Tuesday, September 22, 2020
Home ಜಿಲ್ಲೆ ಜಿಲ್ಲಾ ಸುದ್ದಿ ರಾಯಘಡ್ ಕಟ್ಟಡ ಕುಸಿತ : 70 ಜನರ ರಕ್ಷಣೆ

ಇದೀಗ ಬಂದ ಸುದ್ದಿ

ಡೆಬಿಟ್ / ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಇಲ್ಲಿದೆ...

 ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಬಳಕೆ ಮಾಡುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾಯಿಸುತ್ತಿದೆ. ಈ ನಿಯಮಗಳು ಸೆಪ್ಟೆಂಬರ್...

ಗೋಧಿಗೆ ಕನಿಷ್ಠ ಬೆಂಬಲ ಬೆಲೆ ಏರಿಸಿ ಮೋದಿ...

ನೂತನ ಕೃಷಿ ಮಸೂದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ಇದಕ್ಕೆ ವಿರೋಧ ವ್ಯಕ್ತಪಡಿಸಿ ದೇಶದಾದ್ಯಂತ ರೈತರು ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ.

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ರಾಯಘಡ್ ಕಟ್ಟಡ ಕುಸಿತ : 70 ಜನರ ರಕ್ಷಣೆ

 ಮುಂಬೈ, ಆಗಸ್ಟ್.25: ಮಹಾರಾಷ್ಟ್ರ ರಾಯಘಡ್ ಜಿಲ್ಲೆ ಮಹದ್ ಪ್ರದೇಶದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದ ಘಟನೆಯಲ್ಲಿ ಇದುವರೆಗೂ ಒಬ್ಬರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿಯು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಈಗಾಗಲೇ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ 60ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಮಹಾರಾಷ್ಟ್ರದ ಸಚಿವೆ ಅದಿಥಿ ತತ್ಕಾರೆ ಮತ್ತು ಏಕನಾಥ್ ಸಿಂಧೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅದಿಥಿ ತತ್ಕಾರೆ, 60 ಮಂದಿಯನ್ನು ರಕ್ಷಿಸಲಾಗಿದ್ದು, 30ಕ್ಕೂ ಹೆಚ್ಚು ಜನರು ಇನ್ನೂ ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ ಎಂದರು.

3 ಎನ್ ಡಿಆರ್ಎಫ್ ತಂಡದಿಂದ ಕಾರ್ಯಾಚರಣೆ:

ಮಹದ್ ಪ್ರದೇಶದಲ್ಲಿ ಸಂಭವಿಸಿದ ಕಟ್ಟಡ ಕುಸಿತ ಅವಘಡದಲ್ಲಿ ಇದುವರೆಗೂ ಒಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಇನ್ನು ಕೆಲವರು ಗುಣಮುಖರಾಗಿದ್ದಾರೆ. ಸ್ಥಳದಲ್ಲಿ ಮೂರು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಈ ಘಟನೆ ಕಾರಣದ ಕುರಿತು ತನಿಖೆ ನಡೆಸುವುದಕ್ಕೆ ವಿಶೇಷ ತನಿಖಾ ತಂಡವನ್ನು ರಚಿಸಬೇಕಿದೆ ಎಂದು ಅದಿಥಿ ತತ್ಕಾರೆ ತಿಳಿಸಿದ್ದಾರೆ. ಈ ಕಟ್ಟಡವನ್ನು ನಿರ್ಮಿಸಿ ಐದಾರು ವರ್ಷಗಳೇ ಕಳೆದಿದ್ದು, ಐದು ಅಂತಸ್ತಿನ ಕಟ್ಟಡದಲ್ಲಿ 40 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿದೆ.

TRENDING