Tuesday, September 22, 2020
Home ದೆಹಲಿ ಸಚಿವ ಚೇತನ್ ಚೌವ್ಹಾಣ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕು : ಶಿವಸೇನೆ ಮನವಿ

ಇದೀಗ ಬಂದ ಸುದ್ದಿ

ತನ್ನ ಮಕ್ಕಳ ಚಿಕಿತ್ಸೆಗಾಗಿ ತಮ್ಮಎಲ್ಲ ಅಂಗಾಂಗ...

 ತಿರುವನಂತಪುರ: ತನ್ನ ಮಕ್ಕಳ ಚಿಕಿತ್ಸೆಗಾಗಿ ಕೇರಳದಲ್ಲಿ ತಾಯಿಯೊಬ್ಬರು ತಮ್ಮ ಎಲ್ಲ ಅಂಗಾಂಗಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಕೊಚ್ಚಿಯ ವರಪ್ಪುಳದಲ್ಲಿ ವಾಸಿಸುತ್ತಿರುವ ಈ ಮಹಿಳೆ ತನ್ನ ಗುಡಿಸಲ ಮುಂದೆ ಈ...

ಡೆಬಿಟ್ / ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಇಲ್ಲಿದೆ...

 ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಬಳಕೆ ಮಾಡುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾಯಿಸುತ್ತಿದೆ. ಈ ನಿಯಮಗಳು ಸೆಪ್ಟೆಂಬರ್...

ಗೋಧಿಗೆ ಕನಿಷ್ಠ ಬೆಂಬಲ ಬೆಲೆ ಏರಿಸಿ ಮೋದಿ...

ನೂತನ ಕೃಷಿ ಮಸೂದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ಇದಕ್ಕೆ ವಿರೋಧ ವ್ಯಕ್ತಪಡಿಸಿ ದೇಶದಾದ್ಯಂತ ರೈತರು ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ.

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಸಚಿವ ಚೇತನ್ ಚೌವ್ಹಾಣ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕು : ಶಿವಸೇನೆ ಮನವಿ

ಮಾಜಿ ಕ್ರಿಕೆಟರ್ ಹಾಗೂ ಸಚಿವ ಚೇತನ್ ಚೌಹಾಣ್ ಸಾವಿನ ಕುರಿತು ಸಿಬಿಐ ತನಿಖೆ ನಡೆಸುವಂತೆ ಉತ್ತರ ಪ್ರದೇಶದ ಶಿವಸೇನಾ ಘಟಕವು ಆಗ್ರಹಿಸಿದೆ. ಈ ಸಂಬಂಧ ರಾಜ್ಯಪಾಲೆ ಆನಂದಿ ಬೆನ್ ರನ್ನು ಭೇಟಿ ಮಾಡಿದ ಶಿವಸೇನೆ ನಿಯೋಗವು ಮನವಿ ಸಲ್ಲಿಸಿದೆ.

ಕೊರೊನಾವೈರಸ್ ಸೋಂಕಿನಿಂದ ಬಳಲುತ್ತಿದ್ದ ಸಚಿವ ಚೇತನ್ ಚೌಹಾಣ್ ಸಾವಿಗೆ ಮಹಾಮಾರಿಯಷ್ಟೇ ಕಾರಣವಲ್ಲ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ತೋರಿದ ನಿರ್ಲಕ್ಷ್ಯವೂ ಮುಖ್ಯ ಕಾರಣವಾಗಿದೆ ಎಂದು ಶಿವಸೇನೆ ಆರೋಪಿಸಿದೆ.

ಮೊದಲು ಸಚಿವ ಚೇತನ್ ಚೌಹಾಣ್ ರನ್ನು ಲಕ್ನೋದ ಸಂಜಯ್ ಗಾಂಧಿ ಪೋಸ್ಟ್ ಗ್ರ್ಯಾಜುಯೆಟ್ ಇನ್ಸ್ ಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಎಸ್ ಜಿಪಿಜಿಐ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ ವೈಫಲ್ಯದಂತಹ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಈ ವೇಳೆ 36 ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅವರು, ಆಗಸ್ಟ್.16ರಂದು ಚಿಕಿತ್ಸೆ ಫಲಕಾರಿಯಾಗದೇ ಚೇತನ್ ಚೌಹಾಣ್ ಪ್ರಾಣ ಬಿಟ್ಟಿದ್ದರು.

ಸರ್ಕಾರಿ ಆಸ್ಪತ್ರೆಗಳ ಮೇಲೆ ವಿಶ್ವಾಸವಿಲ್ಲವೇ?:

ಮಾಜಿ ಕ್ರಿಕೆಟರ್ ಮತ್ತು ಸಚಿವರಾದ ಚೇತನ್ ಚೌಹಾಣ್ ರನ್ನು ಎಂಥ ಸಂದರ್ಭದಲ್ಲಿ ಲಕ್ನೋದ ಎಸ್ ಜಿಪಿಜಿಐ ಆಸ್ಪತ್ರೆಯಿಂದ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಗೆ ಶಿಫ್ಟ್ ಮಾಡಿದರು. ಹೀಗೆ ಸ್ಥಳಾಂತರಿಸುವುದಕ್ಕೆ ಕಾರಣವಾದರೂ ಏನು. ಯಾಕೆ ಎಸ್ ಜಿಪಿಜಿಐ ಅಂತಹ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಗಳ ಮೇಲೆಯೇ ಸರ್ಕಾರಕ್ಕೆ ವಿಶ್ವಾಸವಿಲ್ಲವೇ ಎಂದು ಶಿವಸೇನೆ ಪ್ರಶ್ನಿಸಿದೆ.

ಎಸ್ ಜಿಪಿಜಿಐ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ನಡುವಳಿಕೆ ಬಗ್ಗೆ ಸ್ವತಃ ಸಚಿವರೇ ಹತಾಷೆ ವ್ಯಕ್ತಪಡಿಸಿದ್ದರು. ತಪ್ಪಿತಸ್ಥ ಸಿಬ್ಬಂದಿ ಮತ್ತು ವೈದ್ಯರ ಮೇಲೆಯ ಇದುವರೆಗೂ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಏಕೆ. ಕೊರೊನಾವೈರಸ್ ಸೋಂಕಿನಿಂದ ಇಬ್ಬರು ಸಚಿವರು ಅಸುನೀಗಿದ್ದರೂ ಸರ್ಕಾರವು ಇಂದಿಗೂ ನಿದ್ದೆಯಿಂದ ಎದ್ದಿಲ್ಲವೇ ಎಂದು ಶಿವಸೇನೆ ಪ್ರಶ್ನೆ ಮಾಡಿದೆ.

ಕಳೆದ ಆಗಸ್ಟ್.02ರಂದು ತಾಂತ್ರಿಕ ಶಿಕ್ಷಣ ಸಚಿವೆ ಕಮಲಾ ರಾಣಿ ಅವರಿಗೆ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡಿತ್ತು. ಅದಾಗಿ ಎರಡು ದಿನಗಳಲ್ಲೇ ಅವರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರು.

TRENDING