Monday, September 28, 2020
Home ಸುದ್ದಿ ಜಾಲ ಒಂದೇ ಸ್ಥಳದಲ್ಲಿ ನೂರಾರು ಶ್ವಾನಗಳ ತಲೆಬುರುಡೆ ಪತ್ತೆ!

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಒಂದೇ ಸ್ಥಳದಲ್ಲಿ ನೂರಾರು ಶ್ವಾನಗಳ ತಲೆಬುರುಡೆ ಪತ್ತೆ!

ನೂರಾರು ಸಂಖ್ಯೆಯಲ್ಲಿ ನಾಯಿಗಳ ತಲೆಬುರುಡೆಗಳು ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನಲ್ಲಿ ಪತ್ತೆಯಾಗಿದ್ದು, ಜನ ಹೌಹಾರಿದ್ದರೆ ಮಾಂಸದ ದಂಧೆ ನಡೆದಿದೆಯೇ ಎಂಬ ಅನುಮಾನ ಮೂಡಿಸಿದೆ.

ಕುರಿ ಮಾಂಸ ಎಂದು ಹೇಳಿ ನಾಯಿ ಮಾಂಸ ಮಾರಾಟ ಮಾಡುತ್ತಿದ್ದಾರಾ ಎಂಬ ಶಂಕೆ ಮೂಡಿದ್ದು ನಾಯಿ ಬುರುಡೆಗಳು ಪತ್ತೆಯಾಗುತ್ತಿದ್ದಂತೆ ಜಿಲ್ಲೆಯ ಜನ ದಿಗ್ಭ್ರಾಂತಗೊಳಗಾಗಿದ್ದಾರೆ.

ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದ ಸಮೀಪದ ಕೊಲ್ಲಿಹಳ್ಳ ಎಂಬ ಪ್ರದೇಶದಲ್ಲಿ ನೂರಾರು ಸಂಖ್ಯೆಯಲ್ಲಿ ನಾಯಿಗಳ ತಲೆಬುರುಡೆಗಳು ಪತ್ತೆಯಾಗಿವೆ. ಮಾಂಸಕ್ಕಾಗಿ ನಾಯಿಗಳನ್ನು ಸಾಗಿಸಲಾಗಿದೆಯೇ ಅಥವಾ ಇದರ ಹಿಂದೆ ಯಾವ ಉದ್ದೇಶ ಇದೆ ಎಂಬುದು ನಿಗೂಢವಾಗಿದೆ.

ಈ ನಿರ್ಜನ ಪ್ರದೇಶದಲ್ಲಲಿ ನಾಯಿಗಳನ್ನು ಬೇರೆ ಕಡೆಯಿಂದ ತಂದು ಸಾಯಿಸಿ ಮಾಂಸವನ್ನು ತೆಗೆದು ಬುರುಡೆಗಳನ್ನು ಅಲ್ಲಿಯೇ ಎಸೆದಿದ್ದಾರೆಯೇ? ಕುರಿ, ಮೇಕೆ ಮಾಂಸದ ಜತೆ ಶ್ವಾನ ಮಾಂಸವನ್ನು ಬೆರಕೆ ಮಾಡಲು ಈ ರೀತಿ ಮಾಡಿರಬಹುದೇ ಎಂಬ ಹಲವು ಅನುಮಾನಗಳು ಸ್ಥಳೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಪ್ರಾಣಿಪ್ರಿಯರ ಆಕ್ರೋಶ: ಶ್ವಾನಗಳ ಮಾರಣ ಹೋಮ ಪ್ರಾಣಿ ಪ್ರಿಯರಲ್ಲಿ ತೀವ್ರ ಆಕ್ರೋಶ ಉಂಟು ಮಾಡಿದೆ. ಪಟ್ಟಣದ ಮಾಂಸ ಪ್ರಿಯರು ನಾಯಿಗಳ ತಲೆಬುರುಡೆ ಕಂಡು ಕಂಗಾಲಾಗಿದ್ದಾರೆ.

ಈ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಸೂಕ್ತ ತನಿಖೆ ನಡೆಸಿ ನಾಯಿಗಳ ಮಾರಾಣ ಹೋಮ ನಡೆಸುತ್ತಿರುವವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

TRENDING