Wednesday, September 23, 2020
Home ಅಂತರ್ ರಾಜ್ಯ ಗಡಿ ಬಂದ್ ತೆರವಿಗೆ ಹೈಕೋರ್ಟ್ ಆದೇಶ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಗಡಿ ಬಂದ್ ತೆರವಿಗೆ ಹೈಕೋರ್ಟ್ ಆದೇಶ

ಕಾಸರಗೋಡು, ಆ.27: ಕೇರಳ-ಕರ್ನಾಟಕವನ್ನು ಸಂಪರ್ಕಿಸುವ ಪ್ರಮುಖ ನಾಲ್ಕು ರಸ್ತೆಗಳಲ್ಲಿ ಮಾಡಿರುವ ಗಡಿ ಬಂದ್ ಅನ್ನು ತೆರವುಗೊಳಿಸುವಂತೆ ಕೇರಳ ಸರಕಾರಕ್ಕೆ ರಾಜ್ಯ ಹೈಕೋರ್ಟ್ ಬುಧವಾರ ಆದೇಶಿಸಿದೆ.

ಈ ಕುರಿತು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಬುಧವಾರ ಮಹತ್ವದ ಈ ಮಧ್ಯಾಂತರ ಆದೇಶ ನೀಡಿದೆ.

ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಪ್ರಮುಖ ರಸ್ತೆಗಳಾದ ಜಾಲ್ಸೂರು, ಪಾಣತ್ತೂರು, ಮಾಣಿಮೂಲೆ, ಪೆರ್ಲ ಗಡಿಗಳಲ್ಲಿ ವಿಧಿಸಲಾಗಿರುವ ಬಂದ್ ತೆರವುಗೊಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಕೊರೋನ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ-ಕಾಸರಗೋಡು ನಡುವಿನ 14ಕ್ಕೂ ಅಧಿಕ ರಸ್ತೆಗಳನ್ನು ಮಣ್ಣು ಹಾಕಿ ಬಂದ್ ಮಾಡಲಾಗಿತ್ತು ಇದರಿಂದ ಉಭಯ ಜಿಲ್ಲೆಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿತ್ತು. ಹೈಕೋರ್ಟ್ ಆದೇಶದಿಂದ ಗ್ರಾಮೀಣ ಪ್ರದೇಶದ ರಸ್ತೆಗಳು ಸಂಚಾರ ಮುಕ್ತಗೊಳ್ಳುವುದರೊಂದಿಗೆ ಜನತೆಯಲ್ಲಿ ನಿರಾಳ ಉಂಟಾಗಿದೆ.

ಕಳೆದ ನಾಲ್ಕು ದಿನಗಳ ಹಿಂದೆ ದೇಶಾದ್ಯಂತ ಅಂತಾರಾಜ್ಯ ರಸ್ತೆಗಳ ಬಂದ್ ತೆರವುಗೊಳಿಸುವಂತೆ ಕೇಂದ್ರ ಸರಕಾರವು ಎಲ್ಲ ರಾಜ್ಯಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿತ್ತು. ಆದರೂ ಕೇರಳ- ಕರ್ನಾಟಕ ಗಡಿ ಬಂದ್ ಅನ್ನು ಕೇರಳ ಸರಕಾರ ತೆರವುಗೊಳಿಸಿರಲಿಲ್ಲ. ಇದರ ವಿರುದ್ಧ ಶ್ರೀಕಾಂತ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

TRENDING