Saturday, September 19, 2020
Home Exclusive ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಕೊಪ್ಪಳದ ಪಾಲು

ಇದೀಗ ಬಂದ ಸುದ್ದಿ

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಕೊಪ್ಪಳದ ಪಾಲು

ಕಿನ್ನಾಳ ಕಲೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಮನ್ನಣೆ ಇರೋದು ಹೊಸತೇನಲ್ಲ. ವಿದೇಶಿ ವಿದ್ಯಾರ್ಥಿಗಳು ಕಿನ್ನಾಳ ಕಲೆ ಕಲಿಯಲು ಬಂದು ಹೋಗುತ್ತಿರುತ್ತಾರೆ. ಇದೀಗ ಕಿನ್ನಾಳದಲ್ಲಿ ದೇಶದ ಮೊದಲ ಆಟಿಕೆ ವಸ್ತು ಉತ್ಪನ್ನ ತಯಾರಿಕಾ ಕ್ಲಸ್ಟರ್ ತಲೆ ಎತ್ತಲು ಗ್ರಿನ್ ಸಿಗ್ನಲ್ ಸಿಕ್ಕಿದೆ. ಕಿನ್ನಾಳ ಆಟಿಕೆ ಖ್ಯಾತಿಯ ಕೊಪ್ಪಳದಲ್ಲಿ ಸ್ಥಾಪನೆಯಾಗುತ್ತಿರುವ ದೇಶದ ಮೊಟ್ಟ ಮೊದಲ ಆಟಿಕೆ ಕ್ಲಸ್ಟರ್‌ನಲ್ಲಿ ಹೂಡಿಕೆ ಮಾಡಲು ದೇಶ, ವಿದೇಶಗಳ ಆಟಿಕೆ ತಯಾರಕರಿಗೆ ರಾಜ್ಯ ಸರ್ಕಾರ ಮುಕ್ತ ಆಹ್ವಾನ ನೀಡಿದೆ.ರಾಜ್ಯ ಸರ್ಕಾರವು ಪ್ರಮುಖ ಆಟಿಕೆ ತಯಾರಕರ ಜತೆ ಸೋಮವಾರ ವೆಬಿನಾರ್‌ ಆಯೋಜಿಸಿತ್ತು. ಈ ಆಟಿಕೆ ಕ್ಲಸ್ಟರ್ ನಲ್ಲಿ ದೇಶ ಮತ್ತು ವಿದೇಶದ ಆಟಿಕೆ ತಯಾರಿಕರಿಗೆ ಅಗತ್ಯ ಸೌಲಭ್ಯ ಒದಗಿಸಲಿದೆ ಎಂದು ಸಭೆಗೆ ತಿಳಿಸಲಾಯಿತು.ಕೊಪ್ಪಳ ಟಾಯ್ ಕ್ಲಸ್ಟರ್ ರಾಷ್ಟ್ರೀಯ ಹೆದ್ದಾರಿ 63 ರಲ್ಲಿದ್ದು, ಉತ್ತಮ ಸಂಪರ್ಕ ವ್ಯವಸ್ಥೆ ಹೊಂದಿದೆ. ಜತೆಗೆ, ವಾಣಿಜ್ಯ ನಗರ ಹುಬ್ಬಳ್ಳಿಗೆ ಸಮೀಪದಲ್ಲಿದೆ.ಕುಶಲ ಕರ್ಮಿಗಳಿಗೆ ವಿಫುಲ ಉದ್ಯೋಗಾವಕಾಶ ಕಲ್ಪಿಸುವ ಆಟಿಕೆ ಉದ್ಯಮದಿಂದ ಮುಂಬರುವ ದಿನಗಳಲ್ಲಿ ಬರೋಬ್ಬರಿ 1 ಲಕ್ಷ ನೇರ ಹಾಗೂ ಪರೋಕ್ಷ ಉದ್ಯೋಗ ಸೃಷ್ಟಿ ಆಗುವ ನಿರೀಕ್ಷೆ ಇದೆ.ದೇಶದ ಪ್ರಮುಖ ಆಟಿಕೆ ಕ್ಲಸ್ಟರ್ ಆಗಿ ಹೊರಹೊಮ್ಮಲು ಸಜ್ಜಾಗಿರುವ ಕರ್ನಾಟಕ, ಆಟಿಕೆ ತಯಾರಿಸುವ ಕೈಗಾರಿಕೆಗಳಿಗೆ ಪೂರಕ ವ್ಯವಸ್ಥೆ ಕಲ್ಪಿಸಲಿದೆ.ಇದರ ಫಲವಾಗಿ ಆಟಿಕೆ ಉದ್ಯಮ ಸಿಎಜಿಆರ್‌ನ (2010-17) ಶೇ.18ರಷ್ಟು ಪ್ರಗತಿ ಸಾಧಿಸಿದ್ದು, 2023ರ ವೇಳೆಗೆ 310 ದಶಲಕ್ಷ ಡಾಲರ್ ತಲುಪುವ ನಿರೀಕ್ಷೆಯಿದೆ.ಕರ್ನಾಟಕವನ್ನು ಭಾರತದ ಆಟಿಕೆ ಉತ್ಪಾದನಾ ಕೇಂದ್ರವಾಗಿಸಲು ಮತ್ತು ಆಟಿಕೆ ಕ್ಷೇತ್ರಕ್ಕೆ ಉತ್ತೇಜನ ನೀಡುವ ರಾಜ್ಯ ಸರ್ಕಾರದ ಪ್ರಯತ್ನದ ಭಾಗವಾಗಿ, ‘ಉತ್ಪನ್ನ ನಿರ್ದಿಷ್ಟ ಕೈಗಾರಿಕಾ ಕ್ಲಸ್ಟರ್ ಅಭಿವೃದ್ಧಿ ಕಾರ್ಯಕ್ರಮ ರೂಪಿಸಲಾಗಿದೆ. ಕೌಶಲ ಅಭಿವೃದ್ಧಿ ಮತ್ತು ಸಮತೋಲಿತ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಸಾಧಿಸುವುದು ಮತ್ತು 700 ದಶಲಕ್ಷ ಡಾಲರ್ ಹೂಡಿಕೆ ಆಕರ್ಷಿಸುವುದು ಕ್ಲಸ್ಟರ್‌ನ ಮೂಲ ಉದ್ದೇಶವಾಗಿದೆ.

ಈರಯ್ಯ ಕುರ್ತಕೋಟಿ

ದಿ ನ್ಯೂಸ್ 24 ಕನ್ನಡ ಕೊಪ್ಪಳ

TRENDING