Sunday, September 20, 2020
Home ಜಿಲ್ಲೆ ಮೈಸೂರು ಟಿಎಚ್‌ಒ ಆತ್ಮಹತ್ಯೆ ಪ್ರಕರಣ ತನಿಖೆ ಆರಂಭ - ವಾರದೊಳಗೆ ವರದಿ ಸಲ್ಲಿಸುವಂತೆ ಸೂಚನೆ!

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಟಿಎಚ್‌ಒ ಆತ್ಮಹತ್ಯೆ ಪ್ರಕರಣ ತನಿಖೆ ಆರಂಭ – ವಾರದೊಳಗೆ ವರದಿ ಸಲ್ಲಿಸುವಂತೆ ಸೂಚನೆ!

ಮೈಸೂರು, ಆಗಸ್ಟ್ 25: ನಂಜನಗೂಡು ಟಿಎಚ್‌ಒ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ತನಿಖಾ ವರದಿ ನೀಡುವಂತೆ ಸರ್ಕಾರ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್ ಗೆ ಸೂಚಿಸಲಾಗಿದೆ.

ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣ ತನಿಖೆಯ ಆದೇಶ ಸ್ವೀಕರಿಸಿರುವ ಜಿ.ಸಿ.ಪ್ರಕಾಶ್ ಅವರು, ನಿನ್ನೆ ಸಂಜೆಯಿಂದ ತನಿಖೆ ಆರಂಭಿಸಿದ್ದಾರೆ.

ನಿನ್ನೆ ಮಧ್ಯಾಹ್ನವಷ್ಟೇ ಪ್ರಕಾಶ್ ಅವರು, ಪ್ರಕರಣದ ತನಿಖೆಗೆ ಸರ್ಕಾರದಿಂದ ಇನ್ನೂ ಆದೇಶ ಬಂದಿಲ್ಲ. ಇಂದು ಸಂಜೆಯೊಳಗೆ ಆದೇಶ ಬರುವ ಸಾಧ್ಯತೆಯಿದ್ದು, ಆದೇಶ ಬಂದ ಕೂಡಲೇ ತನಿಖೆ ಆರಂಭಿಸಿ ಒಂದು ವಾರದೊಳಗೆ ವರದಿ ನೀಡುತ್ತೇನೆ ಎಂದಿದ್ದರು.

ಡಾ.ನಾಗೇಂದ್ರ ಅವರು ಆ.20ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿನ ಬಳಿಕ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಮೇಲೆ ಆರೋಪಗಳು ಕೇಳಿಬಂದಿದ್ದವು. ಪ್ರಕರಣದಲ್ಲಿ ಮಿಶ್ರಾ ಅವರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. ಮಿಶ್ರಾ ಪರ, ವಿರೋಧವಾಗಿ ಪ್ರತಿಭಟನೆಗಳು ನಡೆದಿದ್ದವು. ಡಾ.ನಾಗೇಂದ್ರ ಸಾವಿಗೆ ಕಾರಣರಾಗಿರುವ ಮಿಶ್ರಾ ಅವರನ್ನು ವರ್ಗಾವಣೆ ಮಾಡುವಂತೆ ವೈದ್ಯರು ಬಿಗಿ ಪಟ್ಟು ಹಿಡಿದಿದ್ದರು. ಅದರಂತೆ ಮಿಶ್ರಾ ಅವರನ್ನು ಸರ್ಕಾರ ಈಗಾಗಲೇ ವರ್ಗಾವಣೆಗೊಳಿಸಿದೆ.

ಮಿಶ್ರಾ ಪರವಾಗಿ ಪಿಡಿಒಗಳು ಅವರ ವರ್ಗಾವಣೆ ಆದೇಶ ರದ್ದುಗೊಳಿಸುವಂತೆ ನಿನ್ನೆ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು. ಇತ್ತ ಮುಷ್ಕರ ಹಿಂಪಡೆದಿರುವ ವೈದ್ಯರು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

TRENDING