Monday, September 28, 2020
Home ಕೋವಿಡ್-19 ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾಗೆ ಮೂವರು ಬಲಿ, ಮೃತರ ಸಂಖ್ಯೆ 39ಕ್ಕೆ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾಗೆ ಮೂವರು ಬಲಿ, ಮೃತರ ಸಂಖ್ಯೆ 39ಕ್ಕೆ

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಮತ್ತೆ ಮೂವರು ಕೋವಿಡ್‌ ಸೋಂಕಿತರು ಮೃತಪಟ್ಟಿದ್ದಾರೆ. ಇಬ್ಬರು ಕೋವಿಡ್‌ನಿಂದಾಗಿ ನಿಧನರಾಗಿದ್ದಾರೆ. ಮತ್ತೊಬ್ಬರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಂತರ ನಡೆಸಿದ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 39 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಕೋವಿಡ್‌ನಿಂದಾಗಿ 26 ಹಾಗೂ ಇತರ ಅನಾರೋಗ್ಯದಿಂದ 13 ಮಂದಿ ನಿಧನರಾಗಿದ್ದಾರೆ.

ಚಾಮರಾಜನಗರದ 65 ವರ್ಷದ ಮಹಿಳೆ (ರೋಗಿ ಸಂಖ್ಯೆ-2,49,684) ಆಗಸ್ಟ್‌ 16ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಅವರು ಮೃತಪಟ್ಟಿದ್ದಾರೆ.

ಆಗಸ್ಟ್‌ 20ರಂದು ಸೋಂಕು ದೃಢಪಟ್ಟಿದ್ದ ಚಾಮರಾಜನಗರದ 60 ವರ್ಷದ ಮಹಿಳೆ (2,77,305) ಭಾನುವಾರ ಮೃತಪಟ್ಟಿದ್ದಾರೆ.

ಕೊಳ್ಳೇಗಾಲದ 70 ವರ್ಷದ ವೃದ್ಧೆಯೊಬ್ಬರು ತೀವ್ರ ಹೃದಯಾಘಾತಕ್ಕೆ ಒಳಗಾಗಿ ಶನಿವಾರ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಾಗಿದ್ದರು. ಅಂದೇ ಅವರು ಸಾವಿಗೀಡಾಗಿದ್ದರು. ನಂತರ ಗಂಟಲು ದ್ರವ ಸಂಗ್ರಹಿಸಿ ಕೋವಿಡ್‌ ಪರೀಕ್ಷೆ ನಡೆಸಿದಾಗ ಅವರಲ್ಲಿ ಸೋಂಕು ಇರುವುದು ಪತ್ತೆಯಾಗಿತ್ತು.

2,069ಕ್ಕೆ ಏರಿಕೆ: ಜಿಲ್ಲೆಯಲ್ಲಿ ಶುಕ್ರವಾರ 30 ಹೊಸ ಪ್ರಕರಣಗಳು ವರದಿಯಾಗಿವೆ. 15 ಮಂದಿ ಸೋಂಕು ಮುಕ್ತರಾಗಿದ್ದಾರೆ. ಈವರೆಗೆ 2,069 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 1,562 ಮಂದಿ ಗುಣಮುಖರಾಗಿದ್ದಾರೆ. ಸದ್ಯ 468 ಸಕ್ರಿಯ ಪ್ರಕರಣಗಳಿವೆ. 214 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 24 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಸೋಮವಾರ 349 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ಆರ್‌ಟಿಪಿಸಿಆರ್‌ನಲ್ಲಿ 270, ರ‍್ಯಾಪಿಡ್‌ ಆಯಂಟಿಜೆನ್‌ 75 ಹಾಗೂ ಟ್ರು ನಾಟ್‌ 5 ಪರೀಕ್ಷೆಗಳನ್ನು ನಡೆಸಲಾಗಿದೆ. 30 ಮಂದಿಯಲ್ಲಿ ಸೋಂಕು ದೃಢಪಟ್ಟು, 349 ವರದಿಗಳು ನೆಗೆಟಿವ್‌ ಬಂದಿವೆ.

30 ಹೊಸ ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ 12, ಯಳಂದೂರಿನ ಏಳು, ಕೊಳ್ಳೇಗಾಲ ತಾಲ್ಲೂಕಿನ ಆರು, ಗುಂಡ್ಲುಪೇಟೆಯ ಮೂವರು ಹಾಗೂ ಹನೂರು ತಾಲ್ಲೂಕಿನ ಇಬ್ಬರು ಇದ್ದಾರೆ.

ಗುಣಮುಖರಾದ 15 ಮಂದಿಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ಏಳು, ಚಾಮರಾಜನಗರ ಐವರು, ಯಳಂದೂರಿನ ಇಬ್ಬರು ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ಒಬ್ಬರು ಇದ್ದಾರೆ.

TRENDING