Saturday, September 19, 2020
Home ರಾಜಕೀಯ ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ ಸಾಧ್ಯತೆ

ಇದೀಗ ಬಂದ ಸುದ್ದಿ

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

14 ಭಾಷೆಗಳಲ್ಲಿ ಬಿತ್ತರವಾಗಲಿದೆ “ಅಯೋಧ್ಯೆ ಕೀ ರಾಮ್‌ಲೀಲಾ”

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ''ಅಯೋಧ್ಯಾ ಕೀ ರಾಮ್‌ಲೀಲಾ" 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು...

ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ ಸಾಧ್ಯತೆ

 ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ.ಕೇಂದ್ರ ಚುನಾವಣಾ ಆಯೋಗ ಹೊರಡಿಸಿರುವ ಹೊಸ ಮಾರ್ಗಸೂಚಿಗಳಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು
ಆಯೋಗ ಚುನಾವಣೆಯನ್ನು ನಡೆಸಲಿದೆ.

ರಾಜ್ಯದಲ್ಲಿ 6025 ಗ್ರಾಮ ಪಂಚಾಯತ್ ಗಳಿದ್ದು, ಅವುಗಳ ಅವಧಿ ಜೂನ್/ ಜುಲೈ ತಿಂಗಳಿಗೆ ಅಂತ್ಯವಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅಸಾಧಾರಣ ಸಂದರ್ಭ ಎಂದು ಭಾವಿಸಿ ರಾಜ್ಯ ಚುನಾವಣಾ ಆಯೋಗ ಪಂಚಾಯತ್ ಚುನಾವಣೆಯನ್ನು ಮೇ ತಿಂಗಳಲ್ಲಿ ಮುಂದೂಡಿತ್ತು.

ಈ ಮಧ್ಯೆ ಚುನಾವಣೆ ಮುಂದೂಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಾರ್ವಜನಿಕಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣೆಗಾಗಿ 21 ಜಿಲ್ಲೆಗಳಲ್ಲಿ ಮೀಸಲಾತಿ ಪಟ್ಟಿ ಸಿದ್ಧವಾಗಿರುವುದಾಗಿ ರಾಜ್ಯ ಚುನಾವಣಾ ಆಯೋಗ ಇತ್ತೀಚಿಗೆ ಹೈಕೋರ್ಟ್ ಗೆ ಮಾಹಿತಿ ನೀಡಿತ್ತು. ಉಳಿದಿರುವ 9 ಜಿಲ್ಲೆಗಳ ಮೀಸಲಾತಿ ಪಟ್ಟಿಗಾಗಿ ಸಮಯವನ್ನು ಕೋರಿತ್ತು.

ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಚುನಾವಣೆ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಕೋವಿಡ್-19 ಸಂದರ್ಭದಲ್ಲಿ ಚುನಾವಣೆಗಾಗಿ ಚುನಾವಣಾ
ಆಯೋಗ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರ ಆಧಾರದ ಮೇಲೆ ಮಾರ್ಗಸೂಚಿಗಳನ್ನು ರಚಿಸುತ್ತೇವೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದಾಗಿ ರಾಜ್ಯ ಚುನಾವಣಾ ಆಯುಕ್ತ ಬಿ. ಬಸವರಾಜು ತಿಳಿಸಿದ್ದಾರೆ.

ಮತದಾನ ನಡೆಯುವ ಕಡೆಗಳಲ್ಲಿ ಸುರಕ್ಷತೆಯನ್ನು ಕೈಗೊಳ್ಳಬೇಕಾಗಿದ್ದು, ಹಣದ ಅಗತ್ಯವಿದೆ.ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಸದ್ಯದಲ್ಲಿಯೇ ಪತ್ರ ಬರೆಯಲಾಗುವುದು,ಪ್ರತಿಮತಗಟ್ಟೆಗೆ ಇಂತಿಷ್ಟು ಎಂಬಂತೆ ಮತದಾರರ ಪ್ರಮಾಣವನ್ನು ನಿರ್ಬಂಧಿಸಬೇಕಾಗಿದೆ. ಚುನಾವಣಾ ಸಿದ್ದತೆ ಕುರಿತಂತೆ ಸಂಬಂಧಿತ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಬೇಕಾಗಿದೆ. ಮತದಾರರ ಪಟ್ಟಿ ಕೂಡಾ ಸಿದ್ಧವಾಗಿದ್ದು, ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ. ಅದು ಪೂರ್ಣಗೊಳ್ಳಲು ಎರಡು ತಿಂಗಳು ಬೇಕಾಗಲಿದೆ. ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯುವ ಭರವಸೆ ಇರುವುದಾಗಿ ಬಸವರಾಜ್ ತಿಳಿಸಿದ್ದಾರೆ.

TRENDING