Tuesday, September 22, 2020
Home ಕೋವಿಡ್-19 ರಾಜ್ಯದಲ್ಲಿಇದುವರೆಗೆ 26 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ರಾಜ್ಯದಲ್ಲಿಇದುವರೆಗೆ 26 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ

ಬೆಂಗಳೂರು: ರಾಜ್ಯದಾದ್ಯಂತ ಆಗಸ್ಟ್‌ 27ರಂದು ಒಟ್ಟು 68,187 ಜನರಿಗೆ ಕೋವಿಡ್-19 ಮಾದರಿ‌ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ಒಟ್ಟು 26,48,808 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು 29,004 ಆಯಂಟಿಜೆನ್‌ ಪರೀಕ್ಷೆ ಮತ್ತು 39,183 ಮಂದಿ ಆರ್‌ಟಿಪಿಸಿಆರ್‌ ಪರೀಕ್ಷೆಗೆ ಒಳಗಾಗಿದ್ದಾರೆ. ಹೀಗಾಗಿ ಒಂದೇದಿನ ಅತಿ ಹೆಚ್ಚು ಪರೀಕ್ಷೆ ನಡೆಸಿದಂತಾಗಿದೆ.

7,866 ಸೋಂಕಿತರು ಗುಣಮುಖ
ರಾಜ್ಯದಲ್ಲಿ ಗುರುವಾರ 7,866 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಗುಣಮುಖರಾದವರ ಸಂಖ್ಯೆ 2,19,554ಕ್ಕೆ ಏರಿಕೆಯಾಗಿದೆ. 9,386 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 3,09,792ಕ್ಕೆ ಏರಿದೆ. ಮೊದಲ ಪ್ರಕರಣ ವರದಿಯಾದ ಬಳಿಕ ಸೋಂಕಿನ ಸಂಖ್ಯೆ ಸಾವಿರಕ್ಕೇರಲು ಎರಡು ತಿಂಗಳು ಬೇಕಾಗಿತ್ತು. ಆದರೆ, ನಂತರದ ಒಂದೂವರೆ ತಿಂಗಳಲ್ಲಿಯೇ ಹತ್ತು ಸಾವಿರ ಮತ್ತು ಐದೇ ತಿಂಗಳಲ್ಲಿ 3 ಲಕ್ಷ ಪ್ರಕರಣಗಳು ವರಿದಿಯಾಗಿವೆ.

ಮತ್ತೆ 141 ಮಂದಿ ಸಾವು
ಮೃತರ ಸಂಖ್ಯೆ ಪ್ರತಿದಿನ ಏರುತ್ತಲೇ ಸಾಗಿದೆ. ಇಂದು 141 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 5,232 ಆಗಿದೆ. 747 ಸೋಂಕಿತರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ 84,987 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರಿಗೆ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳು, ಮನೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬೆಂಗಳೂರಿನಲ್ಲಿ 3,357 ಪ್ರಕರಣ
ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ, 3,357 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 59 ಸೋಂಕಿತರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ 895, ಬಳ್ಳಾರಿಯಲ್ಲಿ 550, ದಾವಣಗೆರೆಯಲ್ಲಿ 391, ಹಾಸನದಲ್ಲಿ 334, ಬೆಳಗಾವಿಯಲ್ಲಿ 318, ಶಿವಮೊಗ್ಗದಲ್ಲಿ 306, ದಕ್ಷಿಣ ಕನ್ನಡದಲ್ಲಿ 297, ಪ್ರಕರಣಗಳು ವರದಿಯಾಗಿವೆ.

TRENDING