Tuesday, September 22, 2020
Home ಅಂತರ್ ರಾಜ್ಯ ತಮಿಳುನಾಡು ಹಿನ್ನೆಲೆ ಗಾಯಕ ಎಸ್. ಪಿ.ಬಿ ಆರೋಗ್ಯ ಸ್ಥಿರ-ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಹಿನ್ನೆಲೆ ಗಾಯಕ ಎಸ್. ಪಿ.ಬಿ ಆರೋಗ್ಯ ಸ್ಥಿರ-ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆ

ಚೆನ್ನೈ : ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿರವಾಗಿದ್ದು ಅವರು ಪ್ರಜ್ಞಾವಸ್ಥೆ ಸ್ಥಿತಿಯಲ್ಲಿದ್ದಾರೆ ಎಂದು ನಗರದ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆ ತಿಳಿಸಿದೆ.

ಲಕ್ಷಾಂತರ ಮಂದಿ ಎಸ್ ಪಿಬಿ ಅಭಿಮಾನಿಗಳಿಗೆ ಇದೊಂದು ಖುಷಿಯ ವಿಚಾರ. ನಿನ್ನೆ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಆಸ್ಪತ್ರೆಯ ವೈದ್ಯಾಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿ, ಕೈಸನ್ನೆ ಮೂಲಕ ಅವರ ಪುತ್ರ ಚರಣ್ ಅವರೊಂದಿಗೆ ಮೊನ್ನೆ ಸಂವಹನ ನಡೆಸಿದ್ದರು ಎಂದು ತಿಳಿಸಿದ್ದಾರೆ. ಅಂದರೆ ಆಸ್ಪತ್ರೆಯ ವೈದ್ಯರ ಹೇಳಿಕೆ ಪ್ರಕಾರ ಎಸ್ ಪಿಬಿಯವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಬಹು ಅಂಗಾಂಗ ವಿಶೇಷ ತಜ್ಞರು ಅವರಿಗೆ ನಿರಂತರವಾಗಿ ಚಿಕಿತ್ಸೆ ನೀಡುತ್ತಾ ನಿಗಾ ವಹಿಸುತ್ತಾ ಸೂಕ್ಷ್ಮವಾಗಿ ನೋಡಿಕೊಳ್ಳುತ್ತಿದ್ದಾರೆ.

ಕೋವಿಡ್-19ನಿಂದಾಗಿ ಅವರ ಶ್ವಾಸಕೋಶಕ್ಕೆ ಹಾನಿಯಾಗಿದ್ದರೂ ಕೂಡ ಉಳಿದ ಅಂಗಾಂಗಗಳು ಸರಿಯಾಗಿ ಕೆಲಸ ಮಾಡುತ್ತಿವೆ. ಈ ಹಂತದಲ್ಲಿ ನಾವು ಅವರ ಶ್ವಾಸಕೋಶದ ಆರೋಗ್ಯ ಸುಧಾರಣೆಗೆ ಶ್ರಮಿಸುತ್ತಿದ್ದೇವೆ, ಅವರ ಕುಟುಂಬದವರು, ಅವರ ಮಗ ಭೇಟಿ ಮಾಡಿದ್ದ ಸಂದರ್ಭದಲ್ಲಿ ಗಾಯಕ ಕೈಸನ್ನೆ ಮೂಲಕ ಸಂವಹನ ನಡೆಸಿದ್ದಾರೆ. ಅವರು ಪ್ರಜ್ಞಾವಸ್ಥ ಸ್ಥಿತಿಯಲ್ಲಿದ್ದು ಆರೋಗ್ಯ ಸ್ಥಿರವಾಗಿದೆ.

ಆದರೆ ಮಾತನಾಡುವ ಸ್ಥಿತಿಗೆ ಇನ್ನೂ ಬಂದಿಲ್ಲ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರುವುದಂತೂ ನಿಜ, ಅವರು ಗುಣಮುಖರಾಗುತ್ತಾರೆ ಎಂದು ನಾವು ಆಶಾಭಾವನೆ ಹೊಂದಿದ್ದೇವೆ ಎಂದು ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯ ನಿರ್ದೇಶಕ ಡಾ ಪ್ರಶಾಂತ್ ರಾಜಗೋಪಾಲನ್ ತಿಳಿಸಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡು ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ಎಸ್ ಪಿಬಿ ನಂತರ ಆಗಸ್ಟ್ 13ರಂದು ಐಸಿಯುಗೆ ವರ್ಗಾಯಿಸಲಾಗಿತ್ತು. ಅಲ್ಲಿಂದ ವೆಂಟಿಲೇಟರ್ ನೆರವಿನಲ್ಲಿದ್ದಾರೆ.

TRENDING