Tuesday, September 22, 2020
Home ಬೆಂಗಳೂರು ಬೆಂಗಳೂರು - ಸೋಲಾಪುರ: ರೋ ರೋ ರೈಲು ಸಂಚಾರಕ್ಕೆ ಸಿಎಂ ಚಾಲನೆ

ಇದೀಗ ಬಂದ ಸುದ್ದಿ

ಡೆಬಿಟ್ / ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಇಲ್ಲಿದೆ...

 ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಬಳಕೆ ಮಾಡುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾಯಿಸುತ್ತಿದೆ. ಈ ನಿಯಮಗಳು ಸೆಪ್ಟೆಂಬರ್...

ಗೋಧಿಗೆ ಕನಿಷ್ಠ ಬೆಂಬಲ ಬೆಲೆ ಏರಿಸಿ ಮೋದಿ...

ನೂತನ ಕೃಷಿ ಮಸೂದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ಇದಕ್ಕೆ ವಿರೋಧ ವ್ಯಕ್ತಪಡಿಸಿ ದೇಶದಾದ್ಯಂತ ರೈತರು ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ.

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಬೆಂಗಳೂರು – ಸೋಲಾಪುರ: ರೋ ರೋ ರೈಲು ಸಂಚಾರಕ್ಕೆ ಸಿಎಂ ಚಾಲನೆ

ಬೆಂಗಳೂರು: ನೈಋತ್ಯ ರೈಲ್ವೇಯ ಮೊದಲ ರೋ-ರೋ ಸೇವೆಗೆ (ನೆಲಮಂಗಲ – ಸೋಲಾಪುರ ನಡುವೆ) ಸಿಎಂ ಯಡಿಯೂರಪ್ಪ ಅವರು ರವಿವಾರ ಹಸಿರು ನಿಶಾನೆ ತೋರಿದರು.

ಈ ಸಂದರ್ಭ ಮಾತನಾಡಿದ ಅವರು, ರಾಜ್ಯದ ರೈಲ್ವೇ ಯೋಜನೆಗಳ ಜಾರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬೆಳಗ್ಗೆ ರೋ- ರೋ ರೈಲು ಸೇವೆಗೆ ವೀಡಿಯೋ ಲಿಂಕ್‌ ಮೂಲಕ ಚಾಲನೆ ನೀಡಿ, ಪ್ರಧಾನಿ ವಿವಿಧ ಸಾರಿಗೆ ಪ್ರಕಾರಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ‘ಮಲ್ಟಿ ಮಾಡೆಲ್‌ ಟ್ರಾನ್ಸ್‌ಪೋರ್ಟ್‌ ಸಿಸ್ಟಮ್‌’ ಬಗ್ಗೆ ನಿರಂತರ ಪ್ರತಿಪಾದಿಸುತ್ತಿದ್ದು, ಅವರ ಆಶಯದ ಫ‌ಲವಾಗಿ ಈ ಸುಧಾರಿತ ಸೇವೆ ಆರಂಭವಾಗಿದೆ ಎಂದರು.

ಈ ವಿಶೇಷ ಯೋಜನೆಯನ್ನು ಮಂಜೂರು ಮಾಡಿದ ಪ್ರಧಾನಿ ಮೋದಿ, ರೈಲ್ವೇ ಸಚಿವ ಪಿಯೂಷ್‌ ಗೋಯೆಲ್‌ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು. ಈ ಹಿಂದೆ ಕೊಂಕಣ್‌ ರೈಲ್ವೇ ಪ್ರದೇಶದಲ್ಲಿ ಸಂಚರಿಸುತ್ತಿದ್ದ ರೋ-ರೋ ಸೇವೆಯನ್ನು ಬೆಂಗಳೂರು ಮತ್ತು ಸೋಲಾಪುರದ ಮಧ್ಯೆ ಆರಂಭಿಸುತ್ತಿರುವುದಕ್ಕಾಗಿ ರೈಲ್ವೇ ಇಲಾಖೆಗೆ ಧನ್ಯವಾದ ಸಲ್ಲಿಸಲಾಗುವುದು ಎಂದು ತಿಳಿಸಿದರು.

ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿಯವರು ರಾಜ್ಯದ ರೈಲ್ವೇ ಯೋಜನೆಗಳ ಸಂಬಂಧ ಕೆಲ ಸಲಹೆಗಳನ್ನು ನೀಡಿದ್ದಾರೆ. ಅದರಂತೆ ರಾಜ್ಯ ಸರಕಾರದಿಂದ ಏನೆಲ್ಲ ಮಾಡಲು ಸಾಧ್ಯವಿದೆಯೋ ಅದನ್ನೆಲ್ಲ ಪ್ರಥಮ ಆದ್ಯತೆ ಮೇರೆಗೆ ಮಾಡಿಕೊಡಲಾಗುವುದು ಎಂದರು.

ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ, ಸಚಿವರಾದ ಅಶೋಕ್‌, ರಮೇಶ್‌ ಜಾರಕಿಹೊಳಿ, ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರ ಗೌಡ ಪಾಟೀಲ್‌, ಶಾಸಕ ನಾರಾಯಣ ಸ್ವಾಮಿ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾರ್ಗವೇ ಏಕೆ?
ಕೃಷಿ ಉತ್ಪನ್ನಗಳಿಂದ ಸಮೃದ್ಧವಾಗಿರುವ ಬೆಂಗಳೂರು ಮತ್ತು ಸೋಲಾಪುರ ನಗರಗಳು ವ್ಯಾಪಾರ ಕೇಂದ್ರಗಳಾಗಿವೆ. ಹೆಚ್ಚಿನ ಸಂಖ್ಯೆಯ ಸರಕು ಸಾಗಣೆ ಈ ಎರಡು ನಗರಗಳ ನಡುವೆ ನಡೆಯುತ್ತದೆ. ಈ ನಗರಗಳ ನಡುವಿನ ರೋ ರೋ ರೈಲು ಸೇವೆಗಳ ಮಾರ್ಗವು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರಗಳ ರಾಜ್ಯಗಳ ಮೂಲಕ ಹಾದುಹೋಗಲು ನಿರ್ಧರಿಸಲಾಗಿದೆ. ಬೆಂಗಳೂರು – ಸೋಲಾಪುರ ರೋರೋ ಸೇವೆಯು ಭಾರತೀಯ ರೈಲ್ವೆಯಲ್ಲಿ ಖಾಸಗಿಯಾಗಿ ಕಾರ್ಯ ನಿರ್ವಹಿಸುವ ಏಕೈಕ ರೈಲು ಸೇವೆಯಾಗಿದೆ.

ಮೊದಲ ರೋರೋ ಕೊಂಕಣ ರೈಲ್ವೇಯಿಂದ
ರೋ-ರೋ ರೈಲು ಸೇವೆಯನ್ನು ಮೊತ್ತಮೊದಲ ಬಾರಿಗೆ ಪರಿಚಯಿಸಿದ್ದು ಕೊಂಕಣ ರೈಲ್ವೇ ಕಾರ್ಪೊರೇಷನ್‌ ಲಿ. (ಕೆಆರ್‌ಸಿಎಲ್‌) ಆಗಿದೆ. ಕರಾವಳಿಯಲ್ಲಿ ಹಾದುಹೋಗುವ ರಸ್ತೆಗಳ‌ಲ್ಲಿ ಸರಕು ಸಾಗಣೆ ತುಂಬಾ ಕಷ್ಟಕರವಾಗಿತ್ತು. ಹಲವು ಅಪಘಾತಗಳಿಗೂ ಇದು ಕಾರಣವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ರೋ-ರೋ ಸೇವೆಯಂತಹ ವಿನೂತನ ಪ್ರಯೋಗಗಳನ್ನು ಕೆಆರ್‌ಸಿಎಲ್‌ ಪರಿಚಯಿಸಿ ಯಶಸ್ವಿಯಾಗಿದೆ.

TRENDING