Tuesday, September 22, 2020
Home ಜಿಲ್ಲೆ ಬೆಂಗಳೂರು ಎಸಿಬಿ ದಾಳಿ; ಮೂವರು ಸರ್ಕಾರಿ ಅಧಿಕಾರಿಗಳ ಅಮಾನತು

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಎಸಿಬಿ ದಾಳಿ; ಮೂವರು ಸರ್ಕಾರಿ ಅಧಿಕಾರಿಗಳ ಅಮಾನತು

 ಬೆಂಗಳೂರು, ಆಗಸ್ಟ್ 30 : ಎಸಿಬಿ ಅಧಿಕಾರಿಗಳು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದ್ದರು. ದಾಳಿಯ ವೇಳೆ ಒಟ್ಟು 32 ಲಕ್ಷ ರೂ. ಹಣ ಪತ್ತೆಯಾಗಿತ್ತು. ಕರ್ನಾಟಕ ಸರ್ಕಾರ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ಗುರುವಾರ ಎಸಿಬಿ ಅಧಿಕಾರಿಗಳು ಮಂಡಳಿ ಪ್ರಧಾನ ವ್ಯವಸ್ಥಾಪಕ ನಾಗೇಶ್, ಸಹಾಯಕ ವ್ಯವಸ್ಥಾಪಕರಾದ ಮಂಜುಳಾ ಮತ್ತು ಸುಬ್ಬಯ್ಯ ನಿವಾಸಗಳ ಮೇಲೆ ದಾಳಿ ನಡೆಸಿತ್ತು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಮೂವರು ಅಧಿಕಾರಿಗಳ ಮನೆಗಳಲ್ಲಿ ಪತ್ತೆಯಾಗಿತ್ತು.

ಪ್ರಧಾನ ವ್ಯವಸ್ಥಾಪಕ ನಾಗೇಶ್ ಮನೆಯಲ್ಲಿ 32 ಲಕ್ಷ ರೂ., ಸಹಾಯಕ ವ್ಯವಸ್ಥಾಪಕ ಸುಬ್ಬಯ್ಯ ಮನೆಯಲ್ಲಿ 27 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿತ್ತು. ಈಗ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಸಮಾಜ ಕಲ್ಯಾಣ ಸಚಿವ, ಉಪ ಮುಖ್ಯಮಂತ್ರಿ ಗೋವಿಂದ್ ಎಂ. ಕಾರಜೋಳ ಅವರು, “ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಮಾನತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡದಂತೆ ಆದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ಸರ್ಕಾರದಿಂದ ಜಮೀನು ಖರೀದಿಸಿ ಅದನ್ನು ಪರಿಶಿಷ್ಟ ಪಂಗಡದ ಭೂರಹಿತ ಪಲಾನುಭವಿಗಳಿಗೆ ಮಂಜೂರು ಮಾಡುವ ಯೋಜನೆಯಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ ಎಂಬುದು ಆರೋಪ. ಕಳಪೆ ಗುಣಮಟ್ಟದ ಜಮೀನನ್ನು ಮಧ್ಯವರ್ತಿಗಳ ಮೂಲಕ ಖರೀದಿ ಮಾಡಿ, ಹೆಚ್ಚಿನ ಮೊತ್ತಕ್ಕೆ ಮಾರಾಟ ಮಾಡಿದ ಅಕ್ರಮ ಇದಾಗಿದೆ.

TRENDING