Tuesday, September 22, 2020
Home ಅಂತರ್ ರಾಷ್ಟ್ರೀಯ CPL ಟೂರ್ನಿಯಲ್ಲಿ ಆಡಿದ ಮೊದಲ ಭಾರತೀಯ ‘ಪ್ರವೀಣ್‌ ತಾಂಬೆ’

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

CPL ಟೂರ್ನಿಯಲ್ಲಿ ಆಡಿದ ಮೊದಲ ಭಾರತೀಯ ‘ಪ್ರವೀಣ್‌ ತಾಂಬೆ’

ನವದೆಹಲಿ : ಲೆಗ್‌ ಸ್ಪಿನ್ನರ್‌, 48 ವರ್ಷದ ಪ್ರವೀಣ್ ತಾಂಬೆ ಅವರು ಬುಧವಾರ ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ (ಸಿಪಿಎಲ್‌) ಕ್ರಿಕೆಟ್‌ ಟೂರ್ನಿಯಲ್ಲಿ ಆಡಿದ ಮೊದಲ ಭಾರತೀಯ ಆಟಗಾರ ಎನಿಸಿಕೊಂಡರು. ಟ್ರಿನ್‌ಬ್ಯಾಗೊ ಪರ ಮೊದಲ ಪಂದ್ಯದಲ್ಲಿ ಅವರು ಸೇಂಟ್‌ ಲೂಸಿಯಾ ಜೌಕ್ಸ್‌ ವಿರುದ್ಧ ಕಣಕ್ಕಿಳಿದಿದ್ದರು.

ತಾಂಬೆ ಅವರು ಸಿಪಿಎಲ್‌ನಲ್ಲಿ ಆಡಿದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಈ ಹಿಂದೆ ಭಾರತ 19 ವರ್ಷದೊಳಗಿನವರ ತಂಡಕ್ಕೆ ಆಡಿದ್ದ 32 ವರ್ಷದ ಸನ್ನಿ ಸೋಹಲ್‌ ಅವರು 2018ರಲ್ಲಿ ಸಿಪಿಎಲ್‌ನ ಬಾರ್ಬಡಾಸ್‌ ಟ್ರೈಡೆಂಟ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಆದರೆ ಆ ವೇಳೆ ಅವರು ಅಮೆರಿಕ ರಾಷ್ಟ್ರೀಯ ತಂಡದ ಆಟಗಾರನಾಗಿದ್ದರು.

2020ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಆಯ್ಕೆಯಾದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದರು ತಾಂಬೆ. ಕೋಲ್ಕತ್ತ ನೈಟ್‌ ರೈಡರ್ಸ್‌ ತಂಡ ಅವರನ್ನು ಸೇರಿಸಿಕೊಂಡಿತ್ತು. ಆದರೆ ಯುಎಇಯಲ್ಲಿ ನಡೆದ ಟಿ10 ಲೀಗ್‌ನಲ್ಲಿ ಆಡಿದ ಕಾರಣಕ್ಕಾಗಿ ಬಿಸಿಸಿಐ ಅವರನ್ನು ಅನರ್ಹಗೊಳಿಸಿತ್ತು. ಹೀಗಾಗಿ ಸಿಪಿಎಲ್‌ ಟೂರ್ನಿಯ ಆಟಗಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿದ್ದರು.

ಬಿಸಿಸಿಐನ ಮಾರ್ಗಸೂಚಿಗಳ ಅನ್ವಯ, ಭಾರತದ ಆಟಗಾರರು ದೇಶಿ ಕ್ರಿಕೆಟ್‌ನಿಂದ ನಿವೃತ್ತಿಯಾಗದೆ ವಿದೇಶಿ ಲೀಗ್‌ಗಳಲ್ಲಿ ಭಾಗವಹಿಸುವಂತಿಲ್ಲ. 2018ರಲ್ಲಿ ತಾಂಬೆ ಮಾನ್ಯತೆಯಿಲ್ಲದ ಟಿ10 ಲೀಗ್‌ನಲ್ಲಿ ಆಡಿದ್ದರು.

ಐಪಿಎಲ್‌ನಲ್ಲಿ 33 ಪಂದ್ಯಗಳನ್ನು ಆಡಿರುವ ತಾಂಬೆ 30.5 ಸರಾಸರಿಯಲ್ಲಿ 28 ವಿಕೆಟ್‌ ಗಳಿಸಿದ್ದಾರೆ. ರಾಜಸ್ಥಾನ್‌ ರಾಯಲ್ಸ್, ಗುಜರಾತ್‌ ಲಯನ್ಸ್ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳನ್ನು ಅವರು ಪ್ರತಿನಿಧಿಸಿದ್ದಾರೆ.

ತಮ್ಮ 41ನೇ ವಯಸ್ಸಿನಲ್ಲಿ ಅಂದರೆ 2013ರಲ್ಲಿ ಅವರು ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು.

TRENDING