Thursday, September 24, 2020
Home ದೆಹಲಿ ಅನ್ ಲಾಕ್ 4: ಮೆಟ್ರೋ ಸಂಚಾರಕ್ಕೆ ಅನುಮತಿ ನೀಡುವ ಸಾಧ್ಯತೆ

ಇದೀಗ ಬಂದ ಸುದ್ದಿ

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಡಿ. ಜೆ. ಹಳ್ಳಿ ಗಲಭೆ ಪ್ರಕರಣ ;...

ಬೆಂಗಳೂರು ನಗರದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಬಗ್ಗೆ ಎನ್‌ಐಎ ತನಿಖೆ ಆರಂಭವಾಗಿದೆ. ನಗರದ 12 ಕಡೆಗಳಲ್ಲಿ ಎನ್‌ಐಎ...

ಅಧಿವೇಶನ ಮುಗಿಯುತ್ತಿದ್ದಂತೆಯೇ ಭಾರತಕ್ಕೆ ಬಂದಿಳಿದ ಅಮ್ಮ-ಮಗ

 ನವದೆಹಲಿ: ಇತ್ತ ಮುಂಗಾರು ಅಧಿವೇಶನ ಶುರುವಾಗುತ್ತಿದ್ದಂತೆಯೇ ವೈದ್ಯಕೀಯ ಚಿಕಿತ್ಸೆ ಎಂದು ಹೇಳಿ ಅಮೆರಿಕಕ್ಕೆ ಹಾರಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅಧಿವೇಶನ ಮುಗಿಯುತ್ತಿದ್ದಂತೆಯೇ ಕೊನೆಗೂ...

ಅನ್ ಲಾಕ್ 4: ಮೆಟ್ರೋ ಸಂಚಾರಕ್ಕೆ ಅನುಮತಿ ನೀಡುವ ಸಾಧ್ಯತೆ

ಸೆಪ್ಟೆಂಬರ್ ತಿಂಗಳಿಂದ ನಾಲ್ಕನೇ ಹಂತದ ಅನ್ಲಾಕ್ಪ್ರಕ್ರಿಯೆ ಆರಂಭಗೊಳ್ಳಿದೆ. ಶೀಘ್ರವೇ ಕೇಂದ್ರ ಸರ್ಕಾರ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಲಿದ್ದು, ಮೆಟ್ರೋ ಸಂಚಾರ ಪುನರಾರಂಭಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಶಾಲಾಕಾಲೇಜು, ಸಿನಿಮಾ ಮಂದಿರಗಳ ಮೇಲಿರುವ ನಿರ್ಬಂಧ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ. ಮೆಟ್ರೋ ಸೇವೆಯನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಆದರೆ, ಮೆಟ್ರೋ ಸಂಚಾರ ಆರಂಭಿಸಬೇಕೋ ಅಥವಾ ಬೇಡವೋ ಎಂಬುದು ವಿವೇಚನೆಯನ್ನು ಆಯಾ ರಾಜ್ಯಗಳಿಗೆ ಬಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಸಿಎಂ ಅರವಿಂದ್​ ಕೇಜ್ರಿವಾಲ್​ ದೆಹಲಿಯಲ್ಲಿ ಮೆಟ್ರೋ ಸೇವೆ ಆರಂಭಿಸಲು ಅನುಮತಿ ನೀಡುವಂತೆ ಕೇಂದ್ರದ ಬಳಿ ಮನವಿ ಮಾಡಿದ್ದರು. ಈ ಮನವಿಯನ್ನು ಪರಿಗಣಿಸಿರುವ ಕೇಂದ್ರ ಸರ್ಕಾರ ಅನ್​ಲಾಕ್​ 4-0ನಲ್ಲಿ ಮೆಟ್ರೋ ಸಂಚಾರಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜುಲೈ 30ರಿಂದ ಅನ್​ಲಾಕ್​ 3 ಆರಂಭಗೊಂಡಿತ್ತು. ಈ ವೇಳೆ ರಾತ್ರಿ ವೇಳೆ ಹೇರಲಾಗಿದ್ದ ಕರ್ಫ್ಯೂವನ್ನು ತೆರವುಗೊಳಿಸಲಾಗಿತ್ತು. ಜಿಮ್​ ಹಾಗೂ ಯೋಗ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಲಾಗಿತ್ತು. ಆದರೆ, ಸಿನಿಮಾ ಮಂದಿರ, ಶಾಲಾ-ಕಾಲೇಜುಗಳನ್ನು ತೆರೆಯಲು ಅವಕಾಶ ನೀಡಿರಲಿಲ್ಲ.

ದೇಶದಲ್ಲಿ ಕೊರೋನಾ ಕಾಣಿಸಿಕೊಂಡು ಸುಮಾರು ಏಳು ತಿಂಗಳಾಗುತ್ತಿದೆ. ಈ ನಡುವೆ ಕೊರೋನಾ ಸೋಂಕು ಕಡಿಮೆ ಇದ್ದಾಗ ಲಾಕ್ಡೌನ್ ಮಾಡಿ ಹೆಚ್ಚಾದಾಗ ಅನ್ ಲಾಕ್ ಮಾಡಿದ ಪರಿಣಾಮ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 31 ಲಕ್ಷ‌ದ ಗಡಿ ದಾಟಿದೆ. ಅಲ್ಲದೆ ದೇಶದಲ್ಲಿ ಆಗಸ್ಟ್ 6 ನಂತರ ಪ್ರತಿ ದಿನ 60 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ದಾಖಲಾಗುವ ಟ್ರೆಂಡ್ ಶುರುವಾಗಿ ಅದೇ ಮುಂದುವರೆಯುತ್ತಿದೆ.

ಆಗಸ್ಟ್ 24ರಂದು 60,975 ಪ್ರಕರಣಗಳು ವರದಿಯಾಗಿದ್ದು, ದೇಶದ ಕೊರೋನಾ ಪೀಡಿತರ ಸಂಖ್ಯೆ 31,67,324ಕ್ಕೆ ಏರಿಕೆಯಾಗಿದೆ. ಆಗಸ್ಟ್ 24ರಂದು 60,ಸೋಮವಾರ 848 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 58,390ಕ್ಕೆ ಏರಿಕೆಯಾಗಿದೆ.  

TRENDING