Wednesday, October 21, 2020
Home ಜಿಲ್ಲೆ ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ 'ಕೊಳ್ಳಿ' ಇಟ್ಟಿದೆ:ಹೆಚ್ಡಿಕೆ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ ‘ಕೊಳ್ಳಿ’ ಇಟ್ಟಿದೆ:ಹೆಚ್ಡಿಕೆ

ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ಕರೋನಾ ಸಂಕಷ್ಟ ‘ದೇವರ ಅಸಮಾನ್ಯ ಆಟ’ ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿಪೆಟ್ಟು ಕೊಟ್ಟಿದೆ. ಸುಲಭದ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ ‘ಕೊಳ್ಳಿ’ ಇಟ್ಟಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ ಎಂದಿದ್ದಾರೆ.

ಈಗ ಸಂಗ್ರಹವಾಗಿರುವ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳಿಗೆ ಪರಿಹಾರ ನೀಡಲು 97 ಸಾವಿರ ಕೋಟಿ ರೂ ಹಾಗೂ ಆದಾಯ ಕೊರತೆ ಎದುರಾಗಲಿರುವ 2.35 ಲಕ್ಷ ಕೋಟಿ ರೂಪಾಯಿಗಳನ್ನು ರಾಜ್ಯಗಳು ಸಾಲ ಪಡೆಯುವ ಆಯ್ಕೆಗಳನ್ನು ಮುಂದಿಟ್ಟಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING