Saturday, October 24, 2020
Home ಬೆಂಗಳೂರು ಸೆ.1ರಿಂದ ಕೆ. ಆರ್. ಮಾರ್ಕೆಟ್ ಓಪನ್

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಸೆ.1ರಿಂದ ಕೆ. ಆರ್. ಮಾರ್ಕೆಟ್ ಓಪನ್

ಬೆಂಗಳೂರು ನಗರದ ಪ್ರಮುಖ ವಾಣಿಜ್ಯ ಕೇಂದ್ರ ಕೆ. ಆರ್. ಮಾರುಕಟ್ಟೆಯನ್ನು ಸೆಪ್ಟೆಂಬರ್ 1ರಿಂದ ಆರಂಭಿಸಲು ಬಿಬಿಎಂಪಿ ತೀರ್ಮಾನಿಸಿದೆ. ಲಾಕ್ ಡೌನ್ ಘೋಷಣೆ ಮಾಡಿದ ದಿನದಿಂದ ಮಾರುಕಟ್ಟೆಯನ್ನು ಬಂದ್ ಮಾಡಲಾಗಿತ್ತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆ. ಆರ್. ಮಾರುಕಟ್ಟೆ ತೆರೆಯಲು ಅನುಮತಿ ನೀಡಿದೆ. ಆದರೆ ಬಿಬಿಎಂಪಿ ಹಾಕಿರುವ ನಿಯಮಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ. ನಿಯಮಗಳನ್ನು ಪಾಲನೆ ಮಾಡದಿದ್ದಲ್ಲಿ ಸ್ಥಳದಲ್ಲಿಯೇ ದಂಡ ಕಟ್ಟಬೇಕು.

ಮಾರುಕಟ್ಟೆ ತೆರೆದರೂ ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮಾರುಕಟ್ಟೆಗೆ ಬರುವ ಜನರು ಸಾಮಾಜಿಕ ಅಂತ ಕಾಪಾಡುವ ಬಗ್ಗೆ ನಿಗಾವಹಿಸಲು ಮಾರ್ಷಲ್‌ಗಳನ್ನು ನೇಮಕ ಮಾಡಲಾಗುತ್ತದೆ.

ಜನರು ಮಾಸ್ಕ್ ಹಾಕಿಲ್ಲ, ಸಾಮಾಜಿಕ ಅಂತರ ಕಾಪಾಡಿಲ್ಲ ಎಂದರೆ ಮಾರ್ಷಲ್‌ಗಳು ಸ್ಥಳದಲ್ಲಿಯೇ ದಂಡವನ್ನು ಹಾಕಲಿದ್ದಾರೆ. ವ್ಯಾಪಾರಿಗಳಿಗೂ ಹಲವು ಸೂಚನೆಗಳನ್ನು ಬಿಬಿಎಂಪಿ ನೀಡಲಿದೆ.

ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್, ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ. ಸಿ. ಮೋಹನ್ ಈಗಾಗಲೇ ಕೆ. ಆರ್. ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರುಕಟ್ಟೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹೆಚ್ಚು ಜನರು ಸೇರುತ್ತಾರೆ, ಸಾಮಾಜಿಕ ಅಂತರ ಕಾಪಾಡಲು ಕಷ್ಟವಾಗಲಿದೆ ಎಂಬ ಕಾರಣಕ್ಕೆ ಲಾಕ್ ಡೌನ್ ಘೋಷಣೆಯದಾಗ ಕೆ. ಆರ್. ಮಾರುಕಟ್ಟೆಯನ್ನು ಬಂದ್ ಮಾಡಲಾಗಿತ್ತು. ಕಲಾಸಿಪಾಳ್ಯ ಮಾರುಕಟ್ಟೆ ಓಪನ್ ಮಾಡುವ ಕುರಿತು ಇನ್ನೂ ತೀರ್ಮಾನ ಕೈಗೊಂಡಿಲ್ಲ.

TRENDING