಿದ್ದಾರೆ. ಪುಟ್ಟ ಗಣೇಶನ ಪೂಜಿಸಿ ಸಂಭ್ರಮಿಸಿದ್ದಾರೆ. ವಿಶೇಷ ಅಂದರೆ ರಾಕಿಂಗ್ ಸ್ಟಾರ್ ಯಶ್ ಪುತ್ರ ಗಣೇಶನ ಅವತಾರದಲ್ಲಿ ಮಿಂಚಿದ್ದಾನೆ. ಯಶ್ ಮಗನ ಫೋಟೋವನ್ನು ಗಣೇಶನ ರೀತಿ ಎಡಿಟ್ ಮಾಡಲಾಗಿದೆ.

 ಪುಟ್ಟ ಗಣೇಶನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಕ್ಕದಲ್ಲಿ ಮೂಷಿಕನನ್ನು ಕೂರಿಸಿಕೊಂಡು, ಕೈಯಲ್ಲಿ ಮೋದಕ ಹಿಡಿದು ಕುಳಿತಿರುವ ಪುಟಾಣಿ ಗಣಪನಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಫೋಟೋವನ್ನು ಸ್ವತಹ ಯಶ್ ಶೇರ್ ಮಾಡಿ “ಸೂಪರ್ ನನ್ನ ಪುಟ್ಟ ಗಣೇಶ” ಎಂದು ಕ್ಯಾಪ್ಷನ್ ನೀಡಿದ್ದಾರೆ.

ಇನ್ನೂ ನಟ ಯಶ್ ಕೆಜಿಎಫ್-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಕೊನೆಯ ಹಂತದ ಚಿತ್ರೀಕರಣ ನಡೆಯಬೇಕಿದ್ದು ಹಬ್ಬದ ಬಳಿಕ ಚಿತ್ರತಂಡ ಚಿತ್ರೀಕರಣಕ್ಕೆ ಹೊರಡಲಿದೆ. ಕೊರೊನಾ ಬಳಿಕ ಈಗಾಗಲೆ ಸಾಕಷ್ಟು ಸಿನಿಮಾತಂಡ ಚಿತ್ರೀಕರಣ ಪ್ರಾರಂಭಮಾಡಿದೆ. ಇದೀಗ ಕೆಜಿಎಫ್-2 ತಂಡ ಕೂಡ ಚಿತ್ರೀಕರಣಕ್ಕೆ ಹೊರಡುವ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಸಾಮಾಜಿಕ ಜಾಲತಾಣದಲ್ಲಿ ಸುಳಿವು ನೀಡಿದ್ದಾರೆ.

TRENDING