Monday, September 28, 2020
Home ಅಂತರ್ ರಾಷ್ಟ್ರೀಯ ಹಫೀಜ್ ಸಯೀದ್‌ನ ಮೂವರು ಆಪ್ತರಿಗೆ ಪಾಕ್ ನ್ಯಾಯಾಲಯದಿಂದ 16 ವರ್ಷ ಜೈಲು

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಹಫೀಜ್ ಸಯೀದ್‌ನ ಮೂವರು ಆಪ್ತರಿಗೆ ಪಾಕ್ ನ್ಯಾಯಾಲಯದಿಂದ 16 ವರ್ಷ ಜೈಲು

 ಇಸ್ಲಾಮಾಬಾದ್: ಜಮಾತ್ ಉದ್ ದಾವಾ (ಜೆಯುಡಿ) ಮುಖ್ಯಸ್ಥ, 2008ರ ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್‌ನ ಮೂವರು ಆಪ್ತರಿಗೆ ಪಾಕಿಸ್ತಾನದ ಭಯೋತ್ಪಾದನೆ ನಿಗ್ರಹ ನ್ಯಾಯಾಲಯ 16 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಈ ತೀರ್ಪು ಪ್ರಕಟಿಸಲಾಗಿದೆ.

ಈ ಮೂವರಲ್ಲಿ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಹಫೀಜ್ ಅಬ್ದುಲ್ ರೆಹಮಾನ್ ಮಕ್ಕಿ, ಹಫೀಜ್ ಅದ್ಬುಸ್ ಸಲಾಮ್ ಸಹ ಸೇರಿದ್ದಾರೆ. ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಮತ್ತೊಂದು ಪ್ರಕರಣದಲ್ಲಿ ಇವರ ವಿರುದ್ಧ ನೀಡಲಾಗಿದ್ದ ತೀರ್ಪನ್ನು ಲಾಹೋರ್ ಹೈಕೋರ್ಟ್ ಅಮಾನತುಗೊಳಿಸಿತ್ತು. ಬಳಿಕ ಜಾಮೀನು ಪಡೆದು ಅವರು ಬಿಡುಗಡೆಯಾಗಿದ್ದರು.

‘ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಮತ್ತೊಂದು ಪ್ರಕರಣದಲ್ಲಿ ಜಾಫರ್ ಇಕ್ಬಾಲ್ ಮತ್ತು ಹಫೀಜ್ ಅಬ್ದುಸ್ ಸಲಾಮ್ ಬಿನ್ ಮುಹಮ್ಮದ್‌ಗೆ ಹದಿನಾರೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ತಲಾ 1.5 ಲಕ್ಷ ದಂಡ ವಿಧಿಸಲಾಗಿದೆ’ ಎಂದು ಕೋರ್ಟ್‌ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ಮತ್ತು ನಿಷೇಧಿತ 88 ಉಗ್ರ ಸಂಘಟನೆಗಳು, ಅವುಗಳ ನಾಯಕರ ಮೇಲೆ ಪಾಕಿಸ್ತಾನ ಇತ್ತೀಚೆಗಷ್ಟೇ ಕಠಿಣ ಹಣಕಾಸು ನಿರ್ಬಂಧ ವಿಧಿಸಿತ್ತು. ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದರ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಮಟ್ಟದ ಸಂಸ್ಥೆ ಹಣಕಾಸು ಕಾರ್ಯಪಡೆಯ (ಎಫ್‌ಎಟಿಎಫ್‌) ‘ಬೂದು ಪಟ್ಟಿ’ಯಲ್ಲಿ ಗುರುತಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು ಈ ಕ್ರಮ ಕೈಗೊಂಡಿತ್ತು.

TRENDING