Wednesday, September 23, 2020
Home ಅಂತರ್ ರಾಜ್ಯ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ

ಜಮ್ಮು-ಕಾಶ್ಮೀರ ಮತ್ತು ನವದೆಹಲಿ ಸೇರಿದಂತೆ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ಕೆಳಮಟ್ಟದಲ್ಲಿ ಗಾಳಿಯ ವೇಗ ಹೆಚ್ಚಾಗಿದ್ದು, ದಕ್ಷಿಣ ಮತ್ತು ಪಶ್ಚಿಮ ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ಬುಧವಾರ ಮತ್ತು ಗುರುವಾರ ಸಾಧಾರಣ ಮಳೆಯಾಗಲಿದ್ದು, ಶುಕ್ರವಾರ ವರುಣ ಅಬ್ಬರಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ನವದೆಹಲಿ, ಹಿಮಾಚಲ ಪ್ರದೇಶ, ಉತ್ತರಾಖಂಡ್, ರಾಜಸ್ಥಾನದ ಪಶ್ಚಿಮ ಭಾಗ ಮತ್ತು ಉತ್ತರ ಪ್ರದೇಶದಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಹಿನ್ನೆಲೆ ಎಚ್ಚರಿಕೆ ವಹಿಸುವಂತೆ ಸ್ಥಳೀಯರಿಗೆ ಸೂಚನೆ ನೀಡಲಾಗಿದೆ.

ಬುಧವಾರ ಭಾರಿ ಮಳೆಯ ಎಚ್ಚರಿಕೆ:

ಉತ್ತರಾಖಂಡ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಬುಧವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಉತ್ತರಾಖಂಡ್ ನಲ್ಲಿ ಗುರುವಾರವೂ ವರುಣದೇವ ಅಬ್ಬರಿಸುವ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸ್ಥಳೀಯರಿಗೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗುವ ಆತಂಕವಿದ್ದು, ಸುರಕ್ಷಿತವಾಗಿರುವಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಜಮ್ಮು ಕಾಶ್ಮೀರ, ಪಂಜಾಬ್, ಹರಿಯಾಣ, ಚಂಡೀಗಢ್, ದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಸಲಾಗಿದೆ. ಬುಧವಾರ ಮತ್ತು ಗುರುವಾರ ಈ ರಾಜ್ಯಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ಇನ್ನು, ಮಳೆಯ ದಾಖಲೆಯ ಪ್ರಕಾರ, 15 ಮಿ.ಮೀ ಮಳೆಯನ್ನು ಅಲ್ಪ, 15 ರಿಂದ 64.5 ಮಿ.ಮೀ ಮಳೆಯನ್ನು ಸಾಧಾರಣ ಮತ್ತು 64.5 ಮಿ.ಮೀಟರ್ ಗಿಂತ ಹೆಚ್ಚಿನ ಮಳೆಯನ್ನು ಭಾರಿ ಮಳೆ ಎಂದು ಗುರುತಿಸಲಾಗುತ್ತದೆ.

TRENDING