Friday, September 25, 2020
Home ಅಂತರ್ ರಾಷ್ಟ್ರೀಯ 6ನೇ ಹಂತದ ವಂದೇ ಭಾರತ್ ಮಿಷನ್ ಬುಕ್ಕಿಂಗ್ ಶುರು

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

6ನೇ ಹಂತದ ವಂದೇ ಭಾರತ್ ಮಿಷನ್ ಬುಕ್ಕಿಂಗ್ ಶುರು

ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆ ತರುವುದಕ್ಕಾಗಿ 6ನೇ ಹಂತದ ವಂದ್ ಭಾರತ್ ಮಿಷನ್ ಕಾರ್ಯಾಚರಣೆ ಸಪ್ಟೆಂಬರ್.01ರಿಂದ ಶುರುವಾಗಲಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯವು ತಿಳಿಸಿದೆ.

ಯುನೈಟೆಡ್ ಅರಬ್ ಎಮಿರೈಟ್ಸ್ ನಿಂದ ಭಾರತಕ್ಕೆ ಆಗಮಿಸಲು ಟಿಕೆಟ್ ಬುಕ್ಕಿಂಗ್ ಸೇವೆಯು ಗುರುವಾರದಿಂದ ಆರಂಭವಾಗಲಿದೆ ಎಂದು ಸಚಿವಾಲಯವು ತಿಳಿಸಿದೆ. ಬೆಳಗ್ಗೆ 10 ಗಂಟೆಯಿಂದ 11.30ವರೆಗೂ ಬುಕ್ಕಿಂಗ್ ಶುರುವಾಗಲಿದೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಘೋಷಿಸಿದೆ.

ಭಾರತೀಯ ರಾಯಭಾರ ಕಚೇರಿ, ಸಿಜಿ ವೆಬ್‌ಸೈಟ್‌ನಲ್ಲಿ ನೋಂದಾಯಿಸಲಾಗಿರುವ ಭಾರತೀಯ ಪ್ರಜೆಗಳು ತಮ್ಮ ವೆಬ್‌ಸೈಟ್‌ನಲ್ಲಿ ಅಥವಾ ಅಧಿಕೃತ ಟ್ರಾವೆಲ್ ಏಜೆಂಟ್‌ಗಳ ಮೂಲಕ ಸಾಮಾನ್ಯ ವಾಪಸಾತಿ ದರದಲ್ಲಿ ವಿಮಾನಗಳನ್ನು ಕಾಯ್ದಿರಿಸಬಹುದು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಅಕ್ಟೋಬರ್.24ರವರೆಗೂ ವಂದೇ ಭಾರತ್ ಮಿಷನ್:

ಭಾರತೀಯ ನಾಗರಿಕ ವಿಮಾನಯಾನ ಸಚಿವಾಲಯದ ಘೋಷಣೆ ಪ್ರಕಾರ ಸಪ್ಟೆಂಬರ್.01 ರಿಂದ 6ನೇ ಹಂತದ ವಂದೇ ಭಾರತ್ ಮಿಷನ್ ಕಾರ್ಯಾಚರಣೆ ಜಾರಿಯಲ್ಲಿರುತ್ತದೆ. ಆಕ್ಟೋಬರ್.24ರವರೆಗೂ ಕಾರ್ಯಾಚರಣೆ ಜಾರಿಯಲ್ಲಿರುತ್ತದೆ.

ಏರ್ ಟ್ರಾವೆಲ್ ಬಬಲ್ ವಿಮಾನಗಳ ಸಂಚಾರಿ ನಿಯಮಗಳ ಕುರಿತು ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಕೇಂದ್ರ ಸರ್ಕಾರದು ಜಾರಿಗೊಳಿಸಿದ ಹೊಸ ನಿಯಮಗಳ ಪ್ರಕಾರ, ಭಾರತಕ್ಕೆ ವಾಪಸ್ಸಾಗಲು ಬಯಸುವ ಪ್ರಯಾಣಿಕರೇ ಪ್ರಯಾಣದ ವೆಚ್ಚ ಭರಿಸಬೇಕು. ಪ್ರಯಾಣಿಕರು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸಬೇಕು. ಸಚಿವಾಲಯವು ಅರ್ಹ ಪ್ರಯಾಣಿಕರ ಪಟ್ಟಿಯನ್ನು ಕಾಲಕಾಲಕ್ಕೆ ಸರ್ಕಾರದ ವೆಬ್ ಸೈಟ್ ನಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸುತ್ತದೆ ಎಂದು ತಿಳಿಸಿದೆ.

ವಂದೇ ಭಾರತ್ ಮಿಷನ್ ಅಡಿಯಲ್ಲಿ ಇದುವರೆಗೂ ವಿದೇಶಗಳಲ್ಲಿ ಕೊರೊನಾವೈರಸ್ ಸೋಂಕಿನ ಭೀತಿಯ ನಡುವೆ ಸಿಲುಕಿಕೊಂಡಿದ್ದ 11,23,000 ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಮಾಹಿತಿ ನೀಡಿದೆ.

TRENDING