Sunday, September 27, 2020
Home ಜಿಲ್ಲೆ ಗಬ್ಬೂರು ಗ್ರಾಮಸ್ಥರ ಪಾಲಿಗೆ : ಪಿಡಿಒ ಕಿರಣ್ ಬಾಬು ಯಮಕಿಂಕರ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಗಬ್ಬೂರು ಗ್ರಾಮಸ್ಥರ ಪಾಲಿಗೆ : ಪಿಡಿಒ ಕಿರಣ್ ಬಾಬು ಯಮಕಿಂಕರ

ಗಬ್ಬೂರು: ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಅನೇಕ ಕಡೆಗಳಲ್ಲಿ ಚರಂಡಿಗಳು ತುಂಬಿ ಗಬ್ಬುನಾರುತ್ತಿರುವ ಗಬ್ಬೂರಿನ ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗದ ಅವಾಂತರ ಸೃಷ್ಟಿಸುತ್ತಿದೆ. ಅದರಲ್ಲೂ ದಿನ ದಿನಕ್ಕೂ ವ್ಯಾಪಿಸುತ್ತಿರುವ ಕೊರೋನಾ ರೋಗಕ್ಕೆ ಭಯಭೀತರಾಗಿದ್ದಾರೆ. ಅಧಿಕಾರಿಗಳು ಮಾತ್ರ ಡೊಂಟ್ ಕೇರ್ ಅಂತಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಸಾದ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಮುಖ್ಯ ರಸ್ತೆಯಲ್ಲಿ ಬರುವ ಮಹಾನಂದಿಶ್ವರ ದೇವಸ್ಥಾನ ಪಕ್ಕದಲ್ಲಿ ಚರಂಡಿ ಕೊಳಚೆ ನೀರು, ವಿವಿಧ ಪ್ಲಾಸ್ಟಿಕ್ ವಸ್ತುಗಳಿಂದ ತುಂಬಿದ್ದು ಹತ್ತಿರದ ಮನೆಗಳಲ್ಲಿ ವಾಸಿಸುವ ನಾವು ದುರ್ನಾತದೊಡನೆ ಜೀವನ ನಡೆಸುವಂತಾಗಿದೆ ಎಂದು ಸ್ಥಳಿಯರು ಬೇಸರ ವ್ಯಕ್ತಪಡಿಸಿದ್ದಾರೆ.  .

ಈಗಾಗಲೇ ಜಗತ್ತಿನಾದ್ಯಂತ ಕೊರೋನಾ ಸಂಕಷ್ಟ ಎದುರಾಗಿದ್ದು ಎಲ್ಲೂ ಕೆಲಸವಿಲ್ಲದೆ ಮನೆಯಲ್ಲಿಯೇ ಜೀವನ ಕಳೆಯುವ ಪರಸ್ಥಿತಿ ಎದುರಾಗಿದೆ. ದಿನವಿಡೀ ಮನೆಯಲ್ಲಿಯೇ ಇರುವ ನಾವು ಚರಂಡಿಯ ಕೆಟ್ಟ ವಾಸನೆ ಸೇವಿಸುತ್ತಿದ್ದೇವೆ. ಇದರಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭಯ ಎದುರಾಗಿದೆ.

ಚರಂಡಿ ಸ್ವಚ್ಛತೆಗೋಳಿಸುವಂತೆ ನೊಡಲ್ ಅಧಿಕಾರಿಗಳಿಗೆ ಮತ್ತು ಪಿಡಿಓ ಸೇರಿದಂತೆ ಅನೇಕರಿಗೆ ನಾವು ಅನೇಕ ಬಾರಿ ಮನವಿ ಮಾಡಿದ್ದೇವೆ. ಆದ್ರೆ ಇದುವರೆಗೂ ಯಾರೋಬ್ಬರೂ ಚಂರಡಿ ಸ್ವಚ್ಛಗೋಳಿಸುವ ಕೆಲಸಕ್ಕೆ ಮುಂದಾಗಿಲ್ಲ.  ನಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಸುವ ಪ್ರಯತ್ನ ಮಾಡಿದರೂ ಕಿರಣ ಬಾಬು ಪಿಡಿಓ ಮಾತ್ರ ಡೋಂಟ್ ಕೇರ್ ಅಂತಿದ್ದಾರೆ. ಸ್ಥಳಕ್ಕೆ ಬಂದು ಸಮಸ್ಯೆ ಪರಿಹರಿಸುವ ಕೆಲಸ ಮಾಡುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳೇ ಹೀಗೆ ಮಾಡಿದರೆ ನಾವು ಯಾರನ್ನು ಕೇಳ್ಬೇಕು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಹಿಂದೆ ಅನೇಕ ಬಾರಿ ಚರಂಡಿ ಸ್ವಚ್ಛಗೊಳಿಸಿದಾಗ ಚಂರಡಿಯಿಂದ ತೆಗೆದ ಕಸವನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆ ಕಸ ಮಳೆ, ಗಾಳಿ ವಾಹನಗಳ ಓಡಾಟದಿಂದಾಗಿ ಮತ್ತೆ ಚರಂಡಿ ಸೇರಿಕೊಂಡಿದೆ. ಇನ್ನು ಮುಂದೆ ಚರಂಡಿ ಸ್ವಚ್ಛಗೊಳಿಸಿದ ನಂತರ ಅಲ್ಲಿದ್ದ ಕಸ ವಿಲೇವಾರಿ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಸಂಜು ರೆಡ್ಡಿ

ದಿ ನ್ಯೂಸ್24 ಕನ್ನಡ

TRENDING