Wednesday, September 23, 2020
Home ಜಿಲ್ಲೆ ಕೋಲಾರ ಕೋಲಾರದಲ್ಲಿ 3 ಸೋಂಕಿತರ ಸಾವು,57ಕ್ಕೇರಿದ ಸಾವಿನ ಸಂಖ್ಯೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಕೋಲಾರದಲ್ಲಿ 3 ಸೋಂಕಿತರ ಸಾವು,57ಕ್ಕೇರಿದ ಸಾವಿನ ಸಂಖ್ಯೆ

ಕೋಲಾರಜಿಲ್ಲೆಯಲ್ಲಿ ಶುಕ್ರವಾರ 3 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನ 3 ಮಂದಿ ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 53 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 732ಕ್ಕೆ ಜಿಗಿದಿದೆ.

ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 44 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 7 ಮಂದಿಗೆ ಸೋಂಕು ಬಂದಿದೆ. ಕೋಲಾರ ತಾಲ್ಲೂಕಿನಲ್ಲಿ 16 ಮಂದಿಗೆ ಸೋಂಕು ತಗುಲಿದೆ. ವಿಷಮ ಶೀತ ಜ್ವರವಿರುವ 9 ಮಂದಿಗೆ, ಸೋಂಕಿತರ ಸಂಪರ್ಕದಿಂದ 6 ಮಂದಿಗೆ ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಹರಡಿರುವುದು ಖಚಿತವಾಗಿದೆ.

ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಪೀಡಿತ 15 ಮಂದಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ, ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 8 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಬಂದಿರುವುದು ಗೊತ್ತಾಗಿದೆ.

ಮಾಲೂರು ತಾಲ್ಲೂಕಿನಲ್ಲಿ 4 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನಲ್ಲಿ 3 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನಲ್ಲಿ 5 ಮಂದಿಗೆ ಸೋಂಕು ತಗುಲಿದೆ. ಇವರೆಲ್ಲರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸುರಕ್ಷತಾ ಕ್ರಮವಾಗಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

TRENDING