Friday, September 25, 2020
Home Exclusive ಅತಿವೃಷ್ಠಿ ಹೆಚ್ಚಿನ ಪರಿಹಾರಕ್ಕಾಗಿ ಮುಂದಿನ ವಾರ ಸಿಎಂ ದೆಹಲಿಗೆ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಅತಿವೃಷ್ಠಿ ಹೆಚ್ಚಿನ ಪರಿಹಾರಕ್ಕಾಗಿ ಮುಂದಿನ ವಾರ ಸಿಎಂ ದೆಹಲಿಗೆ

ಅತಿವೃಷ್ಠಿಯಿಂದಾಗಿರುವ ಹಾನಿಯ ಸಂಬಂಧ ಇಂದು ನಡೆದ ಶಾಸಕರ ಸಭೆಯಲ್ಲಿ , ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುತ್ತೆ. ಒಟ್ಟಾರೆಯಾಗಿ ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರವೇ‌ ದೆಹಲಿಗೆ ಹೋಗಿ ಹೆಚ್ಚುವರಿ ಪರಿಹಾರವನ್ನ ಬಿಡುಗಡೆಗೆ ಮಾಡುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಜಲ ಪ್ರವಾಹಕ್ಕೆ ಸಂಬಂಧಿಸಿದಂತೆ ಇಂದು ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಸಿಎಂ ಮಾತನಾಡಿದರು. ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯದಲ್ಲಿ ತೊಡಬೇಕು. ಕೋವಿಡ್-19 ಇರುವುದರಿಂದ ಎನ್.ಡಿ‌.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು. ಇನ್ನು ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ, ಇನ್ನು ಹೆಚ್ಚಿನ ಅನುದಾನದ ಅವಶ್ಯಕತೆ ಇದ್ದರೆ ತಕ್ಷಣ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಬೆಳಗಾವಿ-ಧಾರವಾಡ ಸಮಸ್ಯೆಗಳು ಗಮನಕ್ಕೆ ಬಂದಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇನ್ನು ಇದೆ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ಮಾಹಿತಿಯನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿವರಿಸಿದರು.

ಆನಂದ ಕೋಳಿಗುಡ್ಡೆ

ದಿ ನ್ಯೂಸ್ ೨೪ ಕನ್ನಡ ಬೆಳಗಾವಿ

TRENDING