Wednesday, September 23, 2020
Home ಅಂತರ್ ರಾಜ್ಯ ಗುಜರಾತ್ ನಲ್ಲಿ ವರುಣನ ಆರ್ಭಟಕ್ಕೆ 9 ಮಂದಿ ಬಲಿ!

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಗುಜರಾತ್ ನಲ್ಲಿ ವರುಣನ ಆರ್ಭಟಕ್ಕೆ 9 ಮಂದಿ ಬಲಿ!

ಕಳೆದ ಐದು ದಿನಗಳಿಂದ ಗುಜರಾತ್ ನಲ್ಲಿ ಮಾನ್ಸೂನ್ ಮಳೆಯು ಅಬ್ಬರಿಸಿ ಬೊಬ್ಬಿರಿಯುತ್ತಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜಸ್ಥಾನದಲ್ಲೂ ಅತಿಹೆಚ್ಚು ಮಳೆಯಾಗಿರುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಗುಜರಾತ್ ನ ಕಾದಿ ಪ್ರದೇಶದಲ್ಲಿ 33 ಸೆಂ.ಮೀ ಮತ್ತು ಉಮೇರ್ಪದಾ ಪ್ರದೇಶದಲ್ಲಿ 26 ಸೆಂ.ಮೀ ಮಳೆಯಾಗಿದೆ. ಸೌರಾಷ್ಟ್ರ, ಕುಟ್ಚ್, ಜೋಡಿಯಾ ಪ್ರದೇಶಗಳಲ್ಲಿ 34 ಸೆಂ.ಮೀ ಮಳೆಯಾಗಿದೆ. ಟಂಕರ್ ನಲ್ಲಿ 27 ಸೆಂ.ಮೀ, ಮೊರ್ಬಿ 25 ಸೆಂ.ಮೀ, ಬೆಚರಾಜ್ ಸೆಂ.ಮೀ, ಸರಸ್ವತಿ 21 ಸೆಂ.ಮೀ, ಕಂದ್ಲಾ ಏರೋಡ್ರಾಮೆ ಮತ್ತು ಸುರೇಂದ್ರನಗರ್ ನಲ್ಲಿ 18 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು, ಸೋಮವಾರ ಒಂದೇ ದಿನ ಗುಜರಾತ್ ನಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಸಿಲುಕಿ 9 ಮಂದಿ ಪ್ರಾಣ ಬಿಟ್ಟಿದ್ದು, 1900 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ರಾಜಸ್ಥಾನದಲ್ಲಿ 24 ಗಂಟೆಗಳಲ್ಲಿ ಭಾರಿ ಮಳೆ:

ಕಳೆದ 24 ಗಂಟೆಗಳಲ್ಲಿ ರಾಜಸ್ಥಾನದಲ್ಲೂ ಭಾರಿ ಮಳೆಯಾಗಿದೆ. ಲೋಹಾರಿ, ಬನಸ್ವಾರ, ಭುಂಗ್ರಾ ಪ್ರದೇಶಗಳಲ್ಲಿ 18 ರಿಂದ 20 ಸೆಂ.ಮೀ ಮಳೆಯಾಗಿರುವ ಬಗ್ಗೆ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ನವದೆಹಲಿಯಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ಇನ್ನು, ಮಳೆಯ ದಾಖಲೆಯ ಪ್ರಕಾರ, 15 ಮಿ.ಮೀ ಮಳೆಯನ್ನು ಅಲ್ಪ, 15 ರಿಂದ 64.5 ಮಿ.ಮೀ ಮಳೆಯನ್ನು ಸಾಧಾರಣ ಮತ್ತು 64.5 ಮಿ.ಮೀಟರ್ ಗಿಂತ ಹೆಚ್ಚಿನ ಮಳೆಯನ್ನು ಭಾರಿ ಮಳೆ ಎಂದು ಗುರುತಿಸಲಾಗುತ್ತದೆ.

TRENDING